Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಘಟನೆಯನ್ನು ತಿರುಚಿ ಸುಳ್ಳು ನಿರೂಪಣೆ...

ಘಟನೆಯನ್ನು ತಿರುಚಿ ಸುಳ್ಳು ನಿರೂಪಣೆ ಮಾಡಿ ಪ್ರಚಾರಕ್ಕೆ ಬಳಸಿದರೆ ಕಾನೂನು ಕ್ರಮ: ದ.ಕ. ಜಿಲ್ಲಾ ಎಸ್.ಪಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 Oct 2025 11:09 PM IST
share
ಘಟನೆಯನ್ನು ತಿರುಚಿ ಸುಳ್ಳು ನಿರೂಪಣೆ ಮಾಡಿ ಪ್ರಚಾರಕ್ಕೆ ಬಳಸಿದರೆ ಕಾನೂನು ಕ್ರಮ: ದ.ಕ. ಜಿಲ್ಲಾ ಎಸ್.ಪಿ ಎಚ್ಚರಿಕೆ
ಗೋ ಸಾಗಾಟ ಆರೋಪಿಯ ಕಾಲಿಗೆ ಗುಂಡೇಟು ಪ್ರಕರಣ

ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಷೆ ಮಾಡಬಹುದು ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಠಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಶ್ವರಮಂಗಲ ಎಂಬಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು ವಶಕ್ಕೆ ಪಡೆದು, ಓರ್ವ ಆರೋಪಿಯ ಕಾಲಿಗೆ ಗುಂಡೇಟು ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೀಡಿರುವ ಪ್ರಕಟಣೆಯಲ್ಲಿ ಈ ವಿಚಾರ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಕೈಯಲ್ಲಿ ಕತ್ತಿ ಹಿಡಿದುಕೊಂಡು ಲಾರಿಯ ಹಗ್ಗ ಮತ್ತು ಟರ್ಪಾಲ್ ಕೊಯ್ಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಒಳಗೊಂಡಂತೆ ಪುತ್ತೂರಿನಲ್ಲಿ ನಡೆದ ಘಟನೆಯ ಬಗ್ಗೆ ಸಮಗ್ರ ವಿವರಣೆ ನೀಡಿರುವ ಎಸ್‌ಪಿ ಅವರು ಈ ಘಟನೆಯ ನಂತರ ಪೊಲೀಸರ ಜೊತೆಗೆ ಸ್ಥಳೀಯರು ಹಾಗೂ ಅರುಣ್ ಕುಮಾರ್ ಪುತ್ತಿಲ ಜಾನುವಾರುಗಳನ್ನು ವಾಹನದಿಂದ ಇಳಿಸುವ ಕೆಲಸ ಮಾಡುತ್ತಿರುವುದಾಗಿದೆ. ಜಾನುವಾರುಗಳ ಇನ್ನಷ್ಟು ಸಾವನ್ನು ತಪ್ಪಿಸುವ ಉದ್ದೇಶದಿಂದ ಪೊಲೀಸ್ ನಿರೀಕ್ಷಕರು ಅನುಮತಿ ಕೊಟ್ಟಿರುವುದು ಕಂಡುಬಂದಿರುತ್ತದೆ. ಈ ಪ್ರಕರಣದಲ್ಲಿ, ಯಾವುದೇ ಧಾರ್ಮಿಕ ಸಂಘಟನೆ ಅಥವಾ ವ್ಯಕ್ತಿಯೊಂದಿಗೆ ಪೊಲೀಸರ ಯಾವುದೇ ಸಹಭಾಗಿತ್ವ ಅಥವಾ ದುರುದ್ದೇಶ ಕಂಡುಬಂದಿಲ್ಲ. ಆದರೆ ದೂರವಾಣಿಯಲ್ಲಿ ಮಾತನಾಡುವಾಗ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ನಂತರ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಾಯ ತೆಗೆದು ಕೊಂಡಿರುವುದು ಇನ್ಸ್ಪೆಕ್ಟರ್ ಅವರ ತಪ್ಪಾಗಿರುತ್ತದೆ. ಆದ್ದರಿಂದ ಇನ್ಸ್ಪೆಕ್ಟರ್‌ಗೆ ಚಾರ್ಜ್ ಮೆಮೊ ನೀಡಲಾಗುತ್ತದೆ. ಮುಂದಿನ ದಿವಸಗಳಲ್ಲಿ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ಮಾಡಲು ಅವಕಾಶ ನೀಡದೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗುವುದು.

ವಾಹನವನ್ನು ಪೋಲಿಸರು ಹಿಂಬಾಲಿಸಿ ಬಳಿಕ ನಿಲ್ಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿರುತ್ತಾರೆ. ವಾಹನ ನಿಲ್ಲಿಸುವಲ್ಲಿ ಯಾವುದೇ ಸಂಸ್ಥೆಯ ಪಾತ್ರವು ಇರುವುದಿಲ್ಲ. ಪ್ರಕರಣವನ್ನು ನ್ಯಾಯಸಮ್ಮತ ತನಿಖೆಗಾಗಿ ಮರು ದಿನವೇ ಪುತ್ತೂರು ಉಪವಿಭಾಗದ ವ್ಯಾಪ್ತಿಯಿಂದ ವರ್ಗಾಯಿಸಲಾಯಿತು.

ಈ ಘಟನೆಯ ನಂತರ ಪಿಎಸೈ ಬೆಳ್ಳಾರೆ ಹಾಗೂ ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದರು. ಉಳಿದ ಅಧಿಕಾರಿಗಳು ತನಿಖಾ ಕ್ರಮದಲ್ಲಿ ತೊಡಗಿಸಿಕೊಂಡಿದ್ದರು ಹಾಗೂ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸುತ್ತಿದ್ದರು. ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಬಂದು ಒಂದು ಜಾನುವಾರು ಸತ್ತಿರುವುದನ್ನು ಗಮನಿಸಿ ಉಳಿದ ಜಾನುವಾರುಗಳಿಗೆ ತೊಂದರೆಯಾಗುತ್ತದೆ ಆದ್ದರಿಂದ ಅದರಲ್ಲಿ ಇರುವ ಜಾನುವಾರುಗಳನ್ನು ಇಳಿಸಬಹುದೇ ಎಂದು ಕೇಳಿರುವುದಾಗಿ ಗೊತ್ತಾಗಿರುತ್ತದೆ. ನಂತರ ಕಾನ್ಸ್ಟೇಬಲ್ ಅವರು ಇನ್ಸ್ಪೆಕ್ಟರ್‌ಗೆ ದೂರವಾಣಿ ಮೂಲಕ ವಿಷಯ ತಿಳಿಸುವಾಗ ಅರುಣ್ ಕುಮಾರ್ ಪುತ್ತಿಲ ಕಾನ್ಸ್ಟೇಬಲ್ ರಲ್ಲಿ ಮೊಬೈಲ್ ಕೇಳಿ ಪಡೆದುಕೊಂಡು ಇನ್ಸ್ಪೆಕ್ಟರ್ ಜೊತೆ ಮಾತನಾಡಿರುವುದಾಗಿದೆ. ಅದಕ್ಕೆ ಇನ್ಸ್ಪೆಕ್ಟರ್ ರವರು ಅನುಮತಿ ಕೊಟ್ಟಿರುತ್ತಾರೆ ಎಂದು ಕಂಡುಬಂದಿರುತ್ತದೆ. ಆದರೆ ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯು ಬೇರೆಯದೇ ರೀತಿಯಲ್ಲಿ ಪ್ರಚಾರಗೊಂಡಿರುತ್ತದೆ ಎಂದು ಎಸ್ ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X