Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕೊಂಕಣಿ ಲೇಖಕ ಎಡ್ವಿನ್ ಜೋಸೆಫ್...

ಮಂಗಳೂರು: ಕೊಂಕಣಿ ಲೇಖಕ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜ ನಿಧನ

ವಾರ್ತಾಭಾರತಿವಾರ್ತಾಭಾರತಿ26 Oct 2023 9:38 PM IST
share
ಮಂಗಳೂರು: ಕೊಂಕಣಿ ಲೇಖಕ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜ ನಿಧನ

ಮಂಗಳೂರು, ಅ.26: ಹಿರಿಯ ಕೊಂಕಣಿ ಲೇಖಕ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಎಡ್ವಿನ್ ಜೋಸೆಫ್ ಫ್ರಾನ್ಸಿಸ್ ಡಿಸೋಜ (75) ಗುರುವಾರ ನಗರದಲ್ಲಿ ನಿಧನರಾದರು.

ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ನಗರದ ವೆಲೆನ್ಸಿಯಾದ ನಿವಾಸಿಯಾಗಿದ್ದ ಅವರು ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜಿನಲ್ಲಿ ಕಲಿತರು. ವಾಣಿಜ್ಯ ದಲ್ಲಿ ಪದವಿ ಮತ್ತು ಕೊಂಕಣಿಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪಡೆದ ಅವರು ಯುನೈಟೆಡ್ ಸ್ಟೇಟ್ಸ್‌ನ ಬೈಬಲ್ ಸ್ಕೂಲ್‌ನಿಂದ ಐದು ಆನ್‌ಲೈನ್ ಡಿಪ್ಲೊಮಾಗಳನ್ನು ಕ್ರಿಶ್ಚಿಯನ್ ಥಿಯಾಲಜಿಯಲ್ಲಿ ಪರಿಣತಿ ಪಡೆದರು.

1964ರಲ್ಲಿ ಸಣ್ಣ ಕಥೆಯನ್ನು ಕೊಂಕಣಿಯಲ್ಲಿ ಬರೆಯಲು ಆರಂಭಿಸಿದ ಅವರು ಬಳಿಕ 33 ಕಾದಂಬರಿಗಳು, 100ಕ್ಕೂ ಅಧಿಕ ಸಣ್ಣ ಕಥೆಗಳನ್ನು ಬರೆದಿದ್ದಾರೆ. ಅವರ ಅನೇಕ ಸಣ್ಣ ಕಥೆಗಳು ಇಂಗ್ಲಿಷ್, ಕನ್ನಡ, ಹಿಂದಿ, ಕಾಶ್ಮೀರಿ, ಮಲಯಾಳಂ, ತಮಿಳು ಭಾಷೆಗಳಿಗೆ ಅನುವಾದಗೊಂಡಿವೆ.

ಎಡ್ವಿನ್ ಅವರ ಸಾಹಿತ್ಯ ಕೊಡುಗೆಗಳಿಗಾಗಿ ರಾಜ್ಯ, ಅಂತರ್ ರಾಜ್ಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದರು. ಅವರ ಪ್ರಸಿದ್ಧ ಸಣ್ಣ ಕಥೆ ‘ಎ ಕಪ್ ಆಫ್ ಹಾಟ್ ಕಾಫಿ’ ಜೈಕೋ ಬುಕ್ಸ್ ಪ್ರಕಟಿಸಿದ ಭಾರತೀಯ ಸಣ್ಣ ಕಥೆಗಳು ಸಂಕಲನ ದಲ್ಲಿ ಕಾಣಿಸಿಕೊಂಡಿದೆ. ಅವರ ಹೃದಯಸ್ಪರ್ಶಿ ಸಣ್ಣ ಕಥೆ ‘ಚಾಕೊಲೇಟ್‌ಗಳು’ ರೀಡರ್ಸ್ ಡೈಜೆಸ್ಟ್ ಗೈಡ್ ಟು ಫುಡ್, ವಿಶೇಷ ಕಲೆಕ್ಟರ್ಸ್ ಎಡಿಶನ್‌ನಲ್ಲಿ ಎರಡು ಬಾರಿ ಕಾಣಿಸಿಕೊಂಡಿದೆ.

ಅನುವಾದ ಕ್ಷೇತ್ರದಲ್ಲೂ ಎಡ್ವಿನ್ ತೊಡಗಿಸಿಕೊಂಡಿದ್ದು, ಇಂಗ್ಲಿಷ್‌ನಿಂದ ಕೊಂಕಣಿಗೆ (ನಾಗರಿ/ಕನ್ನಡ ಲಿಪಿ) ಅನೇಕ ಕೃತಿಗಳನ್ನು ಅನುವಾದಿಸಿದ್ದಾರೆ. 1995ರಲ್ಲಿ ಕೊಂಕಣಿ ಚಲನಚಿತ್ರ ‘ಬಾಕ್ಸ್‌ಸೇನ್’ಗೆ ಸಂಭಾಷಣೆ ಬರೆದಿದ್ದಾರೆ.

ಗೋವಾ ಕೊಂಕಣಿ ಅಕಾಡಮಿಯು ಅವರ 450 ಪುಟಗಳ ನಾಗರಿ ಲಿಪಿಯ ಕಾದಂಬರಿ ‘ಕಲ್ಲೆಂ ಭಂಗಾರ್’ನ್ನು ಪ್ರಕಟಿಸಿತು. ಈ ಕಾದಂಬರಿಗೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ 2013ರ ವರ್ಷದ ಅತ್ಯುತ್ತಮ ಪುಸ್ತಕ ಮತ್ತು ವಿಮಲಾ ವಿ. ಪೈ ವಿಶ್ವ ಕೊಂಕಣಿ ಪ್ರಶಸ್ತಿ ಲಭಿಸಿದೆ.

2015ರಲ್ಲಿ ಫೆಡರೇಶನ್ ಆಫ್ ಕೊಂಕಣಿ ಕ್ಯಾಥೋಲಿಕ್ ಅಸೋಸಿಯೇಶನ್ ಅವರನ್ನು ಗೌರವಿಸಿತ್ತು. ಕೊಂಕಣಿ ಕುಟಮ್ ಬಹರೈನ್ ಅವರಿಗೆ 2015ರಲ್ಲಿ ಕೊಂಕಣಿ ಸಾಹಿತ್ಯ ಜೀವಮಾನ ಪ್ರಶಸ್ತಿಯನ್ನು ನೀಡಿತು.

ಕೇಂದ್ರ ಸಾಹಿತ್ಯ ಅಕಾಡಮಿಯ (2008-2012) ಜನರಲ್ ಕೌನ್ಸಿಲ್‌ನ ಸದಸ್ಯರಾಗಿದ್ದ ಅವರು ಸಂಶೋಧನೆಗಾಗಿ ಫೆಲೋಶಿಪ್ ಪ್ರಶಸ್ತಿಗಳನ್ನು ನಿರ್ಧರಿಸುವ ಹೊಸದಿಲ್ಲಿಯ ಸಂಸ್ಕೃತಿ ಸಚಿವಾಲಯದ ತಜ್ಞರ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಗೋವಾ ವಿಶ್ವವಿದ್ಯಾನಿಲಯದ ಕೊಂಕಣಿ ಅಧ್ಯಯನ ಮಂಡಳಿಯಲ್ಲಿ ಹೆಚ್ಚುವರಿಯಾಗಿ ಸೇವೆ ಸಲ್ಲಿಸಿದ್ದರು. 1992ರಲ್ಲಿ ಕಾರವಾರದಲ್ಲಿ ನಡೆದ 11ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X