ಉಳ್ಳಾಲ| ಕೇರಳ ಯಾತ್ರೆ ಪ್ರಯುಕ್ತ ಪೂರ್ವ ಭಾವಿ ಸಭೆ

ಉಳ್ಳಾಲ : ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ 'ಮನುಷ್ಯರೊಂದಿಗೆ' ಎಂಬ ಧ್ಯೇಯದಡಿ ಕೇರಳ ಮುಸ್ಲಿಮ್ ಜಮಾಅತ್ ವತಿಯಿಂದ ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹಾಗೂ ಇಬ್ರಾಹಿಮ್ ಖಲೀಲ್ ಅಲ್ ಬುಖಾರಿ ಕಡಲುಂಡಿ ತಂಙಳ್ ನೇತೃತ್ವದಲ್ಲಿ ಜ.1ರಂದು ಉಳ್ಳಾಲ ದರ್ಗಾ ಝಿಯಾರತ್ ನೊಂದಿಗೆ ಆರಂಭಗೊಳ್ಳಲಿರುವ ಕೇರಳ ಯಾತ್ರೆ ಪ್ರಯುಕ್ತ ಪೂರ್ವ ಭಾವಿ ಸಭೆ ಉಳ್ಳಾಲ ದರ್ಗಾ ಕಚೇರಿಯಲ್ಲಿ ರವಿವಾರ ನಡೆಯಿತು.
ಈ ವೇಳೆ ಸ್ಪೀಕರ್ ಯುಟಿ ಖಾದರ್ ಮಾತನಾಡಿ, ಉಳ್ಳಾಲ ಝಿಯಾರತ್ ನೊಂದಿಗೆ ಈ ಕೇರಳ ಯಾತ್ರೆ ಆರಂಭಗೊಳ್ಳುವುದರಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಉಳ್ಳಾಲ ಇನ್ಸ್ಪೆಕ್ಟರ್ ವಿರೂಪಾಕ್ಷ, ದರ್ಗಾ ಕೋಶಾಧಿಕಾರಿ ನಾಝೀಮ್ ಮುಕಚೇರಿ, ಕಾರ್ಯದರ್ಶಿ ಇಸಾಕ್, ಸದಸ್ಯರು ಉಪಸ್ಥಿತರಿದ್ದರು.





