ಜ.13: ಜಮೀಯ್ಯತುಲ್ ಫಲಾಹ್‌ನಿಂದ ಚೈತನ್ಯ ಚಿಲುಮೆ ಕಾರ್ಯಾಗಾರ

ಬಂಟ್ವಾಳ: ಜಮಿಯ್ಯತುಲ್ ಫಲಾಹ್ ಬಂಟ್ವಾಳ ಘಟಕದ ವತಿಯಿಂದ ಎಸೆಸ್ಸೆಲ್ಸಿ ವಿದ್ಯಾರ್ಥಿಗಳ ವಿಷಯಾಧಾರಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮ ಱಚೈತನ್ಯ ಚಿಲುಮೆ-2026 ಕಾರ್ಯಾಗಾರೞ ಜ.13ರಂದು ಬೆಳಗ್ಗೆ 9:30ಕ್ಕೆ ಲಯನ್ಸ್ ಸೇವಾ ಮಂದಿರ ಬಿ.ಸಿ.ರೋಡ್‌ನಲ್ಲಿ ನಡೆಯಲಿದೆ.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ಉದ್ಘಾಟಿಸಲಿದ್ದಾರೆ. ಜಮಿಯ್ಯತುಲ್ ಫಲಾಹ್ ಬಂಟ್ವಾಳ ಘಟಕ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಕ್ಷಕ ಶೇಕ್ ಆದಂ ಸಾಹೇಬ್, ಸಹಶಿಕ್ಷಕ ಪರಮೇಶ್ವರ ಹೆಗಡೆ, ಶಿಕ್ಷಕ ರೋಶನ್ ಅಲೆಕ್ಸಾಂಡರ್ ಪಿಂಟೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಜೀವ ಸದಸ್ಯರಾದ ಹಾಜಿ ಅಹ್ಮದ್ ಖಾನ್ ಕೊಡಾಜೆ, ಸಲೀಂ ಅಲ್ತಾಫ್ ಡೈಮಂಡ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





