ಕಂಬಳಪದವು: ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರ ಉದ್ಘಾಟನೆ

ಕೊಣಾಜೆ: ಇಲ್ಲಿಗೆ ಸಮೀಪದ ಕಂಬಳಪದವು ಬಳಿ ನೂತನವಾಗಿ ನಿರ್ಮಾಣಗೊಂಡಿರುವ ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥಗಳ ಕೇಂದ್ರವನ್ನು ರಾಜ್ಯ ಸಾರಿಗೆ ಮತ್ತು ಮುಜುರಾಯಿ ಸಚಿವ ರಾಮಲಿಂಗ ರೆಡ್ಡಿ ರವಿವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ದ.ಕ. ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಚಿವ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್. ಗಟ್ಟಿ, ಎಸ್ ಭಂಡಾರಿ, ಸರಕಾರದ ಕಾರ್ಯದರ್ಶಿ(ಸಾರಿಗೆ ಇಲಾಖೆ) ಡಾ.ಎನ್.ವಿ.ಪ್ರಸಾದ್, ಸಾರಿಗೆ ರಸ್ತೆ ಮತ್ತು ಸುರಕ್ಷತೆ ಆಯುಕ್ತ ಎ.ಎಂ.ಯೋಗೀಶ್, ಅಪರ ಸಾರಿಗೆ ಆಯುಕ್ತ ಬಿ.ಪಿ.ಉಮಾಶಂಕರ್, ವಿಭಾಗ ನಿಯಂತ್ರಣ ಅಧಿಕಾರಿ ರಾಜೇಶ್ ಶೆಟ್ಟಿ, ಶಿವಮೊಗ್ಗದ ಜಂಟಿ ಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್, ದ.ಕ. ಉಪ ಸಾರಿಗೆ ಆಯುಕ್ತ ಶ್ರೀಧರ ಮಲ್ನಾಡ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್. ವಿಶ್ವನಾಥ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್, ಅಕ್ರಮ-ಸಕ್ರಮ ಸಮಿತಿಯ ಚಂದ್ರಹಾಸ್ ಕರ್ಕೇರ, ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭ ಗ್ರಾಮ ಆಡಳಿತಾಧಿಕಾರಿಗಳಿಗೆ ಸರಕಾರದ ವತಿಯಿಂದ ಲ್ಯಾಪ್ ಟಾಪ್ ಗಳನ್ನು ಸಚಿವರು ಸಾಂಕೇತಿಕವಾಗಿ ವಿತರಿಸಿದರು.
ಅಪರ ಸಾರಿಗೆ ಆಯುಕ್ತದ ಮಲ್ಲಿಕಾರ್ಜುನ ಸ್ವಾಗತಿಸಿದರು. ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ರಫೀಕ್ ವಂದಿಸಿದರು. ಅರ್.ಜೆ.ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.





