ಜು.26: ಅಡ್ಡೂರಿನ ಸಹರಾ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸ
ಮಂಗಳೂರು, ಜು.24: ಅಡ್ಡೂರಿನ ಸಹರಾ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಆಡಳಿತ ಮಂಡಳಿಯ ಸಹಭಾಗಿತ್ವದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಮಹಾಸಭೆಯು ಮತ್ತು ಜು.26ರಂದು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಸಹರಾ ಆಂಗ್ಲ ಮಾಧ್ಯಮ ಶಾಲೆ ಸಭಾಗೃಹದಲ್ಲಿ ಬೆಳಗ್ಗೆ 9:30ಕ್ಕೆ ಉಪನ್ಯಾಸಕ ಟಿ.ಎ.ಎನ್. ಖಂಡಿಗೆ ʼಮಕ್ಕಳ ಕಲಿಕೆಯಲ್ಲಿ ಶಿಕ್ಷಕರು ಮತ್ತು ಪೋಷಕರು ಶೈಕ್ಷಣಿಕವಾಗಿ ನಿರ್ವಹಿಸಬೇಕಾದ ಜವಾಬ್ದಾರಿʼ ಕುರಿತು ಮತ್ತು ಡಾ. ಅನಂತ ಪ್ರಭು ಜಿ. ವಿದ್ಯಾರ್ಥಿಗಳಿಗೆ ವೃತ್ತಿಪರ ಮಾರ್ಗದರ್ಶನ ಮತ್ತು ಸೈಬರ್ ಅಪರಾಧ ಹಾಗೂ ರಕ್ಷಣೆ ವಿಷಯದಲ್ಲಿ ಮಾಹಿತಿ ನೀಡಲಿದ್ದಾರೆ.
ಶಾಲಾ ಮಂಡಳಿಯ ಅಧ್ಯಕ್ಷ ಯು.ಪಿ. ಇಬ್ರಾಹಿಂ, ಮಂಡಳಿಯ ಸಂಚಾಲಕ ಎ. ಕೆ. ಇಸ್ಮಾಯಿಲ್, ಕಾರ್ಯ ದರ್ಶಿ ಎನ್. ಇಸ್ಮಾಯಿಲ್, ಸಹಾರಾ ಸಮೂಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಕೇಶವ ಎಚ್., ಪಿಟಿಎ ಅಧ್ಯಕ್ಷ ವಿಶ್ವಾಂಭರ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





