ಕೆಪಿಟಿ : ಅರೆಕಾಲಿಕ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು,ಜ.14: ನಗರದ ಕೆಪಿಟಿ (ಕರ್ನಾಟಕ ಪಾಲಿಟೆಕ್ನಿಕ್)ಯಲ್ಲಿ 2025-26ನೇ ಸಾಲಿನ ಅರೆಕಾಲಿಕ (ಪಾರ್ಟ್-ಟೈಮ್) ದ್ವಿತೀಯ ವಷರ್ದ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಂಬಂಧಪಟ್ಟ ವಿಷಯದಲ್ಲಿ 2 ವಷರ್ಗಳ ತಾಂತ್ರಿಕ ಸೇವಾನುಭವ ಹೊಂದಿರುವ ಹಾಗೂ ಎಸೆಸ್ಸೆಲ್ಸಿ ತೇರ್ಗಡೆ ಹೊಂದಿದ ನಂತರ ಯಾವುದೇ ಅವಧಿಯಲ್ಲಿ 2 ವಷರ್ಗಳ ಐಟಿಐ ಕೋರ್ಸ್/ದ್ವಿತೀಯ ಪಿಯುಸಿ ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ ಕರ್ನಾಟಕದಲ್ಲಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ಅರ್ಹ ಆಸಕ್ತ ಅಭ್ಯರ್ಥಿಗಳು ಜ.15 ರೊಳಗೆ ಕೆಪಿಟಿ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶ ಪ್ರಕ್ರಿಯೆಯನ್ನು ಜ.20ರೊಳಗೆ ನಡೆಸಲಾಗುತ್ತದೆ ಎಂದು ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





