BITಯಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ ಕುರಿತು ಸಂವಾದ

ಮಂಗಳೂರು, ಡಿ. 24: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (BIT), ಮಂಗಳೂರು, IEEE BIT ವಿದ್ಯಾರ್ಥಿ ವಿಭಾಗದ ಜಂಟಿ ಆಶ್ರಯದಲ್ಲಿ ಫಲಿತಾಂಶ ಆಧಾರಿತ ಶಿಕ್ಷಣ - Outcome Based Education (OBE) ತತ್ವಶಾಸ್ತ್ರದ ಕುರಿತು ಸಂವಾದ ಕಾರ್ಯಕ್ರಮವನ್ನು ಸೋಮವಾರ ಆಯೋಜಿಸಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಜಿರೆಯ ಎಸ್‌ಡಿಎಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಸಂದೀಪ್ ಆರ್. ಅವರು ಮಾತನಾಡಿ ಒಬಿಇ ತತ್ವಶಾಸ್ತ್ರ, ಅದರ ಅನುಷ್ಠಾನ ಮಾಡುವ ವಿಧಾನ ಹಾಗೂ ಉತ್ತಮ ಅಭ್ಯಾಸಗಳ ಕುರಿತು ಪ್ರಾಯೋಗಿಕ ಉದಾಹರಣೆಗಳೊಂದಿಗೆ ಮಾಹಿತಿ ನೀಡಿದರು.
BITಯ ಪ್ರಾಂಶುಪಾಲ ಡಾ. ಕಮಲಕಣ್ಣನ್ ಅವರು, ವಿದ್ಯಾರ್ಥಿ ಕೇಂದ್ರಿತ ಕಲಿಕೆ, ನಿರಂತರ ಸುಧಾರಣೆ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿ ಫಲಿತಾಂಶ ಆಧಾರಿತ ಶಿಕ್ಷಣದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾರೀಸ್ ಇನ್ಸ್ಟಿಟ್ಯೂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ಸ್‌ನ ಇನ್ನೋಳಿಯ ಕ್ಯಾಂಪಸ್ ನಿರ್ದೇಶಕ ಡಾ. ಎಸ್. ಐ. ಮಂಜುರ್ ಬಾಷಾ, ಮಾನ್ಯತೆಯ ಮಾನದಂಡಗಳು ಹಾಗೂ ಉದ್ಯಮದ ಅಗತ್ಯಗಳಿಗೆ ತಕ್ಕಂತೆ ಬೋಧನೆ–ಕಲಿಕಾ ಪ್ರಕ್ರಿಯೆಗಳನ್ನು ಅಳೆಯಬಹುದಾದ ಫಲಿತಾಂಶಗಳೊಂದಿಗೆ ಜೋಡಿಸುವ ಅಗತ್ಯವಿದೆ ಎಂದು ಹೇಳಿದರು.
ಉಪನ್ಯಾಸಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಿದರು. ಕಾರ್ಯಕ್ರಮವು ಸಂವಾದಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದು ಉಪನ್ಯಾಸಕರಿಗೆ ಫಲಿತಾಂಶ ಆಧಾರಿತ ಶಿಕ್ಷಣದ ಅರಿವು ಹೆಚ್ಚಿಸುವುದರ ಜೊತೆಗೆ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಅದರ ಪರಿಣಾಮಕಾರಿ ಅನುಷ್ಠಾನದ ಮಾಹಿತಿ ಒದಗಿಸಿತು.
ಕಾರ್ಯಕ್ರಮದಲ್ಲಿ ಡಾ. ಆಮಿರ್ ಬಾಷಾ ಸ್ವಾಗತ ಭಾಷಣ ಮಾಡಿದರು. BITಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಅಬ್ದುಲ್ಲಾ ಗುಬ್ಬಿ ವಂದಿಸಿದರು.







