Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ...

ಕಣಚೂರು ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

'ಆಯುರ್ ರಕ್ಷಾ ಕವಚ್' ಆರೋಗ್ಯ ಕಾರ್ಡ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 July 2024 2:36 PM IST
share

ಕೊಣಾಜೆ: ಕಣಚೂರು ಆರ್ಯುವೇದ ಆಸ್ಪತ್ರೆ ದೇರಳಕಟ್ಟೆ‌ ನಾಟೆಕಲ್ ಇದರ ವತಿಯಿಂದ 25 ನೇ ಕಾರ್ಗಿಲ್ ವಿಜಯ ದಿನಚರಣೆ ಹಾಗೂ 'ಆಯುರ್ ರಕ್ಷಾ ಕವಚ್' ಆರೋಗ್ಯ ಕಾರ್ಡ್ ಬಿಡುಗಡೆ ಕಾರ್ಯಕ್ರಮವು ಶುಕ್ರವಾರ ಕಣಚೂರು ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್(ಐಪಿಎಸ್) ಅವರು, ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಕಾರ್ಗಿಲ್ ಯುದ್ದ ದ ಗೆಲುವು ಭಾರತೀಯರ ಒಗ್ಗಟ್ಟು ಹಾಗೂ ಯೋಧರ ಹೋರಾಟದ ಫಲವಾಗಿದೆ. ಭಾರತೀಯರ ಒಗ್ಗಟ್ಟು, ಸಹಬಾಳ್ವೆ ಸದಾಕಾಲ ಹಸಿರಾಗಿರಬೇಕು ಎಂದರು.

ಸದಾ ನಮ್ಮಲ್ಲಿ ರಾಷ್ಟ್ರ ಪ್ರೇಮ ಜಾಗೃತವಾಗಿರಬೇಕು. ಮುಖ್ಯವಾಗಿ ನಮ್ಮ ರಾಷ್ಟ್ರವು ಸುಮಾರು 65% ಯುವ ಜನತೆ ಇರುವ ರಾಷ್ಟ್ರವಾಗಿದೆ. ಯುವಜನತೆ ದೇಶದ ಸಂಸ್ಕೃತಿ ಹಾಗೂ ದೇಶಪ್ರೇಮವನ್ನು ಮೈಗೂಡಿಸಿಕೊಂಡು ಮುನ್ನಡೆದರೆ ದೇಶವು ಇನ್ನಷ್ಟು ಸದೃಢವಾಗಬಲ್ಲುದು. ಯುವ ಸಮುದಾಯ ಯಾವುದೇ ಕೋಮುದ್ವೇಷ, ಜಾತಿ ಬೇಧ, ಡ್ರಗ್ಸ್ ಮಾಫಿಯಾಗಳಿಗೆ ಬಲಿಯಾಗದೆ ಉತ್ತಮ ಮೌಲ್ಯಯುತ ಶಿಕ್ಷಣ ಮತ್ತು ಕಾರ್ಯದೊಂದಿಗೆ ದೇಶ ಕಟ್ಟುವ ಕೆಲಸ ಮಾಡಬೇಕು ಎಂದರು.

ಇದೇ ಸಂದ ಕಣಚೂರು ಆಯುರ್ ರಕ್ಷಾ ಕವಚ್ ಆರೋಗ್ಯ ಕಾರ್ಡ್ ನ್ನು ಪೊಲೀಸ್ ವರಿಷ್ಠಾಧಿಕಾರಿ‌ ಯತೀಶ್ ಎನ್ ಅವರು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಸೇನಾಧಿಕಾರಿ ಕ್ಯಾ.ಬೆಳ್ಳಾಲ ಗೋಪಿನಾಥ್ ರಾವ್ ಅವರು ಮಾತನಾಡಿ, ಕಾರ್ಗಿಲ್ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಯು.ಕೆ.ಮೋನು ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ‌ ಮೀಸಲು ಪೋಲಿಸ್ ಏಳನೇ ಬಟಾಲಿಯನ್ ನ ಪೊಲೀಸ್ ಇನ್ಸ್ಪೆಕ್ಟರ್ ಗಣೇಶ್ ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕಣಚೂರು ಇಸ್ಲಾಮಿಕ್ ಎಜ್ಯುಕೇಶನ್ ಟ್ರಸ್ಟ್ ನ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಅವರು 'ಆಯುರ್ ರಕ್ಷಾ ಕವಚ್ ' ಆರೋಗ್ಯ ಕಾರ್ಡ್ ನ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಕಣಚೂರು ವೈದ್ಯಕೀಯ ಅರ್ಯುವೇದ ಕಾಲೇಜಿನ ವೈದ್ಯಕೀಯ ಸಲಹೆಗಾರ ಡಾ. ಸುರೇಶ್ ನೆಗಲಗುಳಿ, ಮೆಡಿಕಲ್ ಸುಪರಿಡೆಂಟ್ ಡಾ.ಕಾರ್ತಿಕೇಯ ಪ್ರಸಾದ್, ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸ್ ನ ಡೀನ್ ಡಾ.ಶಹನವಾಝ್, ಡಾ.ರೋಹನ್ ಮೋನಿಸ್, ಡಾ.ಶಮೀಮ, ಡಾ.ಹರೀಶ್ ಶೆಟ್ಟಿ, ಮಹಮ್ಮದ್ ಸುಹೈಲ್ ಮೊದಲಾದವರು ಉಪಸ್ಥಿತರಿದ್ದರು.

ಕಣಚೂರು ಆರ್ಯುವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲೆ ಡಾ.ವಿದ್ಯಾಪ್ರಭಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಸುರೇಶ್ ನೆಗಲಗುಳಿ ವಂದಿಸಿದರು.‌


Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X