CM ಸಿದ್ದರಾಮಯ್ಯರನ್ನು ಭೇಟಿ ಮಾಡಿ ಶುಭಹಾರೈಸಿದ ಐವನ್ ಡಿʼಸೋಜಾ

ಮಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘ ಕಾಲದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಶಾಸಕ ಐವನ್ ಡಿʼಸೋಜಾ ಅಭಿನಂದನೆ ಸಲ್ಲಿಸಿದರು.
ಕರ್ನಾಟಕದಲ್ಲಿ 16 ಬಜೆಟ್‌ಗಳನ್ನು ಮಂಡಿಸುವ ಮೂಲಕ ರಾಜ್ಯದ ಜನರಿಗೆ ಹೊಸ ಆಡಳಿತಕ್ಕೆ ಹೊಸ ದಿಸೆಯನ್ನು ತೋರಿಸಿ, ರಾಜ್ಯಭಾರವನ್ನು ನಡೆಸುವುದು ಅತ್ಯಂತ ಕಠಿಣ ಕೆಲಸ. ಅದರೂ, ಏಲ್ಲರನ್ನೂ ವಿಶ್ವಾಸವನ್ನು ತೆಗೆದುಕೊಂಡು 16 ಬಜೆಟ್ ಮಂಡನೆ ಮಾಡುವ ಮೂಲಕ ದೇಶದಲ್ಲಿಯೇ ಅತ್ಯಂತ ಹೆಚ್ಚು ಬಜೆಟ್ ಮಂಡನೆ ಮಾಡಿದಂತಹ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಒಳ್ಳೆಯ ಆಡಳಿತ ನಡೆಸುವಂತೆ ದೇವರು ಅವರಿಗೆ ಅಯುಷ್ಯ–ಆರೋಗ್ಯ ಕರುಣಿಸಲಿ ಎಂದು ಐವನ್ ಡಿʼಸೋಜಾ ತಿಳಿಸಿದರು.
ಪಂಚ ಗ್ಯಾರಂಟಿಗಳ ಮೂಲಕ ದೇಶದಲ್ಲಿಯೇ ಆರುವರೆ ಕೋಟಿಗೂ ಅಧಿಕ ಜನರ ಪ್ರೀತಿ-ವಿಶ್ವಾಸವನ್ನು ಗಳಿಸಿ, ಒಂದಲ್ಲ ಒಂದು ಯೋಜನೆಗಳನ್ನು ತಲುಪಿಸುವ ಮೂಲಕ ಭ್ರಷ್ಠಾಚಾರ ರಹಿತ ಆಡಳಿತ ಮಾಡುವ ಮೂಲಕ ಪ್ರಮಾಣಿಕ ಪ್ರಯತ್ನವನ್ನು ಮಾಡಿದ್ದಾರೆ. ಸಮಾಜದ ಎಲ್ಲಾ ವರ್ಗಗಳ ಜನರ ವಿಶ್ವಾಸವನ್ನು ಗಳಿಸಿ, ಅತ್ಯಂತ ಪ್ರಮಾಣಿಕ ಆಡಳಿತಗಾರ ಎಂದು ಹೆಸರುವಾಸಿಯಾಗಿರುವ ಸಿದ್ಧರಾಮಯ್ಯನವರು ನಮ್ಮ ರಾಜ್ಯದ ಮುಖ್ಯ ಮಂತ್ರಿಯಾಗಿರುವುದು ಕಾಂಗ್ರೆಸ್ ಪಕ್ಷದ ಹೆಮ್ಮೆಯ ವಿಚಾರವಾಗಿದೆ. ಕಾಂಗ್ರೆಸ್ ಪಕ್ಷ ಅತ್ಯಂತ ಹರ್ಷದಿಂದ ಅವರ ಸೇವೆಯನ್ನು ಸ್ವಾಗತ ಮಾಡುತ್ತೇವೆ ಎಂದು ಐವನ್ ಡಿʼಸೋಜಾ ತಿಳಿಸಿದರು.
ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿದ್ದರು.







