ಕೊಣಾಜೆ: ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಅಬ್ದುಲ್ ರಝಾಕ್
ಕೊಣಾಜೆ : ಪಜೀರು ಗ್ರಾಮದ ಅಡ್ಕ ಎಂಬಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.
ಮೃತಪಟ್ಟ ವ್ಯಕ್ತಿಯನ್ನು ಆಡ್ಕ ನಿವಾಸಿ ಅಬ್ದುಲ್ ರಝಾಕ್ (52) ಎಂದು ಗುರುತಿಸಲಾಗಿದೆ.
ಅವರು ತನ್ನ ಮನೆಯ ಬಳಿ ಹಲಸು ಕೊಯ್ಯಲೆಂದು ಮರ ಏರಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡಿದೆ. ಸುಮಾರು ಹೊತ್ತಾದರೂ ಮನೆಗೆ ಬಂದಿಲ್ಲ ಎಂದು ಅವರ ಪತ್ನಿ ಮರದ ಬಳಿ ಹೋದ ವೇಳೆ ರಝಾಕ್ ಅವರು ಮರದ ಕೆಳಗೆ ಪ್ರಜ್ಞೆತಪ್ಪಿ ಬಿದ್ದಿದ್ದರು ಎಂದು ತಿಳಿದುಬಂದಿದೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಬ್ದುಲ್ ರಝಾಕ್ ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ರಝಾಕ್ ಅವರು ಹಲವು ವರ್ಷಗಳಿಂದ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.
Next Story





