Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಂಗಳೂರಿನಲ್ಲಿ ಜೋಡುಕರೆ ಕಂಬಳ:...

ಬೆಂಗಳೂರಿನಲ್ಲಿ ಜೋಡುಕರೆ ಕಂಬಳ: ಪುತ್ತೂರು ಶಾಸಕ ಅಶೋಕ್ ರೈ

ರೈಲು ಏರಲಿರುವ ಕೋಣಗಳು

ವಾರ್ತಾಭಾರತಿವಾರ್ತಾಭಾರತಿ7 Aug 2023 9:53 PM IST
share
ಬೆಂಗಳೂರಿನಲ್ಲಿ ಜೋಡುಕರೆ ಕಂಬಳ: ಪುತ್ತೂರು ಶಾಸಕ ಅಶೋಕ್ ರೈ

ಪುತ್ತೂರು: ತುಳುನಾಡಿನ ಐತಿಹಾಸಿಕ ಕಂಬಳ ಕೂಟ ರಾಜ್ಯ ರಾಜಧಾನಿಯಲ್ಲಿ ಮೊಟ್ಟ ಮೊದಲ ಬಾರಿಗೆ ನಡೆಯುವ ಮೂಲಕ ತುಳು ಸಂಸ್ಕೃತಿಯ ರಾಜ್ಯ ದೇಶದಲ್ಲಿ ಅನಾವರಣಗೊಳ್ಳಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಬೆಂಗಳೂರು ತುಳುಕೂಟದ 50ನೇ ಸಂಭ್ರಮಾಚರಣೆಯ ನೆನಪಿಗಾಗಿ ಅವಿಭಾಜಿತ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದ ಕಂಬಳ ಕೂಟ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ. ಕಂಬಳ ಕೂಟದ ನೇತೃತ್ವವನ್ನು ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು, ಕರೆ ನಿರ್ಮಿಸುವ ಜಾಗವನ್ನು ಅಶೋಕ್ ಕುಮಾರ್ ರೈ ಸಹಿತ ತುಳುಕೂಟದ ಪ್ರಮುಖರು ವೀಕ್ಷಣೆ ಮಾಡಿದ್ದಾರೆ.

ಕರ್ನಾಟಕಕ್ಕೆ ಮೈಸೂರು ಒಡೆಯರ್ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ 'ರಾಜ ಮಹಾರಾಜ ಜಯ ಚಾಮರಾಜೇಂದ್ರ ಒಡೆಯರ್ ಜೊಡುಕರೆ ಕಂಬಳ' ಎಂದು ನಾಮಕರಣ ಮಾಡುವ ತೀರ್ಮಾನಿಸಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ 35 ಎಕ್ರೆ ವಿಸ್ತೀರ್ಣದಲ್ಲಿ ಮೂರು ದಿನ ಕಾರ್ಯಕ್ರಮ ನಡೆಸುವ ಬಗ್ಗೆ ಯೋಜನೆ ಹಾಕಿಕೊಳ್ಳ ಲಾಗಿದೆ. ಮೈಸೂರು ಮಹಾರಾಣಿ ಹಾಗೂ ಯುವರಾಜರ ಅನುಮತಿ ಕೂಡ ಸಿಕ್ಕಿದ್ದು, ಸರ್ಕಾರದ ಅನುಮತಿ ಸಿಗಲು ಬಾಕಿಯಿದೆ ಎಂದು ಹೇಳಲಾಗಿದೆ.

ತುಳುನಾಡಿನಲ್ಲಿ ನಡೆದ ಕಂಬಳ ಕೂಟದಲ್ಲಿ ಸೆಮಿ ಫೈನಲ್ ಹಂತಕ್ಕೆ ಬಂದ 50 ಜೋಡಿಗಳಷ್ಟು ಕೋಣಗಳನ್ನು ಬೆಂಗಳೂರಿನ ಕೂಟದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಅವಿಭಜಿತ ದಕ್ಷಿಣ ಕನ್ನಡದಲ್ಲಿ ನಡೆಯುವ ಕಂಬಳಕ್ಕಿಂತ 1 ಅಡಿಯಾದರೂ ಜಾಸ್ತಿಯ ಕರೆ ನಿರ್ಮಿಸಿ ಅದ್ದೂರಿಯಾಗಿ ಆಯೋಜಿಸುವ ಅಭಿಲಾಷೆ ಅಶೋಕ್ ಕುಮಾರ್ ರೈ ಹೊಂದಿದ್ದಾರೆಂದು ಹೇಳಲಾಗಿದೆ. ನವೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಆಯೋಜಿಸುವ ಯೋಜನೆ ಹಾಕಿಕೊಂಡಿದ್ದು, ಕಂಬಳ ಕೂಟದೊಂದಿಗೆ ವಿಶ್ವ ತುಳು ಸಮ್ಮೇಳನ ಕೂಡ ಆಯೋಜಿಸಲಿದೆ.

ಕಂಬಳ ಕೂಟ ನಡೆಸುವ ನಿಟ್ಟಿನಲ್ಲಿ ಅರಮನೆ ಮೈದಾನದ ಜಾಗದಲ್ಲಿ ಬೆಂಗಳೂರಿನ ಬಿಬಿಎಂಪಿ ಸದಸ್ಯರಾದ ರಾಜೇಂದ್ರ ಕುಮಾರ್, ಸಂಪತ್ ಕುಮಾರ್ ಎಸ್, ಬೆಂಗಳೂರು ತುಳುಕೂಟ ಅಧ್ಯಕ್ಷ ಸುಂದರ್ ರಾಜ್ ರೈ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬೆಂಗಳೂರು ಬಂಟ್ಸ್ ಸಂಘದ ಅಧ್ಯಕ್ಷ ಚಂದ್ರಹಾಸ ರೈ, ಮಾಜಿ ಅಧ್ಯಕ್ಷ ಜಯರಾಮ ಸೂಡ, ಮುರಳೀಧರ ರೈ ಮಠಂಥಬೆಟ್ಟು ಹಾಗೂ ಪ್ರಮುಖರು ಉಪಸ್ಥಿತರಿಯಲ್ಲಿ ಸ್ಥಳ ಪರಿಶೀಲನೆ ನಡೆಯಿತು.

ಕಂಬಳ ಕೂಟಕ್ಕೆ ಕೋಣಗಳನ್ನು ದಕ್ಷಿಣ ಕನ್ನಡದಿಂದ ಬೆಂಗಳೂರಿಗೆ ಸಾಗಿಸುವ ವಿಚಾರದ ಬಗ್ಗೆ ಮೊದಲ ಹಂತದ ಮಾತುಕತೆ ನಡೆದಿದೆ. ಕೋಣಗಳನ್ನು ಲಾರಿಯಲ್ಲಿ ಸಾಗಿಸುವುದಕ್ಕೆ ವೆಚ್ಚ ಹೆಚ್ಚಾಗುವ ಜತೆಗೆ ಕೋಣಗಳಿಗೆ ಪ್ರಯಾಣದಿಂದ ಆಯಾಸ ಆಗಬಹುದು ಎನ್ನಲಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರೈಲಿನಲ್ಲಿ ಕೋಣಗಳನ್ನು ಸಾಗಿಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಈ ಮೂಲಕ ಕಂಬಳ ಕೋಣಗಳು ರೈಲು ಪ್ರಯಾಣ ಮಾಡಲಿವೆ.

"ಬೆಂಗಳೂರು ತುಳುಕೂಟಕ್ಕೆ 50 ವರ್ಷ ಪೂರ್ತಿಯಾಗಿರುವುದರಿಂದ ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಕೂಟ ನಡೆಸುವ ಬಗ್ಗೆ ಯೋಜನೆ ಹಾಕಿಕೊಂಡಿದ್ದೇವೆ. ದಕ್ಷಿಣ ಕನ್ನಡದ ನೀರಿನಲ್ಲಿ ಕೋಣಗಳಿಗೆ ಓಡಿ ಅಭ್ಯಾಸವಿದ್ದು, ಬೆಂಗಳೂರಿನ ಗಡಸು ನೀರನ ಜತೆಗೆ ಹೇಗೆ ಹೊಂದಿಕೊಳ್ಳಲು ಸಾಧ್ಯವಾ? ಗಡಸು ನೀರನ್ನು ಕೋಣಗಳು ಸೇವಿಸ ಬಹುದೇ ಎನ್ನುವ ಪರೀಕ್ಷೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯವಾಗಿರುವ ಕೆರೆಯ ನೀರಿನ ಮಾದರಿಯನ್ನು ಪುಣೆಯ ಹಾಗೂ ಬೆಂಗಳೂರಿನ ಲ್ಯಾಬ್ ಗೆ ಪರೀಕ್ಷೆಗೆ ಕಳುಹಿಸಲಾಗಿದೆ".

-ಸುಂದರ್ ರಾಜ್ ರೈ, ಅಧ್ಯಕ್ಷರು, ತುಳುಕೂಟ ಬೆಂಗಳೂರು

"ತುಳು ಭಾಷೆ ಸಂಸ್ಕೃತಿಯನ್ನು ರಾಜ್ಯ, ದೇಶಕ್ಕೆ ಪಸರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ಕಂಬಳ ಕೂಟವನ್ನು ಆಯೋಜಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ತುಳುಭವನ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಬೆಂಗಳೂರಿನಲ್ಲಿ ಜಾಗವನ್ನು ನೀಡುವ ಕಾರ್ಯವಾಗಬೇಕು. ತುಳುನಾಡಿನ ಕಂಬಳ ಸಮಿತಿಯವರ ಜೊತೆ ಮಾತುಕತೆ ನಡೆಸಿ ಮುಂದಿನ ಯೋಜನೆ ಹಾಕಿಕೊಳ್ಳುತ್ತೇವೆ. ಕೋಣಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಯಜಮಾನರಲ್ಲಿ ಮಾತುಕತೆಗಳನ್ನು ನಡೆಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು".

-ಅಶೋಕ್ ಕುಮಾರ್ ರೈ, ಶಾಸಕರು ಪುತ್ತೂರು





share
ವಾರ್ತಾಭಾರತಿ
ವಾರ್ತಾಭಾರತಿ
Next Story
X