Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಡಬ | ಎಂ.ಫ್ರೆಂಡ್ಸ್ ಚಾರಿಟೇಬಲ್...

ಕಡಬ | ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ12 Dec 2025 8:43 PM IST
share
ಕಡಬ | ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಹಸ್ತಾಂತರ

ಕಡಬ, ಡಿ.12. ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕ್ಲಾಸ್ ಆನ್ ವ್ಹೀಲ್ಸ್ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಯ ಪ್ರಮಾಣಪತ್ರ ವಿತರಣೆ ಮತ್ತು ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮ ಅಲಂಕಾರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಖಾಸಗಿ ಶಾಲೆಗಳಂತೆ ಕಂಪ್ಯೂಟರ್ ಪ್ರಯೋಗಾಲಯ ಸ್ಥಾಪಿಸಿ ಶಿಕ್ಷಣ ಕೊಡುವುದು ಕಷ್ಟ ಎಂಬುದನ್ನರಿತು ಬಸ್‌ನಲ್ಲಿ ಗ್ರಾಮೀಣ ಸರಕಾರಿ ಶಾಲೆಯ ಅಂಗಳಕ್ಕೆ ಬಂದು ಪ್ರಾಥಮಿಕ ಕಂಪ್ಯೂಟರ್ ಶಿಕ್ಷಣ ನೀಡುವ ಈ ಯೋಜನೆ ಮಾದರಿ ಹಾಗೂ ಅತ್ಯಂತ ವಿಶಿಷ್ಟ ಎಂದರು.

ಶಾಲೆಯಲ್ಲಿ ಶಿಕ್ಷಣ ಕಲಿತು ಹೋದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಋಣ ಇರುತ್ತದೆ. ತಾನು ಕಲಿತ ಶಾಲೆಗೆ ಕಂಪ್ಯೂಟರ್ ನೀಡುವ ಮೂಲಕ ಸುಜಾಹ್ ಮುಹಮ್ಮದ್ ಅನುಕರಣೀಯ ಕಾರ್ಯ ಮಾಡಿದ್ದಾರೆ. ಇಂತಹ ಮನೋಭಾವ ಎಲ್ಲರಿಗೂ ಬಂದರೆ, ಊರ ಶಾಲೆಗಳು ಉದ್ಧಾರ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಅವರು ಶ್ಲಾಘಿಸಿದರು.

ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುಜಾಹ್ ಮಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಎಂ.ಫ್ರೆಂಡ್ಸ್ ಅನಿವಾಸಿ ಭಾರತೀಯ ಟ್ರಸ್ಟಿ ನವಾಝ್ ಕೆ. ದುಬಾಯಿ, ಎಸ್‌ಡಿಎಂಸಿ ಅಧ್ಯಕ್ಷ ಎ.ಬಿ.ಸುಂದರ, ಉಪಾಧ್ಯಕ್ಷೆ ಪ್ರಮೀಳಾ, ಮಾತೃ ಸಂಘದ ಅಧ್ಯಕ್ಷೆ ಶೈಲ ಪ್ರಭಾ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಬಾಕಿಲ, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು.

ಶಾಲೆಗೆ ಕಂಪ್ಯೂಟರ್ ಕೊಡುಗೆ ನೀಡಿದ ಹಳೆ ವಿದ್ಯಾರ್ಥಿ ಸುಜಾಹ್ ಮುಹಮ್ಮದ್, ಎಂಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ, ಕಂಪ್ಯೂಟರ್ ಬಸ್ಸಿನ ಶಿಕ್ಷಕರಾದ ಚೈತ್ರಾ ಎ.ಎಚ್., ಶಮಾ ಸಾನಿಹಾ, ಚಾಲಕ ಅಬೂಬಕರ್ ಬಿ.,‌ ಸಂಯೋಜಕ ಮುಹಮ್ಮದ್ ಸಫ್ವಾನ್ ಅವರನ್ನು ಸನ್ಮಾನಿಸಲಾಯಿತು.

ಕಂಪ್ಯೂಟರ್ ಶಿಕ್ಷಣ ಪಡೆದ ಬಗ್ಗೆ ಶಿಕ್ಷಕಿ ಮಲ್ಲಿಕಾ, ವಿದ್ಯಾರ್ಥಿಗಳಾದ ಆಕಾಶ್, ಮಿಸ್ಬಾ ಫಾತಿಮಾ, ದೀಕ್ಷಿತ್, ಚರಣ್ ಅನಿಸಿಕೆ ವ್ಯಕ್ತಪಡಿಸಿದರು.

ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಪ್ರಸಾದ್ ಎ. ಸ್ವಾಗತಿಸಿದರು. ಎಂಫ್ರೆಂಡ್ಸ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಭಾಗೀರತಿ ವಂದಿಸಿದರು. ಸಹಶಿಕ್ಷಕ ಚೆನ್ನಪ್ಪ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X