Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 17,18ರಂದು ತಣ್ಣೀರುಬಾವಿ ಬೀಚ್‌ನಲ್ಲಿ...

ಜ. 17,18ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಗಾಳಿಪಟ ಉತ್ಸವ

ವಾರ್ತಾಭಾರತಿವಾರ್ತಾಭಾರತಿ16 Jan 2026 7:43 PM IST
share
ಜ. 17,18ರಂದು ತಣ್ಣೀರುಬಾವಿ ಬೀಚ್‌ನಲ್ಲಿ ಗಾಳಿಪಟ ಉತ್ಸವ
15 ದೇಶಗಳ 30 ಅಂತಾರಾಷ್ಟ್ರೀಯ ಪಟುಗಳ ಆಗಮನ

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್‌ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ ಭಾಗವಹಿಸಲು 15 ದೇಶಗಳ 30 ಅಂತರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ.

ಭಾರತ ಮತ್ತು ವಿದೇಶಗಳಿಂದ ಸೇರಿ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ ಹಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹೊರ ದೇಶಗಳಿಂದ ಆಗಮಿಸಿದ್ದ ಅಂತಾರಾಷ್ಟ್ರೀಯ ಗಾಳಿಪಟ ಗಾರನ್ನು ಸ್ವಾಗತಿಸಿದ ಅವರು, ಉತ್ಸವದಲ್ಲಿ ಸಾಂಪ್ರದಾಯಿಕ, ಏರೋಫಾಯಿಲ್, ಇನ್‌ಫ್ಲೇಟಬಲ್ ಹಾಗೂ ಕ್ವಾಡ್ ಲೈನ್ ಸ್ಪೋರ್ಟ್ ಗಾಳಿಪಟಗಳ ಪ್ರದರ್ಶನ ಇರಲಿದೆ ಎಂದರು.

ಗಾಳಿಪಟ ಉತ್ಸವವನ್ನು ಆಯೋಜಿಸುತ್ತಿರುವ ಟೀಮ್ ಮಂಗಳೂರು ತಂಡದಿಂದ ಸಾಂಸ್ಕೃತಿಕ ಗಾಳಿಪಟಗಳ ಜತೆಗೆ ವಿಶೇಷವಾಗಿ ತುಳುನಾಡಿನ ಸಾಂಸ್ಕೃತಿಕ ವೈಭವ ಪ್ರತಿಬಿಂಬಿಸುವ ರಥ ಎಂಬ ಹೊಸ ಗಾಳಿಪಟವನ್ನು ಪರಿಚಯಿಸಲಾಗುತ್ತಿದೆ ಎಂದು ಅವರು ಹೇಳಿದರು.

ಜಿ.ಪಂ. ಸಿಇಒ ವಿನಾಯಕ ನರ್ವಾಡೆ ಮಾತನಾಡಿ, ಬೀಚ್‌ನ 2 ಕಿ.ಮೀ. ಅಂತರದಲ್ಲಿ 10 ಕಡೆ 1900 ಕಾರುಗಳಿಗೆ ಹಾಗೂ ನಾಲ್ಕು ಕಡೆ ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಸುಲ್ತಾನ್ ಬತ್ತೇರಿಯಿಂದ ಫಲ್ಗುಣಿ ನದಿ ಮೂಲಕ ಫೆರಿ ಸೇವೆಯ ಸೌಲಭ್ಯ ಪಡೆದು ತಣ್ಣೀರುಬಾವಿ ಬೀಚ್‌ಗೆ ಆಗಮಿಸಬಹುದು. ಕೆಐಒಸಿಎಲ್ ವೃತ್ತದಿಂದ ಬ್ಲೂಬೇ ಬೀಚ್‌ಗೆ ಬಸ್ ಮೂಲಕ ಪಿಕಪ್ ಮತ್ತು ಡ್ರಾಪ್ ವ್ಯವಸ್ಥೆ ಇರಲಿದೆ ಎಂದು ಅವರು ಹೇಳಿದರು.

1995ರಲ್ಲಿ ಸ್ಥಾಪಿತವಾದ ಟೀಮ್ ಮಂಗಳೂರು ಗಾಳಿಪಟ ಹಾರಾಟವನ್ನು ಕಲೆಯಾಗಿ ರೂಪಿಸಿಕೊಂಡು ಬಂದಿದೆ. ಎಂಆರ್‌ಪಿಎಲ್, ಒಎನ್‌ಜಿಸಿ ಮತ್ತು ಇತರ ಖಾಸಗಿ ಸಂಸ್ಥೆಗಳ ಪ್ರಾಯೋಜಕತ್ವ, ಜಿಲ್ಲಾಡಳಿತದ ಸಹಕಾರ ದೊಂದಿಗೆ ಗಾಳಿಪಟ ಉತ್ಸವ ಸಾರ್ವಜನಿಕರಿಗೆ ಮನರಂಜನೆ ನೀಡಲಿದೆ ಎಂದು ಟೀಮ್ ಮಂಗಳೂರು ತಂಡದ ಪ್ರಾಣ್, ಪ್ರಶಾಂತ್, ದಿನೇಶ್ ಹೊಳ್ಳ ಹಾಗೂ ಇತರರು ಮಾಹಿತಿ ನೀಡಿದರು.

ಗೋಷ್ಟಿಯಲ್ಲಿ ಡಿಸಿಪಿ ಮಿಥುನ್ ಉಪಸ್ಥಿತರಿದ್ದರು.

ಸಾರ್ವಜನಿಕ ಸುರಕ್ಷತೆ ಹಾಗೂ ಅಂತಾರಾಷ್ಟ್ರೀಯ ಮಾನದಂಡಗಳನ್ನು ಕಾಪಾಡುವ ದೃಷ್ಟಿಯಿಂದ ಮಾಂಜಾ (ಗಾಜು ಲೇಪಿತ ದಾರ) ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಗಾಳಿಪಟ ತಜ್ಞರು ಈ ಬಗ್ಗೆ ನಿಗಾ ವಹಿಸಲಿದ್ದಾರೆ. 130 ಸ್ವಯಂ ಸೇವಕರು ಗಾಳಿಪಟ ಉತ್ಸವದಲ್ಲಿ ಕಾರ್ಯನಿರತರಾಗಿದ್ದಾರೆ ಎಂದು ಟೀಮ್ ಮಂಗಳೂರು ತಂಡದ ಸರ್ವೇಶ್ ರಾವ್ ತಿಳಿಸಿದರು.

‘ಮಂಗಳೂರಿಗೆ ಪ್ರಥಮ ಬಾರಿಗೆ ಗಾಳಿಪಟ ಉತ್ಸವದಲ್ಲಿ ಭಾಗಿಯಾಗಲು ಬಂದಿದ್ದು, ಕಾರ್ಯಕ್ರಮದ ಬಗ್ಗೆ ಉತ್ಸುಕ ನಾಗಿದ್ದೇನೆ’ ಎಂದು ಸ್ವಿಜರ್‌ಲ್ಯಾಂಡ್‌ನ ಅಂತಾರಾಷ್ಟ್ರೀಯ ಗಾಳಿಪಟಗಾರ ಮೈರೆ ರೆನೆ ಅಭಿಪ್ರಾಯಿಸಿದರೆ, ‘ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನ ಗಾಳಿಪಟ ಉತ್ಸವದಲ್ಲಿ ಭಾಗಿಯಾಗುತ್ತಿದ್ದೇನೆ. ಇಲ್ಲಿನ ಸುಂದರ ಕಡಲ ಕಿನಾರೆಯ ಜತೆಗೆ ಇಲ್ಲಿನ ಜನರೂ ಅತ್ಯಂತ ಸ್ನೇಹಪ್ರಿಯರು. ಆತಿಥ್ಯವೂ ಉತ್ತಮ’ ಎಂದು ಥಾಯ್ಲೆಂಡ್‌ನ ಗಾಳಿಪಟಗಾರೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದರು.

Tags

Kite festivalThanneerubaviBeach
share
ವಾರ್ತಾಭಾರತಿ
ವಾರ್ತಾಭಾರತಿ
Next Story
X