ಕಬ್ಬಿಣದ ಶೀಟ್ ಕಳವು : ಆರೋಪಿ ಸೆರೆ

ಮಂಗಳೂರು, ಸೆ. 14: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳುವಾಯಿ ಮತ್ತು ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಜಾಕ್ ಮತ್ತು ಪೈಪ್‌ಗಳನ್ನು ಕಳವು ಮಾಡಿದ ಆರೋಪಿ ತೋಡಾರಿನ ಸಾಹಿಲ್ (21) ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಯಿಂದ ಕಳವುಗೈಯಲಾಗಿದ್ದ 2.50 ಲಕ್ಷ ರೂ. ಮೌಲ್ಯದ ಶೀಟ್, ಜಾಕ್, ಪೈಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





