Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ: ಗಿಳಿವಿಂಡು 4 ನೇ ಮಹಾ...

ಮಂಗಳೂರು ವಿವಿ: ಗಿಳಿವಿಂಡು 4 ನೇ ಮಹಾ ಸಮಾವೇಶ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ9 Nov 2025 6:25 PM IST
share
ಮಂಗಳೂರು ವಿವಿ: ಗಿಳಿವಿಂಡು 4 ನೇ ಮಹಾ ಸಮಾವೇಶ ಉದ್ಘಾಟನೆ

ಕೊಣಾಜೆ: 1968 ರಲ್ಲಿ ಮೊಳಕೆಯೊಡೆದ ಕನ್ನಡದ ಬೀಜ ಎಸ್ ವಿಪಿ ಕನ್ನಡದ ಅಧ್ಯಯನ ಸಂಸ್ಥೆಯಾಗಿ ರೂಪುಗೊಂಡು ಹೆಮ್ಮರವಾಗಿ ಬೆಳೆಯುವುದರೊಂದಿಗೆ ಕನ್ನಡವನ್ನು ಕಟ್ಟುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದೆ. ಏಳು ತಲೆಮಾರುಗಳ ವಿದ್ಯಾರ್ಥಿಗಳು ಈ ಗಿಳಿವಿಂಡು ಸಮಾವೇಶದ ಮೂಲಕ ಕನ್ನಡದ ಮನಸ್ಸುಗಳನ್ಬು ಒಟ್ಟುಗೂಡಿಸಿರುವುದು ಸಂತಸ ತಂದಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ್ ರೈ ಅವರು ಹೇಳಿದರು.

ಅವರು ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ರವಿವಾರ ನಡೆದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಅಧ್ಯಾಪಕ, ಸಿಬ್ಬಂದಿಗಳ ಒಕ್ಕೂಟ ʼಗಿಳಿವಿಂಡು(ರಿ)ʼ ಇದರ ನಾಲ್ಕನೇ ಮಹಾ ಸಮಾವೇಶವನ್ನು ಅವರು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡವನ್ನು ಪುಸ್ತಕ ಹಾಗೂ ತಂತ್ರಜ್ಞಾನದಲ್ಲಿ ಸಮಾನವಾಗಿ ಬಳಸಬೇಕಿದೆ. ತಂತ್ರಜ್ಞಾನ ಯಾವುದೂ ಶಾಶ್ವತವಲ್ಲ.ನಾವು ಅದರ ಗುಲಾಮರಾಗಬಾರದು. ನಮ್ಮ ತಿಳುವಳಿಕೆಯನ್ನು ಬಿಟ್ಟುಕೊಟ್ಟು ಕೃತಕ ಬುದ್ಧಿಮತ್ತೆಗೆ ದಾಸರಾಗದಿರೋಣ. ಕನ್ನಡವನ್ನು ಇಟ್ಟುಕೊಂಡೇ ಎಲ್ಲಾ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಚಾಕಚಕ್ಯತೆ ನಮ್ಮಲಿರಬೇಕು ಎಂದರು.

ಉಳ್ಳವರು ಶಿವಾಲಯ ಮಾಡುವರಯ್ಯ ಎಂದು ಅಂದು ಬಸವಣ್ಣ ಹೇಳಿದ್ದರು. ಆದರೆ ಪ್ರಸ್ತುತ ಉಳ್ಳವರು ಆಂಗ್ಲ ಶಾಲೆಯ ಮಾಡುವರಯ್ಯ ಎಂಬಂತಾಗಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳು ಆಂಗ್ಲ ಮಾಧ್ಯಮ ಶಾಲೆಯಾಗಿ ರೂಪುಗೊಳ್ಳುತ್ತಿದೆ. ಸಂವಹನಕ್ಕೆ ಬೇಕಾದಷ್ಟು ಮಾತ್ರ ಆಂಗ್ಲ ಇರಬೇಕು. ಕನ್ನಡವನ್ಬು ಪ್ರೀತಿಸಿ ಪ್ರೋತ್ಸಾಹಿಸಿ ಬೆಳೆಸುವ ಜವಬ್ಧಾರಿ ನಮ್ಮದಾಗಬೇಕು ಎಂದರು.

ಸಮಾರಂಭ ಅಧ್ಯಕ್ಷತೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ‌.ಎಲ್.ಧರ್ಮ ಅವರು ವಹಿಸಿ ಮಾತನಾಡಿ ಮಂಗಳೂರು ವಿವಿಯ ಸ್ನಾತಕೋತ್ತರ ವಿಭಾಗಗಳು ಒಂದು‌ ಚಿಂತನೆಗೆ ಕಟ್ಟುಬೀಳದೆ ವಿವಿಧ ವಿಷಯಗಳಿಗೆ ತೆರೆದುಕೊಂಡು ಬೆಳೆಯಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಮಂಗಳೂರು ವಿವಿಯ ಕನ್ನಡ ವಿಭಾಗದಲ್ಲಿ ಸೇವೆ ಸಲ್ಲಿಸಿದ ಪ್ರಾಧ್ಯಾಪಕರುಗಳಾದ ಪ್ರೊ ಬಿ.ಎ ವಿವೇಕ ರೈ, ಪ್ರೊ.ಕೆ ಚಿನ್ನಪ್ಪ ಗೌಡ, ಪ್ರೊಅಭಯಕುಮಾರ್, ಪ್ರೊ.ಶಿವರಾಮ ಶೆಟ್ಟಿ, ಪ್ರೊ.ಸೋಮಣ್ಣ, ಡಾ.ನಾಗಪ್ಪ ಗೌಡ, ಡಾ. ಧನಂಜಯ ಕುಂಬ್ಳೆ ಇವರನ್ನು ಸನ್ಮಾನಿಸಲಾಯಿತು.

ಗಿಳಿವಿಂಡುವಿನ ಅಧ್ಯಕ್ಷರಾದ ಪ್ರೊ.ಶಿವರಾಮ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ‌ ಪ್ರೊ.ನಾಗಪ್ಪ ಗೌಡ ಅವರು ವಂದಿಸಿದರು. ಡಾ.ಯಶುಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಡಾ.ಸಬಿತಾ ಬನ್ನಾಡಿ ಅವರ ಉಪನ್ಯಾಸ ಕಾರ್ಯಕ್ರಮ ನಡೆಯಿತು ಮತ್ತು ಗಿಳಿವಿಂಡು ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

"ವಿಶ್ವವಿದ್ಯಾನಿಲಯದಲ್ಲಿ ಋಣಾತ್ಮಕ ಅಂಶಗಳಷ್ಟೇ ಅಲ್ಲ. ಅನೇಕ ಧನಾತ್ಮಕ ಅಂಶಗಳು, ಉತ್ತಮ ಸಂಶೋಧನೆಗಳು ಶೈಕ್ಷಣಿಕ ಚಟುವಟಿಕೆಗಳಾಗುತ್ತಿವೆ. ಸಮಾಜ ಇದನ್ನು ಗಮನಿಸಬೇಕು. ಕನ್ನಡ ವಿಭಾಗದ ವಿದ್ಯಾರ್ಥಿಗಳು ಕಳೆದ ಆರು ದಶಕಗಳಲ್ಲಿ ಅನನ್ಯವಾಗಿ ಬೆಳೆದು ಸಮಾಜಕ್ಕೆ ಆಸ್ತಿಯಾಗಿದ್ದಾರೆ"

ಪ್ರೊ.ಪಿ.ಎಲ್ ಧರ್ಮ, ಕುಲಪತಿಗಳು, ಮಂಗಳೂರು ವಿವಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X