Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ | ತುಳುವೇತರರಿಗೆ ತುಳು...

ಕೊಣಾಜೆ | ತುಳುವೇತರರಿಗೆ ತುಳು ಶ್ರೀಮಂತಿಕೆ ತಿಳಿಯಲಿ: ಡಾ.ಪಾದೇಕಲ್ಲು

ವಾರ್ತಾಭಾರತಿವಾರ್ತಾಭಾರತಿ6 Dec 2025 6:41 PM IST
share
ಕೊಣಾಜೆ | ತುಳುವೇತರರಿಗೆ ತುಳು ಶ್ರೀಮಂತಿಕೆ ತಿಳಿಯಲಿ: ಡಾ.ಪಾದೇಕಲ್ಲು

ಕೊಣಾಜೆ: ತುಳುವಿನ ಮೌಖಿಕ ಸಾಹಿತ್ಯದ ಕುರಿತು ಅಧ್ಯಯನ ನಡೆದಷ್ಟು ಪ್ರಾಚೀನ ತುಳು ಲಿಖಿತ ಸಾಹಿತ್ಯದ ಕುರಿತು ನಡೆದಿಲ್ಲ. ತುಳುಲಿಪಿಯಲ್ಲಿಯೇ ರಚನೆಗೊಂಡ ಮಹಾಭಾರತೊ, ಶ್ರೀಭಾಗವತೊ, ಶ್ರೀದೇವಿ ಮಹಾತ್ಮೆ, ಕಾವೇರಿ ಮೊದಲಾದ ಪಳಂತುಳು ಕೃತಿಗಳು ಲಭ್ಯವಾಗಿದ್ದು ಈ ಕುರಿತು ತುಳುನಾಡಿನಲ್ಲಿ ಹಾಗೂ ತುಳುವೇತರರಿಗೆ ತುಳುವಿನ ಈ ಶ್ರೀಮಂತಿಕೆಯನ್ನು ತಿಳಿಸುವ ಕೆಲಸ ಆಗಬೇಕಿದೆ ಎಂದು ತುಳು - ಕನ್ನಡ ವಿದ್ವಾಂಸರಾದ ಡಾ.ಪಾದೇಕಲ್ಲು ವಿಷ್ಣು ಭಟ್ ಹೇಳಿದರು.

ಅವರು ಶನಿವಾರ ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿವಿ ಕಾಲೇಜು ಮಂಗಳೂರು ಸಹಯೋಗದೊಂದಿಗೆ ನಡೆಸಿದ ಪಳಂತುಳು ಸಾಹಿತ್ಯದ ಸ್ವರೂಪ ಎಂಬ ವಿಷಯದ ಕುರಿತ ವೆಬಿನಾರ್ ಉಪನ್ಯಾಸ ಮಾಲಿಕೆಯಲ್ಲಿ ಉಪನ್ಯಾಸ ನೀಡಿದರು.

ತುಳು ಅಕಾಡೆಮಿ, ತುಳುಪೀಠ ಜೊತೆ ಸೇರಿ ಕರ್ನಾಟಕದ ವಿಶ್ವವಿದ್ಯಾನಿಲಯಗಳಲ್ಲಿ ತುಳು ಭಾಷೆ ಸಾಹಿತ್ಯದ ಕುರಿತ ಉಪನ್ಯಾಸಗಳನ್ನು ಏರ್ಪಡಿಸಿ ತುಳುವೇತರರಿಗೆ ತುಳುವಿನ ಪ್ರಾಚೀನತೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯಪಡಿಸಬೇಕು ಎಂದರು.

ತಿಗಳಾರಿ ಲಿಪಿಯೇ ತುಳುಲಿಪಿ :

ತುಳುವಿನ ಲಿಪಿಯ ಬಗ್ಗೆ ಬಹಳ ಚರ್ಚೆಗಳಿವೆ. ತಿಗಳಾರಿ ಲಿಪಿಯನ್ನೇ ನಾವು ತುಳುಲಿಪಿ ಎನ್ನುತ್ತಿರುವುದು. ಪ್ರಾಚೀನ ಕಾಲದಲ್ಲಿ ಈ ಲಿಪಿಯಲ್ಲಿಯೇ ಬರೆಯುತ್ತಿದ್ದೆವು. ಆದರೆ, ಕಾಲಾಂತರದಲ್ಲಿ ನಿತ್ಯದ ಬಳಕೆಯಲ್ಲಿ ಬಿದ್ದು ಹೋಗಿ ಮತ್ತೆ ಕನ್ನಡ ಲಿಪಿಯಲ್ಲಿಯೇ ಬರೆಯಲು ತೊಡಗಿದೆವು. ಆದರೆ ಹಳೆಯ ತುಳುವಿನ ಶಬ್ದರೂಪ, ಸಾಹಿತ್ಯ ಸ್ವರೂಪದ ಬಗ್ಗೆ ನಾಡಿನ ಗಮನ ಹರಿದಿಲ್ಲ ಎಂದರು.

ಪಳಂತುಳುವಿನ ಸ್ವರೂಪವನ್ನು ಅರ್ಥ ಮಾಡಿಕೊಳ್ಳಲು ತುಳು ನಿಘಂಟು ಸಹಕಾರಿಯಾಗಿದೆ. ಸಿಕ್ಕಿದ ಏಕೈಕ ಪ್ರತಿಗಳನ್ನು ಮುಂದಿಟ್ಟುಕೊಂಡು ಪುಂಡೂರು ವೆಂಕಟರಾಜ ಪುಣಿಂಚತ್ತಾಯರು ಮಾಡಿದ ಗ್ರಂಥಸಂಪಾದನೆ ತುಳುವಿಗೆ ಸಂದ ಅಪೂರ್ವ ಕೊಡುಗೆ ಎಂದರು.

ವಿವಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠದ ಸಂಯೋಜಕರಾದ ಡಾ.ಧನಂಜಯ ಕುಂಬ್ಳೆಯವರು ಮಾತನಾಡಿ, ತುಳು ಸಾಹಿತ್ಯದ ಕುರಿತು ತಿಂಗಳಿಗೊಂದು ಕನ್ನಡದಲ್ಲಿ ಉಪನ್ಯಾಸವನ್ನು ಏರ್ಪಡಿಸಲಾಗುವುದು. ಇದರಿಂದಾಗಿ ತುಳುವರಿಗೂ, ತುಳುವೇತರರಿಗೂ ತುಳುವನ್ನು ತಲಪಿಸುವ ಪ್ರಯತ್ನ ಮಾಡಲಾಗುವುದು ಎಂದರು.

ತುಳು ಪೀಠದ ಪ್ರಸಾದ್ ಅಂಚನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X