Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠ...

ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ: ಜುಬಿನ್ ಮೊಹಪಾತ್ರ

ಪುತ್ತೂರಿನಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ26 Jan 2024 4:20 PM IST
share
ಭಾರತ ಸಂವಿಧಾನ ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನ: ಜುಬಿನ್ ಮೊಹಪಾತ್ರ

ಪುತ್ತೂರು: ಗಣರಾಜ್ಯೋತ್ಸವವು ಭಾರತೀಯರಾದ ನಾವು ನಮ್ಮ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡ ಐತಿಹಾಸಿಕ ದಿನವಾಗಿದ್ದು, ನಮ್ಮ ಸಂವಿಧಾನವು ವಿಶ್ವದ ಅತೀ ಶ್ರೇಷ್ಠ ಸಂವಿಧಾನ ಎಂದೆಣಿಸಿಕೊಂಡಿದೆ. ಸಂವಿಧಾನದ ಆಶಯವನ್ನು ಬಲಪಡಿಸುವ ಕೆಲಸ ನಮ್ಮಿಂದಾಗಬೇಕು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಅಭಿಪ್ರಾಯಪಟ್ಟರು.

ಶುಕ್ರವಾರ ಕೊಂಬೆಟ್ಟು ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಅವರು ಸಂದೇಶ ನೀಡಿದರು.

ನಮ್ಮ ಸಂವಿಧಾನದಲ್ಲಿ ಎಲ್ಲಾ ಜನರ ಆಶೋತ್ತರಗಳ ಅಂಶಗಳ ಜತೆಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳಿವೆ. ಸರ್ಕಾರಕ್ಕೆ ನೀತಿ ನಿರ್ದೇಶನವಿದೆ. ಸಂವಿಧಾನದ ಆಶಯದಂತೆ ಎಲ್ಲರೂ ಭಾತೃತ್ವದಿಂದ ಬದುಕಬೇಕು ಎಂದರು. ಸಂವಿಧಾನದ ಪೀಠಿಕೆಯನ್ನು ಯುವಸಮುದಾಯ ಓದಿ ಅರ್ಥೈಸಿಕೊಳ್ಳಬೇಕು. ಸಂಬಂಧ, ಭಾತೃತ್ವ, ಸಮಾನತೆಯ ಬದುಕಿನೊಂದಿಗೆ ದೇಶದ ಅಭಿವೃದ್ಧಿಗಾಗಿ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ, ಜಗತ್ತಿನಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರವಾದ ಭಾರತವು ಸಮಾನತೆ, ನ್ಯಾಯಪರತೆ ಮತ್ತು ಸಹೋದರತೆಯ ಆಧಾರಿತ ದೇಶವಾಗಿದ್ದು, ಸರ್ವಧರ್ಮ, ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಜನರು ತಮ್ಮ ಹಕ್ಕು ಕರ್ತವ್ಯಗಳನ್ನು ಪಾಲಿಸುವುದರ ಜತೆಗೆ ದೇಶದ ಶಿಸ್ತನ್ನು ಉಳಿಸಕೊಳ್ಳಬೇಕಾಗಿದೆ. ನೈತಿಕತೆ ಮತ್ತು ಮಾನವೀಯತೆಯ ಸಮಾಜವನ್ನು ಕಟ್ಟಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಕ್ರೀಡಾ ಸಾಧಕ ವಿದ್ಯಾರ್ಥಿಗಳಾದ ಕೀರ್ತಿ, ಸಿಂಚನಾ, ದನ್ವಿತ್, ಸ್ವೀಕೃತ್ ಆನಂದ್ ತ್ರಿಶೂಲ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಆಕರ್ಷಕ ಪಥಸಂಚಲನ; ಗಣರಾಜ್ಯೋತ್ಸವ ಪ್ರಯುಕ್ತ ಆಕರ್ಷಕ ಪಥಸಂಚಲನ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅತ್ಯುತ್ತಮ ಪಥಸಂಚಲನ ನಿರೂಪಿಸಿದ ಪೊಲೀಸ್ ಇಲಾಖೆ (ಪ್ರಥಮ), ಸಂತ ಫಿಲೋಮಿನಾ ಎನ್‍ಸಿಸಿ ಕೆಡೆಟ್ (ದ್ವಿತೀಯ) ಹಾಗೂ ವಿವೇಕಾನಂದ ಪ್ರಥಮದರ್ಜೆ ಕಾಲೇಜು ಎನ್ ಸಿಸಿ ತೃತೀಯ0 ಬಹುಮಾನ ಪಡೆದುಕೊಂಡವು. ಸ್ತಬ್ಧಚಿತ್ರದಲ್ಲಿ ಅರಣ್ಯ ಇಲಾಖೆ ಪ್ರಥಮ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ್ವಿತೀಯ ಹಾಗೂ ಮೆಸ್ಕಾಂ ಇಲಾಖೆ ತೃತೀಯ ಬಹುಮಾನ ಪಡೆದುಕೊಂಡರು.

ವೇದಿಕೆಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಶೀಲ್ದಾರ್ ಜೆ. ಶಿವಶಕರ, ನಗರಸಭಾ ಸದಸ್ಯ ಪಿ.ಜಿ.ಜಗನ್ನೀವಾಸ ರಾವ್, ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ಸರ್ಕಲ್ ಇನ್ಸ್‍ಪೆಕ್ಟರ್ ಸುನೀಲ್ ಇದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ವಂದಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಭವ್ಯಾ ವೇಣುಗೋಪಾಲ್ ನಿರೂಪಿಸಿದರು.

ಪುತ್ತೂರಿನ ಕಿಲ್ಲೆ ಮೈದಾನದಿಂದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಮರ್ ಜವಾನ್ ಜ್ಯೋತಿಗೆ ಪುಷ್ಪನಮನ ಸಲ್ಲಿಸಿದ ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ ಮೆರವಣಿಗೆಗೆ ಚಾಲನೆ ನೀಡಿದರು. ಪುತ್ತೂರಿನ ನಗರಸಭೆ, ತಾಲೂಕುಪಂಚಾಯತ್, ಅರಣ್ಯ ಇಲಾಖೆ, ಕೃಷಿ ಇಲಾಖೆ, ಸಿಡಿಪಿಒ ಇಲಾಖೆ, ಯುವಜನ ಮತ್ತು ಕ್ರೀಡಾ ಇಲಾಖೆ, ತೋಟಗಾರಿಕೆ ಇಲಾಖೆ, ಮೆಸ್ಕಾಂ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡವು. ಕಿಲ್ಲೆ ಮೈದಾನದಿಂದ ಹೊರಟ ಮೆರವಣಿಗೆ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಸಂಪನ್ನಗೊಂಡಿತು. ಕೊಂಬೆಟ್ಟು ಕ್ರೀಡಾಂಗಣದಲ್ಲಿ ಸಭಾ ಕಾರ್ಯಕ್ರಮದ ಬಳಿಕ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X