Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಮುವಾದಿಗಳ ತಂತ್ರಗಳನ್ನು ತಿಳಿಯದೇ...

ಕೋಮುವಾದಿಗಳ ತಂತ್ರಗಳನ್ನು ತಿಳಿಯದೇ ಅವರನ್ನು ಎದುರಿಸಲು ಸಾಧ್ಯವಿಲ್ಲ: ಸಂತೋಷ್ ಬಜಾಲ್

ವಾರ್ತಾಭಾರತಿವಾರ್ತಾಭಾರತಿ27 Jun 2025 12:25 PM IST
share
ಕೋಮುವಾದಿಗಳ ತಂತ್ರಗಳನ್ನು ತಿಳಿಯದೇ ಅವರನ್ನು ಎದುರಿಸಲು ಸಾಧ್ಯವಿಲ್ಲ: ಸಂತೋಷ್ ಬಜಾಲ್

ರಾಜಕೀಯ ಅಧಿಕಾರಕ್ಕಾಗಿ ಬಿಜೆಪಿ ಸಂಘಪರಿವಾರ ಹಿಂದೂ ಸಮುದಾಯವನ್ನು ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯದ ವಿರುದ್ಧ ಎತ್ತಿಕಟ್ಟುವುದು ಇವರ ವಿಭಜನೆಯ ರಾಜಕಾರಣದ ಹಿಡೆನ್ ಅಜೆಂಡಾವನ್ನು ಅರ್ಥ ಮಾಡಿಕೊಳ್ಳಬೇಕು. ನಮ್ಮ ನಡುವೆ ಇರುವ ಕೋಮುವಾದಿಗಳ ತಂತ್ರಗಳನ್ನು ಅವರ ಉದ್ದೇಶಗಳನ್ನು ಅರಿಯದೆ ಹೋದರೆ ಅದನ್ನು ಎದುರಿಸಲು ಅಸಾಧ್ಯ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಹೇಳಿದ್ದಾರೆ.

ಗುರುವಾರ ಕೊಂಚಾಡಿಯಲ್ಲಿ ಡಿವೈಎಫ್ಐ ಆಯೋಜಿಸಿದ ಕೋಮುವಾದಿ ವಿರೋಧಿ ವಾರಾಚರಣೆ ಸೌಹಾರ್ದ ಸಂಗಮ ಎಂಬ ಕಾರ್ಯಕ್ರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೋಮುವಾದಿ ಸಂಘಟನೆಗಳು ಹಿಂದುತ್ವದ ಹೆಸರಿನಲ್ಲಿ ಒಂದು ಸಮುದಾಯವನ್ನು ಪರಸ್ಪರ ಎತ್ತಿಕಟ್ಟುವ, ದ್ವೇಷ ಸಾಧಿಸುವ ಮನಸ್ಥಿತಿಯನ್ನು ಬೆಳೆಸುತ್ತಾ ಬಂದ ಪರಿಣಾಮವಾಗಿ ಒಂದು ಕಾಲಕ್ಕೆ ಪ್ರೀತಿ ಸೌಹಾರ್ದತೆಯಿಂದ ಬದುಕುತ್ತಿದ್ದ ಮನಸ್ಸುಗಳು ಇಂದು ಪರಸ್ಪರ ಹೊಡೆದಾಡುವ ವಾತಾವರಣವನ್ನು ನಿರ್ಮಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಈವರೆಗೂ ನಡೆದ ಮತೀಯ ಸಂಘರ್ಷಗಳನ್ನು ಒಮ್ಮೆ ತೆಗೆದು ನೋಡಿದರೆ ಈ ಎಲ್ಲಾ ಗಲಭೆಗಳನ್ನು ಪ್ರಾರಂಭಿಸಿರುವುದರ ಹಿಂದೆ ಬಿಜೆಪಿ, ಸಂಘಪರಿವಾರ ಕೈವಾಡ ಅಡಗಿದೆ. ಅವರು ಹುಟ್ಟು ಹಾಕಿದ ಮತೀಯ ಸಂಘರ್ಷಗಳಿಗೆ ಬಡವರ ಮನೆಯ ಮಕ್ಕಳು ಬೀದಿ ಹೆಣವಾಗುವ ಅಥವಾ ಜೈಲು ಸೇರುವಂತಾಗಿದೆ ಎಂದರು.

ಇತ್ತೀಚೆಗೆ ನಡೆದ ಸರಣಿ ಹತ್ಯೆಗಳು ಒಂದು ಕಡೆ ಜಿಲ್ಲೆಯ ಜನರ ನಡುವೆ ಭಯದ ವಾತಾವರಣ ನಿರ್ಮಾಣಗೊಂಡರೆ ಮತ್ತೊಂದೆಡೆ ಹಿಂದುಳಿದ ವರ್ಗದ ಯುವಕರನ್ನು ಕ್ರಿಮಿನಲ್ ಗಳನ್ನಾಗಿಸುತ್ತಿರುವುದು ಬಹಳ ಅಪಾಯಕಾರಿ ಬೆಳವಣೆಗೆ. ಮೊದಲು ಸಂಘಪರಿವಾರ ಸೃಷ್ಟಿಸಲು ಹೊರಟ ಮತೀಯ ರಾಜಕಾರಣವನ್ನು ಅರ್ಥಮಾಡಿಕೊಂಡು ಅದರ ಹಿಂದೆ ಅಡಗಿರುವ ರಾಜಕಾರಣವನ್ನು ಬಯಲುಗೊಳಿಸಬೇಕು. ಹೆಚ್ಚು ಹೆಚ್ಚು ಸೌಹಾರ್ದ ಬೆಸೆಯುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶಾಂತಿ ಸಾಮರಸ್ಯವನ್ನು ಮರುಸ್ಥಾಪಿಸುವಂತಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮದರ್ ತೆರೆಸಾ ವಿಚಾರ ವೇದಿಕೆಯ ಟೋನಿ ಪಿಂಟೋ, ಕಾರ್ಮಿಕ ಮುಖಂಡ ರವಿಚಂದ್ರ, ಡಿವೈಎಫ್ಐ ನಗರ ಕಾರ್ಯದರ್ಶಿ ನವೀನ್ ಕೊಂಚಾಡಿ, ನಿತಿನ್ ಬಂಗೇರ, ಪ್ರವೀಣ್ ಕೊಂಚಾಡಿ, ವೆಂಕಟೇಶ್, ಅಡ್ವಕೇಟ್ ಸುನಂದಾ ಕೊಂಚಾಡಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X