Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಲ್ಲಿ ಅಂತರರಾಷ್ಟ್ರೀಯ...

ಮಂಗಳೂರು ವಿವಿಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ, ಮ್ಯಾಗ್ನಮ್‌ ಫೆಸ್ಟ್‌ ಉದ್ಘಾಟನೆ

ಉನ್ನತ ಶಿಕ್ಷಣದಲ್ಲಿ ಅಂತರ್ ಶಿಸ್ತೀಯ ಅಧ್ಯಯನಕ್ಕೆ ಆದ್ಯತೆ ಅಗತ್ಯ: ಪ್ರೊ.ಎಸ್‌. ಆರ್.ನಿರಂಜನ‌

ವಾರ್ತಾಭಾರತಿವಾರ್ತಾಭಾರತಿ29 May 2025 6:49 PM IST
share
ಮಂಗಳೂರು ವಿವಿಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ, ಮ್ಯಾಗ್ನಮ್‌ ಫೆಸ್ಟ್‌ ಉದ್ಘಾಟನೆ

ಕೊಣಾಜೆ: ಇಂದಿನ ಸ್ಪರ್ಧಾತ್ಮಕವಾದ ಕಾಲಘಟ್ಟದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಂತರ್ ಶಿಸ್ತೀಯ ಅಧ್ಯಯನದೊಂದಿಗೆ ಕೌಶಲಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಅಗತ್ಯವಿದೆ ಎಂದು ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಕೌನ್ಸಿಲ್‌ನ ಉಪಾಧ್ಯಕ್ಷರಾದ ಪ್ರೊ.ಎಸ್‌.ಆರ್.ನಿರಂಜನ‌ ಅವರು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಾಣಿಜ್ಯ ವಿಭಾಗದ ಆಶ್ರಯದಲ್ಲಿ‌ 'ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ-ಚಾಲಿತ ಜಾಗತಿಕ ವಿದ್ಯಮಾನಗಳು ಎಂಬ ವಿಷಯದ ಕುರಿತು ಬ್ಯಾಂಕ್‌ ಆಫ್‌ ಬರೋಡ ಚೇರ್‌, ಕೆನರಾ ಬ್ಯಾಂಕ್‌ ಚೇರ್‌ ಮತ್ತು ಯೂನಿಯನ್‌ ಬ್ಯಾಂಕ್‌ ಚೇರ್‌ ಸಂಯೋಜನೆಯೊಂದಿಗೆ ಎರಡು ದಿನಗಳ ಕಾಲ ನಡೆಯುವ ಅಂತರರಾಷ್ಟ್ರೀಯ ಸಮ್ಮೇಳನವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ತಂತ್ರಜ್ಞಾನ ವಿಜ್ಞಾನ ಬೆಳೆಯುತ್ತಿದ್ದಂತೆಯೇ ಅನೇಕ ಸವಾಲುಗಳೂ ಎದುರಾಗುತ್ತಿವೆ. ಎಲ್ಲಾ ರಂಗದಲ್ಲೂ ಕೃತಕ ಬುದ್ಧಿಮತ್ತೆಯು ಪ್ರಮುಖ ಪಾತ್ರವಹಿಸುತ್ತಿದೆ.‌ ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಇದರ‌ ಮಹತ್ವವನ್ನು ಅರ್ಥ ಮಾಡಿಕೊಳ್ಳಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಕೃತಕ ಬುದ್ದಿಮತ್ತೆಯಂತಹ ಆಧುನಿಕತೆಯ ಅರಿವನ್ನು ಅರಿತುಕೊಂಡರೆ ಮಾತ್ರ ಇಂದು ಬದುಕಿನಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಜ್ಯೋತಿ ಲ್ಯಾಬ್ಸ್ ಲಿಮಿಟೆಡ್‌ ಹಾಗೂ ಎಪ್‌.ಐ.ಸಿ.ಸಿ.ಐ.ನ ಮಾಜಿ ಎಂ.ಡಿ.ಸಿ.ಎ.ಕೆ. ಉಲ್ಲಾಸ್‌ ಕಾಮತ್‌ ಭಾಗವಹಿಸಿ ಮಾತನಾಡಿ, ಇಂದು ತಂತ್ರಜ್ಞಾನ ಹಾಗೂ ಕೃತಕ ಬುದ್ದಿಮತ್ತೆಯ ಕಾಲವಾಗಿದೆ. ಟೆಕ್ನಾಲಜಿ ಇಲ್ಲದೆ ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ವ್ಯವಹಾರ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರ ಮುನ್ನಡೆಯಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ವಹಿಸಿ ಮಾತನಾಡಿ, ಕೃತಕ ಬುದ್ಧಿಮತ್ತೆಯು ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಆವರಿಸುತ್ತಿದೆ ಮತ್ತು ಪರ್ಯಾಯ ಶಕ್ತಿಯಾಗಿ ಬೆಳೆಯುತ್ತಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಈ ಎಲ್ಲಾ ಸವಾಲುಗಳು ಅರ್ಥ ಮಾಡಿಕೊಂಡು ಅದಕ್ಕೆ ಪೂರಕವಾಗಿ ಬೆಳೆಯಬೇಕು. ಆಗ ಅವಕಾಶಗಳ ಬಾಗಿಲು ತೆರೆಯುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಲಸಚಿವರಾದ ಕೆ.ರಾಜು ಮೊಗವೀರ, ಚಾರ್ಟೆಡ್ ಅಕೌಂಟೆಟ್‌ ಸಿ.ಎ.ನಿತಿನ್‌ ಜೆ.ಶೆಟ್ಟಿ, ಇನ್ಫೋಸಿಸ್ ಮಂಗಳೂರು ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರು ಹಾಗೂ ಅಧ್ಯಕ್ಷರಾದ ವಾಸುದೇವ ಕಾಮತ್‌, ಹಾಂಕಾಂಗ್‌ನ ಡಾಟ ಸೈಂಟಿಸ್ಟ್‌ ಕ್ರಿಸ್‌ ಲೆವಿಸ್‌, ಜಿಂಬಾಬ್ವೆ ದೇಶದ ತಜ್ಞರಾದ ವಿನ್ನಿ ಸಿಬೊಂಗೆಲೆ ಬಾಜಿಲ್ಲಾ, ಪ್ರಾಧ್ಯಾಪಕರಾದ ಪ್ರೊ.ಮುನಿರಾಜು, ಪ್ರೊ.ಈಶ್ವರ ಪಿ,, ಪ್ರೊ.ಪರಮೇಶ್ವರ್‌, ಪ್ರೊ.ವೇದವ್‌, ಸ್ಟಾಪ್ ಕಾರ್ಡಿನೇಟರ್ ಗುರುರಾಜ್ ಬಿ., ವೈಶಾಲಿ ಹಾಗೂ ವಿಭಾಗದ ವಿದ್ಯಾರ್ಥಿ ಮುಖಂಡರು ಉಪಸ್ಥಿತರಿದ್ದರು.

ವಿಭಾಗದ ಮುಖ್ಯಸ್ಥರಾದ ಡಾ.ಪ್ರೀತಿ ಕೀರ್ತಿ ಡಿಸೋಜ ಅವರು ಸ್ವಾಗತಿಸಿದರು. ಸ್ಟಾಪ್ ಕಾರ್ಡಿನೇಟರ್ ವೈಶಾಲಿ ಅವರು ವಂದಿಸಿದರು.

ಇಂಟಿಗ್ರೇಟಿವ್‌ ಕಾಮರ್ಸ್ ಐ 5 ಲ್ಯಾಬ್‌ ಉದ್ಘಾಟನೆ :

ವಿದ್ಯಾಥಿಗಳು ಮತ್ತು ಸಂಶೋಧಕರಿಗೆ ಕಲಿಕೆ, ಜ್ಞಾನರ್ಜನೆಗೆ ಅನುಕೂಲವಾಗುವಂತೆ ಪ್ರಚಲಿತ ವಿದ್ಯಮಾನ, ಹೊಸ ಮಾದರಿಗಳು, ಕೃತಕ ಬುದ್ದಿಮತ್ತೆ ಇತ್ಯಾದಿ ಹೊಸ ಅನ್ವೇಷಣೆಗೆ ನವೀನ ಮಾದರಿಯ ಕಾಮರ್ಸ್ ಐ 5 ಲ್ಯಾಬ್ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಆರಂಭಗೊಂಡಿದ್ದು, ಇದರ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ನೆರವೇರಿಸಿದರು.

ಉದ್ಘಾಟನೆ ಬಳಿಕ ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ದಿಮತ್ತೆಯ ಜವಾಬ್ದಾರಿ ಎಂಬ ವಿಷಯದ ಕುರಿತು ಪ್ಯಾನಲಿಸ್ಟ್ ಚರ್ಚೆ ನಡೆಯಿತು. ಪ್ಯಾನಲಿಸ್ಟ್ ಗಳಾಗಿ ಇನ್ಫೋಸಿಸ್ ಮಂಗಳೂರು ಅಭಿವೃದ್ಧಿ ಕೇಂದ್ರದ ಮುಖ್ಯಸ್ಥರು ಮತ್ತು ಅಧ್ಯಕ್ಷರಾದ ವಾಸುದೇವ ಕಾಮತ್‌, ಜಿಂಬಾಬ್ವೆ ದೇಶದ ತಜ್ಞರಾದ ವಿನ್ನಿ ಸಿಬೊಂಗೆಲೆ ಬಾಜಿಲ್ಲಾ, ಹಾಂಕಾಂಗ್‌ನ ಡಾಟ ಸೈಂಟಿಸ್ಟ್‌ ಕ್ರಿಸ್‌ ಲೆವಿಸ್‌, ಮತ್ತು ಡಾ.ಸುರೇಖಾ ಅನವಳ್ಳಿರವರು ವಿಷಯದ ಕುರಿತು ಮಾತನಾಡಿದರು. ಪ್ರೊ.ಪರಮೇಶ್ವರ್‌ ನಿರ್ವಹಿಸಿದರು. ವಿವಿದ ಟೆಕ್ನಿಕಲ್ ಷೆಶನ್ ನ ಅಧ್ಯಕ್ಷರಾಗಿ ಪ್ರೊ.ವೈ.ಮುನಿರಾಜು, ಪ್ರೊ.ಈಶ್ವರ ಪಿ., ಪ್ರೊ.ವೇದವ ಪಿ., ಪ್ರೊ ಪರಮೇಶ್ವರ್‌ ಮತ್ತು ಡಾ.ಪ್ರೀತಿ ಕೀರ್ತಿ ಡಿಸೋಜ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X