Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳಾಲದ...

‘ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳಾಲದ ಬ್ಯಾರಿ ಮುಸ್ಲಿಮರ ಪಾತ್ರ’ದ ಕುರಿತು ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ13 Aug 2023 6:10 PM IST
share
‘ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳಾಲದ ಬ್ಯಾರಿ ಮುಸ್ಲಿಮರ ಪಾತ್ರ’ದ ಕುರಿತು ಉಪನ್ಯಾಸ

ಕೊಣಾಜೆ: ಬ್ಯಾರಿ ಲೇಖಕರು ಮತ್ತು ಕಲಾವಿದರನ್ನು ಒಳಗೊಂಡ ‘ಮೇಲ್ತೆನೆ’ ಸಂಘಟನೆಯ ವತಿಯಿಂದ ‘ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳಾಲ ತಾಲೂಕಿನ ಬ್ಯಾರಿ ಮುಸ್ಲಿಮರ ಪಾತ್ರ’ದ ಕುರಿತು ಉಪನ್ಯಾಸ ಕಾರ್ಯಕ್ರಮವು ಕೊಣಾಜೆ ಸಮೀಪದ ನಡುಪದವಿನ ಹಯಾತುಲ್ ಇಸ್ಲಾಂ ಮದ್ರಸದ ಹಾಲ್‌ನಲ್ಲಿ ರವಿವಾರ ನಡೆಯಿತು.

ನಡುಪದವಿನ ಅಲ್ ಉಮರ್ ಮಸೀದಿಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಲೇಖಕರ ಸಂಘದ ಉಪಾಧ್ಯಕ್ಷ ಆಲಿಕುಂಞಿ ಪಾರೆ, ಮದನಿ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಇಸ್ಮಾಯೀಲ್ ಟಿ., ಪಕ್ಕಲಡ್ಕ ಸ್ನೇಹ ಪಬ್ಲಿಕ್ ಸ್ಕೂಲ್‌ನ ಶಿಕ್ಷಕ ಅಶೀರುದ್ದೀನ್ ಸಾರ್ತಬೈಲ್ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಅಲ್ ಉಮರ್ ಮಸ್ಜಿದ್‌ನ ಅಧ್ಯಕ್ಷ ನಾಸಿರ್ ಎನ್.ಎಸ್.‘ಸ್ವಾತಂತ್ರ್ಯ ಹೋರಾಟದಲ್ಲಿ ಬ್ಯಾರಿ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಬದಲಾದ ಕಾಲಘಟ್ಟದಲ್ಲಿ ಅದನ್ನು ಮರೆಮಾಚುವ ಪ್ರಯತ್ನ ನಡೆಯುತ್ತಿವೆ. ಈ ಸಂದರ್ಭ ‘ಮೇಲ್ತೆನೆ’ ಸಂಘಟನೆಯು ವಾಸ್ತವ ಸಂಗತಿಯನ್ನು ಯುವ ಪೀಳಿಗೆಯ ಮುಂದಿಡಲು ನಡೆಸುತ್ತಿರುವ ಕೆಲಸ ಶ್ಲಾಘನೀಯ. ಬ್ಯಾರಿ ಮುಸ್ಲಿಮರಲ್ಲಿ ನಾಯಕತ್ವದ ಗುಣವಿದೆ. ಹಾಗಾಗಿ ಯಾರೂ ಕೂಡ ಹಿಂಬಾಲಕರಾಗದೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕಿದೆ ಎಂದರು.

ಕೊಣಾಜೆ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ನಝರ್ ಷಾ ಪಟ್ಟೋರಿ ಶುಭ ಹಾರೈಸಿದರು. ಮಸೀದಿಯ ಖತೀಬ್ ಅಬ್ದುಲ್ ಮಜೀದ್ ನಿಝಾಮಿ ದುಆಗೈದರು. ಮೇಲ್ತೆನೆಯ ಅಧ್ಯಕ್ಷ ಬಶೀರ್ ಕಲ್ಕಟ್ಟ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮೇಲ್ತೆನೆಯ ಮಾಜಿ ಅಧ್ಯಕ್ಷರಾದ ಹಂಝ ಮಲಾರ್, ಮುಹಮ್ಮದ್ ಬಾಷಾ ನಾಟೆಕಲ್, ಜೊತೆ ಕಾರ್ಯದರ್ಶಿ ಬಿಎಂ ಕಿನ್ಯ, ಸದಸ್ಯ ಆಸೀಫ್ ಬಬ್ಬುಕಟ್ಟೆ, ಬಾಳೆಪುಣಿ ಗ್ರಾಪಂ ಸದಸ್ಯ ಸಿಎಂ ಶರೀಫ್, ಪುತ್ತು ಉಸ್ತಾದ್, ಮಸೀದಿಯ ಆಡಳಿತ ಕಮಿಟಿಯ ಸದಸ್ಯರಾದ ಎಸ್.ಎ. ಉಸ್ಮಾನ್, ಬಾವಾ ಕಟೊಡಿ, ಇಸ್ಮಾಯೀಲ್ ಸಿ.ಎಚ್., ಅಬೂಬಕರ್ ಪಾಲ್ಗೊಂಡಿದ್ದರು.

ಮೇಲ್ತೆನೆಯ ಸದಸ್ಯ ಇಬ್ರಾಹೀಂ ನಡುಪದವು ಸ್ವಾಗತಿಸಿದರು. ಮಾಜಿ ಅಧ್ಯಕ್ಷ ಬಶೀರ್ ಅಹ್ಮದ್ ಕಿನ್ಯ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮಂಗಳೂರ ರಿಯಾಝ್ ಕಾರ್ಯಕ್ರಮ ನಿರೂಪಿಸಿದರು.

Tags

Lecture
share
ವಾರ್ತಾಭಾರತಿ
ವಾರ್ತಾಭಾರತಿ
Next Story
X