Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಂಗಡಿ, ಹೊಟೇಲ್ ನಾಮಫಲಕಗಳಲ್ಲಿ ಕನ್ನಡ...

ಅಂಗಡಿ, ಹೊಟೇಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ದ.ಕ. ಜಿಲ್ಲಾಧಿಕಾರಿ ದರ್ಶನ್

ವಾರ್ತಾಭಾರತಿವಾರ್ತಾಭಾರತಿ2 Feb 2026 6:53 PM IST
share
ಅಂಗಡಿ, ಹೊಟೇಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ದ.ಕ. ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್‌ವಿ ಸೂಚಿಸಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ದ.ಕ.ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಷರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ರಾ.ಹೆ.ಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾ.ಹೆ. ಪ್ರಾಧಿಕಾರಕ್ಕೆ ಸೂಚಿಸ ಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದರು.

ಆಂಗ್ಲ ಮಾಧ್ಯಮ ಶಾಲೆಗಳು ಮತ್ತು ಕಾಲೇಜುಗಳ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ ಹೆಸರು ಬರೆಯಬೇಕು. ಖಾಸಗಿ ಬಸ್‌ಗಳ ಬೋರ್ಡುಗಳಲ್ಲಿ ಕನ್ನಡದಲ್ಲಿ ಊರಿನ ಹೆಸರು ಬರೆಯುವ ಬಗ್ಗೆ ಕ್ರಮ ವಹಿಸಲಾಗುವುದು ಎಂದ ಜಿಲ್ಲಾಧಿಕಾರಿ ನಗರದ ಮಾಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಗಳ ನಾಮಫಲಕದಲ್ಲಿ ಹೆಸರನ್ನು ಕನ್ನಡದಲ್ಲಿ ನಮೂದಿಸುವ ಬಗ್ಗೆ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಗೆ ಸೂಚಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಕರ ಕೊರತೆ ಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿದೆ. ಈ ಸಮಸ್ಯೆಗೆ ಪರಿಹರಿ ಕಲ್ಪಿಸಬೇಕು. ಕೆಲವು ಉದ್ಯಮ ಗಳಲ್ಲಿ ಹೊರ ರಾಜ್ಯದ ಕಾರ್ಮಿಕರನ್ನು ನೇಮಿಸಲಾಗುತ್ತಿದ್ದು, ಸ್ಥಳೀಯರನ್ನು ನಿರ್ಲಕ್ಷಿಸಲಾಗುತ್ತಿದೆ. ರಾಷ್ಟ್ರೀಕೃತ ಬ್ಯಾಂಕುಗಳು ಠೇವಣಿ ಹಾಗೂ ಹಣ ಹಿಂತೆಗೆಯುವಿಕೆ ಚೀಟಿಯನ್ನೂ ಕನ್ನಡದಲ್ಲಿ ಒದಗಿಸಬೇಕು. ಗ್ರಾಮೀಣ ಪ್ರದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕನ್ನಡ ಜ್ಞಾನವಿಲ್ಲದ ಸಿಬ್ಬಂದಿಯು ಕಾರ್ಯನಿರ್ವಹಿಸುತ್ತಿದೆ. ಇದರಿಂದ ಸ್ಥಳೀಯರ ಬ್ಯಾಂಕ್ ವ್ಯವಹಾರಗಳಿಗೆ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿಯ ಗಮನ ಸೆಳೆದರು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಮಾತನಾಡಿ ನಗರದಲ್ಲಿ ಜಿಲ್ಲಾ ಮಟ್ಟದ ಕನ್ನಡ ಭವನ ನಿರ್ಮಿಸಲು ನಿವೇಶನ ಮಂಜೂರು ಮಾಡಲು ಆಗ್ರಹಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ., ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ.ಸಂತೋಷ್ ಕುಮಾರ್ ಜಿ, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ದೇವಿಪ್ರಸಾದ್, ರಾಜಶೇಖರ್ ಅಜ್ರಿ, ರಾಜೇಶ್ ಡಿಸೋಜ, ದಿವಾಕರ್ ದಾಸ್, ಹಸೈನಾರ್ ತಾಳಿತ್ತನೂಜಿ ಮತ್ತಿತ ರರು ಉಪಸ್ಥಿತರಿದ್ದರು.

Tags

Kannadamandatoryshophotelnameplate
share
ವಾರ್ತಾಭಾರತಿ
ವಾರ್ತಾಭಾರತಿ
Next Story
X