Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಟೆಕಾರು | ಸರಕಾರಿ ಜಮೀನು ಅತಿಕ್ರಮಿಸಿ...

ಕೋಟೆಕಾರು | ಸರಕಾರಿ ಜಮೀನು ಅತಿಕ್ರಮಿಸಿ ಟೆಂಟ್ ಹಾಕಲು ಯತ್ನ

ವಾರ್ತಾಭಾರತಿವಾರ್ತಾಭಾರತಿ22 Nov 2025 10:05 PM IST
share
ಕೋಟೆಕಾರು | ಸರಕಾರಿ ಜಮೀನು ಅತಿಕ್ರಮಿಸಿ ಟೆಂಟ್ ಹಾಕಲು ಯತ್ನ
ತಂತಿ ತೆರವುಗೊಳಿಸಿ ಎಚ್ಚರಿಕೆ ಫಲಕ ಅಳವಡಿಸಿದ ಅಧಿಕಾರಿಗಳು

ಉಳ್ಳಾಲ, ನ.22: ಕೋಟೆಕಾರು ಪಟ್ಟಣ ಪಂಚಾಯತ್‌ನ ಹನ್ನೆರಡನೇ ವಾರ್ಡ್‌ನ ಬನತ್ತಡಿ ಪ್ರದೇಶದ ಸರಕಾರಿ ಕುಮ್ಕಿ ಜಮೀನಿನಲ್ಲಿ ಶನಿವಾರ ಬೆಳಗ್ಗೆ ಸುಮಾರು ನೂರರಷ್ಟು ಮಂದಿ ಏಕಾಏಕಿ ಟೆಂಟ್ ಹಾಕಿ ಜಮೀನನ್ನು ಅತಿಕ್ರಮಣ ನಡೆಸಲು ಮುಂದಾಗಿದ್ದ ಘಟನೆ ನಡೆದಿದೆ.

ನೂರಾರು ಮಂದಿ ಬನತ್ತಡಿ ಪ್ರದೇಶದ ಸುಮಾರು ಎರಡೂವರೆ ಎಕರೆ ಜಮೀನಿನಲ್ಲಿ ಐದು ಸೆಂಟ್ಸ್‌ನಂತೆ ಜಾಗ ವಿಂಗಡಿಸಿ ತಂತಿಗಳನ್ನು ಕಟ್ಟಿ ಟೆಂಟ್ ಹಾಕಲು ಮುಂದಾಗಿದ್ದರು.

ಈ ಬಗ್ಗೆ ಮಾಹಿತಿ ತಿಳಿದು ಕೋಟೆಕಾರು ಪಪಂ ಗ್ರಾಮ ಕರಣಿಕೆ ನವ್ಯಾ, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕ ಪ್ರಮೋದ್ ಮತ್ತು ಉಳ್ಳಾಲ ಪೊಲೀಸರು ಮಧ್ಯಪ್ರವೇಶಿಸಿದ್ದು, ಸರಕಾರಿ ಜಮೀನನ್ನು ಅತಿಕ್ರಮಣ ಮಾಡಲು ಮುಂದಾಗಿದ್ದವರನ್ನು ತಡೆದಿದ್ದಾರೆ. ಬಳಿಕ ಅವರನ್ನು ಠಾಣೆಗೆ ಕರೆಸಿ ಮಾತುಕತೆ ನಡೆಸಿದ್ದಾರೆ.

ಬನತ್ತಡಿ ಎಂಬಲ್ಲಿನ ಸರಕಾರಿ ಕುಮ್ಕಿ ಜಮೀನಿನ 1.25 ಎಕರೆ ಪ್ರದೇಶದಲ್ಲಿ ಕೋಟೆಕಾರು ಪಪಂ ಆಡಳಿತವು ತ್ಯಾಜ್ಯ ನಿರ್ವಹಣಾ ಘಟಕವನ್ನು ನಿರ್ಮಿಸುವ ಯೋಜನೆ ರೂಪಿಸಿತ್ತು. ಯೋಜನೆಗಾಗಿ ಸ್ಥಳವನ್ನು ಸರ್ವೇ ಕೂಡ ಮಾಡಲಾಗಿತ್ತು. ಬನತ್ತಡಿ ಪ್ರದೇಶದ ಸರಕಾರಿ ಕುಮ್ಕಿ ಜಮೀನು ಕೋಟೆಕಾರು ಪಟ್ಟಣ ಪಂಚಾಯತ್ ಹೆಸರಿಗೆ ವರ್ಗಾವಣೆಗೊಂಡಿಲ್ಲ. ಈ ಪ್ರದೇಶದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸದಂತೆ ಸ್ಥಳೀಯರ ಆಕ್ಷೇಪವೂ ಎದುರಾಗಿತ್ತು. ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸರಕಾರಿ ಜಾಗದಲ್ಲಿ ಟೆಂಟ್ ಹಾಕುವ ಮೂಲಕ ಜನರು ಪ್ರತಿರೋಧ ತೋರಿಸಿದ್ದಾರೆಂದು ಹೇಳಲಾಗುತ್ತಿದೆ. ಕೋಟೆಕಾರು ಪಪಂ ಹಾಗೂ ತಾಲೂಕು ಕಂದಾಯ ಅಧಿಕಾರಿಗಳು ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿಗಳನ್ನು ತೆರವುಗೊಳಿಸಿ ಎಚ್ಚರಿಕೆಯ ಫಲಕವನ್ನು ಅಳವಡಿಸಿದ್ದಾರೆ.

ಮುಂದಿನ ಸೋಮವಾರ ಈ ವಿಚಾರದ ಕುರಿತಂತೆ ಉಳ್ಳಾಲ ತಾಲೂಕು ಪಂಚಾಯತ್ ಕಚೇರಿಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X