ಜ.25: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ಜ.22: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜ.25ರಂದು ಬೆಳಗ್ಗೆ 9ಕ್ಕೆ ನಗರದ ಕದ್ರಿಯ ಕೆ.ಪಿ.ಟಿ.ಮೈದಾನದಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಕೆಪಿಟಿ ಪ್ರಾಂಶುಪಾಲ ಹರೀಶ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





