ಕೊಣಾಜೆ | ಕಾರು- ಆಟೋ ರಿಕ್ಷಾ ಮಧ್ಯೆ ಅಪಘಾತ: ಪ್ರಯಾಣಿಕರಿಗೆ ಗಾಯ

ಕೊಣಾಜೆ: ಇಲ್ಲಿಗೆ ಸಮೀಪದ ಕಂಬ್ಲಪದವು ಬಳಿ ಕಾರು ಹಾಗೂ ಆಟೋ ರಿಕ್ಷಾವೊಂದರ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿರುವುದು ವರದಿಯಾಗಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ಹಾಗೂ ಆಟೊ ರಿಕ್ಷಾ ನಜ್ಜುಗುಜ್ಜಾಗಿದ್ದು, ಅಟೋ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳುಗಳ ವಿವರ ಸೇರಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
Next Story





