ಕುದ್ರೋಳಿ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಮಸೂದ್‌ಗೆ ಸನ್ಮಾನ

ಮಂಗಳೂರು, ಜ.20: ಕುದ್ರೋಳಿಯ ಜಾಮಿಯಾ ಮಸೀದಿಯ ಅಧ್ಯಕ್ಷರಾಗಿ ಸತತ ಐದನೇ ಬಾರಿಗೆ ಅವಿರೋಧ ವಾಗಿ ಆಯ್ಕೆಯಾದ ಮಾಜಿ ವಿಧಾನ ಪರಿಷತ್ ಸದಸ್ಯ, ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಅವರನ್ನು ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು.
ಈ ಸಂದರ್ಭ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಸಿ. ಮಹಮೂದ್, ಹಾಜಿ ಕೆ.ಪಿ. ಅಹ್ಮದ್ ಪುತ್ತೂರು, ಹಾಜಿ ಕೆ.ಎಸ್. ಇಮ್ತಿಯಾಝ್ ಅಹ್ಮದ್ ಕಾರ್ಕಳ, ಮಾಜಿ ಮೇಯರ್ ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಹಾಜಿ ಮೂಸಾ ಮೊಯಿದಿನ್, ಕಾರ್ಯದರ್ಶಿಗಳಾದ ಅಬ್ದುಲ್ ಖಾದರ್ ವಿಟ್ಲ, ಡಿ.ಎಂ. ಅಸ್ಲಂ, ಡಾ. ಮುಹಮ್ಮದ್ ಆರಿಫ್ ಮಸೂದ್, ಸಿ.ಎಂ. ಹನೀಫ್, ಅಹ್ಮದ್ ಬಾವ ಬಜಾಲ್, ಎನ್.ಕೆ., ಅಬೂಬಕ್ಕರ್, ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಹಾಜಿ ಪಿ.ಪಿ. ಅಬ್ದುಲ್ ಮಜೀದ್, ಎಂ. ಅನ್ವರ್ ರಿಕೋ, ಎಂ.ಎ. ಅಶ್ರಫ್, ಹಾಜಿ ಮೊಯಿದಿನ್ ಮೋನು, ಅಬೀದ್ ಜಲಿಹಾಲ್, ಹಾಜಿ ಅಬ್ದುಲ್ ಮಜೀದ್ ಸಿತಾರ್, ಹಾಜಿ ಬಿ.ಎಸ್. ಹುಸೈನ್ ಜೋಕಟ್ಟೆ, ಹಾಜಿ ಮಕ್ಬೂಲ್ ಅಹ್ಮದ್, ಹಾಜಿ ಎಸ್.ಎ. ಖಲೀಲ್ ಅಹ್ಮದ್, ಇಕ್ಬಾಲ್ ಅಹ್ಮದ್ ಮುಲ್ಕಿ, ಹಾಜಿ ರಫೀಕ್ ಕೊಡಾಜೆ, ಅಬ್ದುಲ್ ಲತೀಫ್ ಕಂದಕ್, ಹಾಜಿ ಶಂಸುದ್ದೀನ್ ಎಚ್.ಬಿ.ಟಿ, ಶಂಶುದ್ದೀನ್ ಬಂದರ್, ನಾಸೀರ್ ಯಾದ್ಗಾರ್ ಉಪಸ್ಥಿತರಿದ್ದರು.





