ಡಿ.21ರಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ 'ಕ್ರೀಡೋತ್ಸವ '

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ 2025ನೇ ಸಾಲಿನ ಹೊನಲು-ಬೆಳಕಿನ ಕ್ರೀಡೋತ್ಸವವು ಡಿ.21ರಂದು ಸಂಜೆ 6ರಿಂದ ಸಂಸ್ಥೆಯ ವಿದ್ಯಾರ್ಥಿಗಳ ಹಲವು ಬಗೆಯ ಸಾಹಸಮಯ ಪ್ರದರ್ಶನಗಳೊಂದಿಗೆ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದ್ದಾರೆ.
ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, . ಪ್ರತಿವರ್ಷ ನಡೆಯುವ ಕ್ರೀಡಾಕೂಟದಲ್ಲಿ ಮಕ್ಕಳ ಸಾಹಸಮಯ ಪ್ರದರ್ಶನವು ಶಿಕ್ಷಣ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ಈ ಬಾರಿ ಸುಮಾರು 4 ಸಾವಿರದಷ್ಟು ಮಕ್ಕಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿಶು ನೃತ್ಯ, ಸಂಚಲನ, ಘೋಷ್ ಪ್ರದರ್ಶನ, ಜಡೆ ಕೋಲಾಟ, ನಿಯುದ್ಧ, ದೀಪಾರತಿ, ಯೋಗಾಸನ, ನೃತ್ಯ ಭಜನೆ, ಮಲ್ಲಕಂಬ, ತಿರುಗುವ ಮಲ್ಲಕಂಬ, ಟಿಕ್ ಟಿಕ್ ಪ್ರದರ್ಶನ, ಚೆಂಡೆ, ನೃತ್ಯ ವೈವಿಧ್ಯ, ಬೆಂಕಿ ಸಾಹಸ, ಚಕ್ರ ಸಮತೋಲನ, ಕಾಲ್ಚಕ್ರ, ಕೂಪಿಕಾ ಮೊದಲಾದ ಸಾಹಸಮಯ ಪ್ರದರ್ಶನಗಳನ್ನು ವಿದ್ಯಾರ್ಥಿಗಳು ನೀಡಲಿದ್ದಾರೆ.
ಮೈಸೂರು ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಚಲನಚಿತ್ರ ನಟ ಪ್ರಕಾಶ್ ಬೆಳವಾಡಿ, ಮನೋಜ್ ಸಿಂಗ್, ಸೀಮಾ ಬಿ.ಆರ್.ಶೆಟ್ಟಿ, ಉಮೇಶ್ ರಘುವಂಶಿ, ಡಾ.ವಿಜಯ ಜಿ.ಕಲಾಂತ್ರಿ, ರವಿಕಾಂತ್, ಡಾ.ಶಿಶಿರ್ ಶೆಟ್ಟಿ, ಸಂಪತ್ ಶೆಟ್ಟಿ ಮೊದಲಾದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿದ್ಯಾ ಕೇಂದ್ರದ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಉಪಸ್ಥಿತರಿದ್ದರು.







