Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೂರಲ್ಪಾಡಿ ಟೋಲ್‌ಗೇಟ್ ನಿರ್ಮಾಣ...

ಸೂರಲ್ಪಾಡಿ ಟೋಲ್‌ಗೇಟ್ ನಿರ್ಮಾಣ ಸ್ಥಳಕ್ಕೆ ಸಮಾನ ಮನಸ್ಕ ಸಂಘಟನೆಗಳ‌ ಮುಖಂಡರ‌ ಭೇಟಿ, ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ8 Sept 2024 9:43 PM IST
share
ಸೂರಲ್ಪಾಡಿ ಟೋಲ್‌ಗೇಟ್ ನಿರ್ಮಾಣ ಸ್ಥಳಕ್ಕೆ ಸಮಾನ ಮನಸ್ಕ ಸಂಘಟನೆಗಳ‌ ಮುಖಂಡರ‌ ಭೇಟಿ, ವೀಕ್ಷಣೆ

ಬಜ್ಪೆ: ಮಂಗಳೂರು, ಮೂಡಬಿದ್ರೆ, ಕಾರ್ಕಳ ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ನಂತೂರಿನಿಂದ 17 ಕಿ.ಮೀ. ದೂರದ ಸೂರಲ್ಪಾಡಿ ಮಸೀದಿ ಸಮೀಪ ನಿರ್ಮಿಸಲಾಗುತ್ತಿರುವ ಟೋಲ್ ಸಂಗ್ರಹ ಪ್ಲಾಝಾ ಕಾಮಗಾರಿ ಸ್ಥಳಕ್ಕೆ ವಿವಿಧ ಸಂಘಟನೆಗಳ ಮುಖಂಡರು ರವಿವಾರ ಭೇಟಿ ನೀಡಿ ವೀಕ್ಷಣೆ‌ ನಡೆಸಿದರು.

ಬಳಿಕ ಮಾತನಾಡಿದ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಸ್ಥೆ, ನಿಧಾನಗತಿ, ಸ್ವಜನ ಪಕ್ಷಪಾತದ ದೂರುಗಳು, ಟೋಲ್ ಸಂಗ್ರಹ ಪ್ಲಾಝಾ ನಿರ್ಮಾಣದ ಸ್ಥಳವನ್ನು ಅವೈಜ್ಞಾನಿಕವಾಗಿ ಗುರುತಿಸಿರುವ ಕುರಿತ ದೂರುಗಳು ಬರುತ್ತಿರುವ ಹಿನ್ನೆಲೆ ಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.

ನಂತೂರು, ಮೂಡಬಿದ್ರೆ, ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೆ ಏರಿಸುವ ಕಾಮಗಾರಿಗೆ ಚಾಲನೆ ದೊರತು ಏಳೆಂಟು ವರ್ಷಗಳಾದರೂ ಕನಿಷ್ಟ ಶೇ‌. 50 ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಅದರಲ್ಲೂ ಅತಿ ವಾಹನ ದಟ್ಟಣೆಯ ನಂತೂರಿ ನಿಂದ ವಾಮಂಜೂರು ವರಗಿನ ಹೆದ್ದಾರಿಯಲ್ಲಿ ಕಾಮಗಾರಿಯೇ ಆರಂಭಗೊಂಡಿಲ್ಲ. ಕೆತ್ತಿಕಲ್ ಬಳಿ ಗುಡ್ಡವನ್ನು ತೀರಾ ಅಪಾಯಕಾರಿಯಾಗಿ ಕತ್ತರಿಸಿರುವುದರಿಂದ ಬೃಹತ್ ಗಾತ್ರದ ಇಡೀ ಗುಡ್ಡವೇ ಕುಸಿಯುವ ಅಪಾಯಕಾರಿ ಸ್ಥಿತಿ ಎದುರಾ ಗಿದೆ. ಗುಡ್ಡದ ಮೇಲ್ಭಾಗದ ನಿವಾಸಿಗಳು ಮನೆ ತೊರೆದು ಬೀದಿ ಪಾಲಾಗಿದ್ದಾರೆ. ಕೈಕಂಬದ ಬಳಿ ಮುಚ್ಚಿದ ಮೇಲ್ಸೇತುವೆ ನಿರ್ಮಾಣದಿಂದ ಇಡೀ ಪೇಟೆಯೇ ನಾಶದ ಭೀತಿ ಎದುರಿಸುತ್ತಿದೆ. ಗುರುಪುರ ಪೇಟೆಯನ್ನು ಉಳಿಸುವ ಉದ್ದೇಶದ ನೆಪ ದಲ್ಲಿ ಬೈಪಾಸ್ ರಸ್ತೆ ನಿರ್ಮಿಸುತ್ತಿರುವುದು ಸ್ಥಳೀಯವಾಗಿ ಭೂಮಿ ಖರೀದಿಸಿರುವ ಪ್ರಭಾವಿ ರಿಯಲ್ ಎಸ್ಟೇಟ್ ಲಾಭಿಗಳ ಹಿತಾಸಕ್ತಿಗಳಿಗಾಗಿ ಎಂಬ ಆರೋಪ ಬಲವಾಗಿ ಕೇಳಿಬರುತ್ತಿದೆ. ಐದಾರು ಕೀ ಮೀ ಉದ್ದದ ಈ ಬೈಪಾಸ್ ನಿಂದ ಹೆದ್ದಾರಿ ನಿರ್ಮಾಣದ ಬಜೆಟ್ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇದು ಟೋಲ್ ದರವನ್ನು ದುಬಾರಿಯಾಗಿಸಲಿದೆ. ಈ ರಸ್ತೆ ಯಲ್ಲಿ ಪ್ರಯಾಣಿಸುವ ವಾಹನ ಸವಾರರು ಇದರ ಭಾರವನ್ನು ಹೊರಬೇಕಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಹೆದ್ದಾರಿ ಕಾಮಗಾರಿ ಶೇ.50 ಶೇಕಡಾ ಪೂರ್ಣಗೊಳ್ಳದೆ ತರಾತುರಿಯಿಂದ ಟೋಲ್ ಗೇಟ್ ನಿರ್ಮಿಸುತ್ತಿರುವುದು ಕಾಮ ಗಾರಿ ಪೂರ್ಣಗೊಳ್ಳದೆ ಬಲವಂತದ ಟೋಲ್ ಸುಲಿಗೆ ಆರಂಭಗೊಳ್ಳುವ ಸಾಧ್ಯತೆ ಕುರಿತು ನಾಗರಿಕರಲ್ಲಿ ಆತಂಕ ಮನೆ ಮಾಡಿದೆ. ಅದಲ್ಲದೆ, ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ನಾಗರಿಕರ, ಸ್ಥಳೀಯರ ಯಾವುದೇ ದೂರುಗಳಿಗೆ ಹೆದ್ದಾರಿ ಪ್ರಾಧಿಕಾರ ಸ್ಪಂದಿಸುತ್ತಿಲ್ಲ, ಪರಿಗಣಿಸುತ್ತಿಲ್ಲ ಎಂಬ ಆಕ್ರೋಶವೂ ಸಾರ್ವಜನಿಕರಲ್ಲಿದೆ. ಈ ಎಲ್ಲಾ ದೂರುಗಳು, ಆತಂಕದ ಹಿನ್ನೆಲೆಯಲ್ಲಿ ಇಂದು ಸೂರಲ್ಪಾಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಟೋಲ್ ಪ್ಲಾಜ಼ಾ ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾ ಯಿತು ಎಂದು ಅವರು ಮಾಹಿತಿ ನೀಡಿದರು.

ನಿಯೋಗದಲ್ಲಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಸಾಮಾಜಿಕ ಕಾರ್ಯಕರ್ತ ಬಾವಾ ಪದರಂಗಿ, ಡಿವೈಎಫ್ಐ ಮುಂದಾಳು ಶ್ರೀನಾಥ್ ಕುಲಾಲ್, ಕಾರ್ಮಿಕ ನಾಯಕರಾದ ನೋಣಯ್ಯ ಗೌಡ, ಗೋಪಾಲ ಮೂಲ್ಯ, ಆದಿವಾಸಿ ಹಕ್ಕುಗಳ ಸಮಿತಿಯ ಕರಿಯ ವಾಮಂಜೂರು ಉಪಸ್ಥಿತರಿದ್ದರು.

ನಿರ್ಮಾಣ ಹಂತದಲ್ಲಿರುವ ಸೂರಲ್ಪಾಡಿ ಟೋಲ್ ಫ್ಲಾಝಾ ತಲಪಾಡಿ ಟೋಲ್ ಸಂಗ್ರಹ ಕೇಂದ್ರದಿಂದ 36 ಕಿ ಮೀ, ಹೆಜಮಾಡಿ ಟೋಲ್ ಗೇಟ್ ನಿಂದ 45 ಕಿ ಮೀ, ಬಿ ಸಿ ರೋಡ್ ಟೋಲ್ ಗೇಟ್ ನಿಂದ 35 ಕಿ ಮೀ ಅಂತರದಲ್ಲಿದೆ. ಇದು ಒಂದು ಟೋಲ್ ಗೇಟ್ ನಿಂದ ಮತ್ತೊಂದು ಟೋಲ್ ಗೇಟ್ ನ ನಡುವೆ ಇರಬೇಕಾದ ಅಂತರದ ನಿಯಮವನ್ನು ಉಲ್ಲಂಘಿ ಸುತ್ತದೆ ಹಾಗೂ ಮಸೀದಿ, ಮದುವೆ ಮಂಟಪ, ಶಾಲೆಗಳಿಗೆ ಕೂಗಳತೆ ದೂರದಲ್ಲಿ ನಿರ್ಮಿಸಲಾಗುತ್ತಿದೆ ಎಂಬ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X