Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡುಪು ಗುಂಪು ಹತ್ಯೆ ಪ್ರಕರಣ: ಗೃಹಸಚಿವರ...

ಕುಡುಪು ಗುಂಪು ಹತ್ಯೆ ಪ್ರಕರಣ: ಗೃಹಸಚಿವರ ಕ್ಷಮೆ ಯಾಚನೆ, ನೈಜ ಆರೋಪಿಗಳ ಬಂಧನಕ್ಕೆ ಸಂಯುಕ್ತ ನಾಗರಿಕ ವೇದಿಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 April 2025 2:30 PM IST
share
ಕುಡುಪು ಗುಂಪು ಹತ್ಯೆ ಪ್ರಕರಣ: ಗೃಹಸಚಿವರ ಕ್ಷಮೆ ಯಾಚನೆ, ನೈಜ ಆರೋಪಿಗಳ ಬಂಧನಕ್ಕೆ ಸಂಯುಕ್ತ ನಾಗರಿಕ ವೇದಿಕೆ ಆಗ್ರಹ

ಉಳ್ಳಾಲ: ಕುಡುಪು ಗುಂಪು ಹತ್ಯೆ ನಡೆದ ಯುವಕ ಅಖಿಲ ಭಾರತ ಕಾಂಗ್ರೆಸ್‌ ನ ಪ್ರಿಯಾಂಕ ಗಾಂಧಿಯವರ ವಯನಾಡ್‌ ಕ್ಷೇತ್ರದವನಾಗಿದ್ದು, ಅವರು ಹೆಚ್ಚಿನ ಮುತುವರ್ಜಿ ವಹಿಸಿ ಹೆಚ್ಚುವರಿ ತನಿಖೆಗೆ ಒತ್ತಾಯಿಸಬೇಕಿದೆ. ಕರ್ನಾಟಕ ಸರಕಾರ ಮೃತರ ಕುಟುಂಬಕ್ಕೆ ಪರಿಹಾರ ಒದಗಿಸಬೇಕಿದ್ದು, ಅಮಾನವೀಯ ಘಟನೆಯನ್ನು ಸಂಯುಕ್ತ ನಾಗರಿಕ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದು ಸಂಯುಕ್ತ ನಾಗರಿಕ ವೇದಿಕೆ ಉಳ್ಳಾಲ ತಾಲೂಕು ಅಧ್ಯಕ್ಷ ಯು.ಅಬ್ದುಲ್‌ ಸಲಾಂ ಹೇಳಿದ್ದಾರೆ.

ತೊಕ್ಕೊಟ್ಟು ಉಳ್ಳಾಲ ಪ್ರೆಸ್‌ ಕ್ಲಬ್‌ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಗುಂಪು ಹತ್ಯೆ ಉಡುಪಿ - ಮಂಗಳೂರು ಜನತೆಗೆ ನಾಚಿಕೆಗೇಡಿನ ಸಂಗತಿ. ಮಾನವೀಯತೆ ಇಲ್ಲದವರಿಂದ ಈ ಕೃತ್ಯ ನಡೆದಿದೆ. ನಾಯಿಗಳು ಜಗಳ ಆಡುವಾಗಲೂ ಅದರೊಳಗೆ ಬಿಡಿಸುವ ನಿಯತ್ತಿದೆ. ಆದರೆ ಕುಡುಪು ಯುವಕರಲ್ಲಿ ಇರದೇ ಇರುವುದು ನಾಚಿಕೆಗೇಡು. ಜಿಲ್ಲೆಯಲ್ಲಿ ನ್ಯಾಯಾಲಯದ ತೀರ್ಮಾನಕ್ಕಿಂತ ಸ್ವಯಂಘೋಷಿತ ತೀರ್ಮಾನಗಳನ್ನು ನೀಡುವ ಹುನ್ನಾರಗಳು ನಡೆಯುತ್ತಿದೆ. ತಕ್ಷಣವೇ ನೈಜ ಆರೋಪಿಗಳೆಲ್ಲರನ್ನೂ ಬಂಧಿಸಿ ಸೂಕ್ತ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಪ್ರ. ಕಾರ್ಯದರ್ಶಿ ಸಲಾಂ ಉಚ್ಚಿಲ್‌ ಮಾತನಾಡಿ, ರಾಜಕೀಯ ಪ್ರೇರಿತವಾಗಿ ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಮಾಡಬಾರದು. ಅಮಾಯಕರನ್ನು ಬಂಧಿಸದೇ ಕೃತ್ಯದ ಪ್ರಮುಖ ಆರೋಪಿಯ ಬಂಧನವಾಗಬೇಕು. ಪ್ರಕರಣ ಕುರಿತು ಬಾಲಿಶತನದ ಹೇಳಿಕೆ ನೀಡಿದ ರಾಜ್ಯ ಗೃಹಮಂತ್ರಿ ರಾಜ್ಯದ ಜನತೆಯ ಕ್ಷಮೆಯಾಚಿಸಿ ಹೇಳಿಕೆಯನ್ನು ಹಿಂಪಡೆಯಬೇಕು. ಮೃತ ಯುವಕ ವಯನಾಡಿನ ಪುಲ್ಪಲ್ಲಿ ನಿವಾಸಿ ಅಶ್ರಫ್‌ ಎಂದು ಗುರುತಿಸಲಾಗಿದೆ. ಹತ್ಯೆಗೆ ಸಂಬಂಧಿಸಿದ ವೀಡಿಯೋಗಳನ್ನು ವಶಪಡಿಸಿ ನೈಜ ಆರೋಪಿ ಹಾಗೂ ಬಿಜೆಪಿ ಮುಖಂಡ ರವೀಂದ್ರ ಎಂಬಾತನ ಬಂಧಿಸಬೇಕು ಎಂದು ಸಂಯುಕ್ತ ನಾಗರಿಕ ವೇದಿಕೆ ಆಗ್ರಹಿಸುತ್ತದೆ ಎಂದರು.

ಕಾರ್ಯದರ್ಶಿ ಹಿದಾಯತುಲ್ಲಾ ಮಾತನಾಡಿ, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಾಂಗ್ರೆಸ್‌ ಪಕ್ಷವನ್ನು ಜನ ಚುನಾಯಿಸಿದರು. ಆದರೆ ಗೃಹಮಂತ್ರಿಗಳ ಹೇಳಿಕೆಯೇ ನಾಚಿಕೆಗೇಡು, ಸತ್ಯಾಸತ್ಯತೆ ತಿಳಿಯುವ ಮೊದಲೇ ಹೇಳಿಕೆಯನ್ನು ನೀಡುತ್ತಾರೆ. ಥಳಿಸಿ ಕೊಂದಿದ್ದನ್ನು ಸಮರ್ಥನೆ ಮಾಡುತ್ತಾರೆಂದಾದಲ್ಲಿ, ಜಿಲ್ಲೆಯಲ್ಲಿ ಹಿಂದುತ್ವದ ಸ್ವಯಂಘೋಷಿತ ನಾಯಕರು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಾ ಬಂದರೂ ಕ್ರಮ ತೆಗೆದುಕೊಳ್ಳಲಾಗುತ್ತಿಲ್ಲ. ರಾಜ್ಯ ಸರಕಾರ ಜಿಲ್ಲೆಯ ಶಾಂತಿಯ ಕಾಪಾಡುವತ್ತ ಗಮನಹರಿಸಲಿ ಎಂದರು.

ಸಂಚಾಲಕ ಇರ್ಷಾದ್‌ ಅಜ್ಜಿನಡ್ಕ ಮಾತನಾಡಿ, ಯುವಕನ ಹತ್ಯೆಯ ನಂತರ ಆತನಿಗೆ ಸಂಬಂಧಿಸಿದ ಮೊಬೈಲ್‌, ಆಧಾರ್‌ ಕಾರ್ಡ್‌, ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಮರೆಮಾಚಲಾಗಿದೆ. ಸಾಕ್ಷರತೆಯ ಜಿಲ್ಲೆಯಲ್ಲಿ ಉತ್ತರ ಭಾರತದಂತಹ ಘಟನೆ ನಡೆಯುತ್ತಿರುವುದು ಖಂಡನೀಯ. ಪ್ರಕರಣದಲ್ಲಿ ಒಟ್ಟು 30 ಆರೋಪಿಗಳಿದ್ದಾರೆ. ಪ್ರಮುಖ ಆರೋಪಿ ಮಾಜಿ ಕಾರ್ಪೊರೇಟರ್‌ ಪತಿ ಆಗಿದ್ದಾನೆ. ಹಲವರು ಈಗಲೂ ಮನೆಯಲ್ಲೇ ಇದ್ದಾರೆ. ಎಲ್ಲರನ್ನೂ ಬಂಧಿಸಿ ಮೃತ ಯುವಕನಿಗೆ ನ್ಯಾಯ ದೊರಕಿಸಿಕೊಡಬೇಕಿದೆ. ಬಿಜೆಪಿ ಮತ್ತು ಆರ್‌ ಎಸ್‌ ಎಸ್‌ ಗೆ ಗುಂಪು ಹತ್ಯೆ ಪ್ರಕರಣ ನ್ಯಾಯಾಲಯದಲ್ಲಿ ಸಾಕ್ಷಿ ಕೊರತೆಯಿಂದ ಬಿದ್ದು ಹೋಗುತ್ತದೆ ಅನ್ನುವ ಧೈರ್ಯದಿಂದ ಕೃತ್ಯ ಎಸಗಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಅಬ್ಬಾಸ್‌ ಹಾಜಿ ಪೆರಿಬೈಲ್‌, ಶಬೀರ್‌ ತಲಪಾಡಿ, ಹಿದಾಯತುಲ್ಲಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X