Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.17-18: ತಣ್ಣೀರುಬಾವಿ ಬ್ಲೂ ಪ್ಲ್ಯಾಗ್...

ಜ.17-18: ತಣ್ಣೀರುಬಾವಿ ಬ್ಲೂ ಪ್ಲ್ಯಾಗ್ ಬೀಚ್ ಕಾರ್ಯಕ್ರಮ; ಮಂಗಳೂರು ನಗರ ಪೊಲೀಸ್‌ನಿಂದ ಸಂಚಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Jan 2026 10:53 PM IST
share
ಜ.17-18: ತಣ್ಣೀರುಬಾವಿ ಬ್ಲೂ ಪ್ಲ್ಯಾಗ್ ಬೀಚ್ ಕಾರ್ಯಕ್ರಮ; ಮಂಗಳೂರು ನಗರ ಪೊಲೀಸ್‌ನಿಂದ ಸಂಚಾರಿ ಸೂಚನೆ

ಮಂಗಳೂರು, ಜ.17: ಕರಾವಳಿ ಉತ್ಸವದ ಪ್ರಯುಕ್ತ ತಣ್ಣೀರುಬಾವಿ ಬ್ಲೂಪ್ಲ್ಯಾಗ್ ಬೀಚ್‌ನಲ್ಲಿ ಜ.17, 18ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಇದರಲ್ಲಿ ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ಅಪರಾಹ್ನ 3ರ ಬಳಿಕ ಕೊಟ್ಟಾರ ಚೌಕಿ-ಪಣಂಬೂರು ರಾಷ್ಟ್ರೀಯ ಹೆದ್ದಾರಿ ಮತ್ತು ತಣ್ಣೀರುಬಾವಿ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇದೆ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಇಲಾಖೆಯು ಕೆಲವು ಸೂಚನೆಗಳನ್ನು ಹೊರಡಿಸಿದೆ.

ಕಾರ್ಯಕ್ರಮ ನಡೆಯುವ ವೇಳೆ ಕುದುರೆಮುಖ ಜಂಕ್ಷನ್‌ನಿಂದ ತಣ್ಣೀರುಬಾವಿ ಬೀಚ್‌ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡಬಾರದು. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ ಅನುಕೂಲಕ್ಕೆ ಸುಲ್ತಾನ್ ಬತ್ತೇರಿಯಿಂದ ಫೇರಿಯನ್ನು ಅಥವಾ ಕೆಐಒಸಿಎಲ್‌ನಿಂದ ತಣ್ಣೀರುಬಾವಿಗೆ ಉಚಿತ ಸರಕಾರಿ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ.

ನಿಗದಿಪಡಿಸಿರುವ ಪಾರ್ಕಿಂಗ್ ಸ್ಥಳಗಳು

1. ದೋಸ್ತ್ ಗ್ರೌಂಡ್

2. ಕಟ್ಟೆ ಗ್ರೌಂಡ್ ಪಾರ್ಕಿಂಗ್ ಸ್ಥಳ

3. ತಣ್ಣೀರುಬಾವಿ ಮಸೀದಿ ಎದುರು ಪಾರ್ಕಿಂಗ್ ಸ್ಥಳ

4. ರಫ್ತಾರ್ ಪಾರ್ಕಿಂಗ್

5. ತಣ್ಣೀರುಬಾವಿ ಬೀಚ್ ಪಾರ್ಕಿಂಗ್

6. ಡೆಲ್ಟಾ ಮೈದಾನ ಪಾರ್ಕಿಂಗ್

7. ಫಿಝಾ ಕ್ರಿಕೆಟ್ ಗ್ರೌಂಡ್ (ಹೊಟೇಲ್ ನಿತ್ಯಾಧರ ಮುಂಭಾಗದ ಪಾರ್ಕಿಂಗ್ ಮೈದಾನ)

8. ಎ.ಜೆ. ಶೆಟ್ಟಿ ಗ್ರೌಂಡ್

*ಪಣಂಬೂರು ಬೀಚ್ ಕಾರ್ಯಕ್ರಮ

ಜ.17, 18ರಂದು ಪಣಂಬೂರು ಬೀಚ್‌ನಲ್ಲಿ ಮ್ಯೂಸಿಕ್ ಫೆಸ್ಟಿವಲ್, ತಾಯ್ಕಡಂ ಬ್ರಿಡ್ಜ್ ಕಾನ್ಸ್‌ರ್ಟ್, ಜಾವೇದ್ ಅಲಿ ನೈಟ್, ಮರಳು ಶಿಲ್ಪಕಲೆ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ. ಎರಡೂ ದಿನ ಅಪರಾಹ್ನ 3 ಗಂಟೆಯ ನಂತರ ಕೂಳೂರು-ಪಣಂಬೂರು ಬೈಕಂಪಾಡಿ ರಾ.ಹೆ. ಮತ್ತು ಪಣಂಬೂರು ಬೀಚ್ ರಸ್ತೆಯಲ್ಲಿ ಸಾರ್ವಜನಿಕ ವಾಹನಗಳ ಸಂಚಾರದಲ್ಲಿ ದಟ್ಟಣೆ ಉಂಟಾಗುವ ಸಾಧ್ಯತೆಗಳು ಇದೆ. ಹಾಗಾಗಿ ಕುದುರೆಮುಖ ಜಂಕ್ಷನ್‌ನಿಂದ ಪಣಂಬೂರು ಜಂಕ್ಷನ್‌ವರೆಗೆ ಮತ್ತು ಡಿಕ್ಸಿ ಕ್ರಾಸ್‌ನಿಂದ ಪಣಂಬೂರು ಬೀಚ್‌ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಯಾವುದೇ ವಾಹನಗಳನ್ನು ಪಾರ್ಕ್ ಮಾಡುವಂತಿಲ್ಲ.

ನಿಗದಿ ಪಡಿಸಿರುವ ಪಾರ್ಕಿಂಗ್ ಸ್ಥಳಗಳು:

1. ಕೆ.ಕೆ ಗೇಟ್ ಟ್ರಕ್ ಯಾರ್ಡ್ ಪಾರ್ಕಿಂಗ್

2. ಪಣಂಬೂರು ಬೀಚ್ ಪಾರ್ಕಿಂಗ್

*ವಿಶೇಷ ಸೂಚನೆ

ಕಾರ್ಯಕ್ರಮಗಳಿಗೆ ಬರುವ ಸಾರ್ವಜನಿಕರು ವಾಹನಗಳನ್ನು ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ನಿಲ್ಲಿಸಬೇಕು. ಕಾರ್ಯಕ್ರಮದ ಮಾರ್ಗದಲ್ಲಿ ವಾಹನ ನಿಲುಗಡೆಯ ಸೂಚನಾ ಫಲಕದ ಪ್ಲಾಕ್ಸ್‌ಗಳನ್ನು ಅಳವಡಿಸಿದ್ದು, ಮಾರ್ಗ ಸೂಚಿಯನ್ನು ಅನುಸರಿಸಬೇಕು ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

ThanneerubaaviBlue FlagBeach Program
share
ವಾರ್ತಾಭಾರತಿ
ವಾರ್ತಾಭಾರತಿ
Next Story
X