ತೋನ್ಸೆ ಪುಷ್ಕಳ ಕುಮಾರ್‌ಗೆ ಕನಕದಾಸ ಪ್ರಶಸ್ತಿ

ಮಂಗಳೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ, ಕಲ್ಕೂರ ಪ್ರತಿಷ್ಠಾನದ ವತಿಯಿಂದ ಹರಿದಾಸ, ಹವ್ಯಾಸಿ ಯಕ್ಷಗಾನ ಭಾಗವತ, ಸುಗಮ ಸಂಗೀತ ಕಲಾವಿದ ತೋನ್ಸೆ ಪುಷ್ಕಳ ಕುಮಾರ್ ಕನಕದಾಸ ಜಯಂತಿಯ ಪ್ರಯುಕ್ತ ನೀಡಲಾಗುವ ಕನಕದಾಸ ಪ್ರಶಸ್ತಿ ಘೋಷಿಸಲಾಗಿದೆ.
ನ.8ರ ಅಪರಾಹ್ನ 3ಕ್ಕೆ ನಗರದ ಡಾನ್ ಬಾಸ್ಕೋ ಹಾಲ್‌ನಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





