ಕಂಕನಾಡಿ: ಅಬ್ದುಲ್ ಖಾದಿರ್ ಮುಸ್ಲಿಯಾರ್ ನಿಧನ

ಮಂಗಳೂರು: ಕಂಕನಾಡಿ ಜುಮಾ ಮಸೀದಿಯಲ್ಲಿ 48 ವರ್ಷ ಮುಅದ್ದಿನ್ ಆಗಿ ಸೇವೆ ಸಲ್ಲಿಸಿದ್ದ ಹಾಜಿ ಅಬ್ದುಲ್ ಖಾದಿರ್ ಮುಸ್ಲಿಯಾರ್ ಬಂದ್ಯೋಡು (78) ಅವರು ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಬಂಧು ಬಳಗ ಹಾಗೂ ಅಪಾರ ಶಿಷ್ಯಂದಿರನ್ನು ಅಗಲಿದ್ದಾರೆ.
ಕುಂಬಳೆ ಬಂದ್ಯೋಡು ಸಮೀಪದ ಚಿನ್ನಮುಗೇರು ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು ಎಂದು ಕುಟುಂಬದ ಮೂಲ ತಿಳಿಸಿದೆ.
Next Story





