Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾನವೀಯತೆ ಎತ್ತಿ ಹಿಡಿಯೋಣ: ಮಂಗಳೂರು...

ಮಾನವೀಯತೆ ಎತ್ತಿ ಹಿಡಿಯೋಣ: ಮಂಗಳೂರು ಬಿಷಪ್ ರಿಂದ ಕ್ರಿಸ್ಮಸ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ23 Dec 2024 3:29 PM IST
share
ಮಾನವೀಯತೆ ಎತ್ತಿ ಹಿಡಿಯೋಣ: ಮಂಗಳೂರು ಬಿಷಪ್ ರಿಂದ ಕ್ರಿಸ್ಮಸ್ ಸಂದೇಶ

ಮಂಗಳೂರು, ಡಿ.23: ಕ್ರಿಸ್ಮಸ್ ನಮ್ಮ ಮಾನವೀಯತೆಯ ಅತ್ಯುನ್ನತ ಘನತೆಯನ್ನು ಅರಿಯಲು ಒಂದು ಆಹ್ವಾನ. ಪ್ರೀತಿ ಮತ್ತು ಇತರರನ್ನು ಅರ್ಥಮಾಡಿಕೊಳ್ಳಲು ನಮಗಿರುವ ಎಲ್ಲಾ ಅಡೆತಡೆಗಳ ಗೋಡೆಗಳನ್ನು ಮೀರಬಲ್ಲುದು ಎಂಬ ಸತ್ಯವನ್ನು ಈ ಹಬ್ಬ ಜ್ಞಾಪಿಸುತ್ತದೆ. ಆದುದರಿಂದ, ಈ ಕ್ರಿಸ್ಮಸ್ ಸಮಯದಲ್ಲಿ ನಾವು ಮಾನವೀಯತೆಯನ್ನು ಎತ್ತಿ ಹಿಡಿಯೋಣ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಬಿಷಪ್ ಅ.ವಂ. ಡಾ.ಪೀಟರ್ ಪೌಲ್ ಸಲ್ದಾನ ಸಂದೇಶ ನೀಡಿದ್ದಾರೆ.

ಅವರು ಸೋಮವಾರ ನಗರದ ಕೊಡಿಯಾಲ್ ಬೈಲ್ ನ ಬಿಷಪ್ ಹೌಸ್ ನಲ್ಲಿ ಕರೆದ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಪ್ರತೀ ವರ್ಷ ಕ್ರಿಸ್ಮಸ್ ನಮಗೆ ಹೊಸ ಸಂದೇಶವನ್ನು ತರುತ್ತದೆ.ಯೇಸು ಕ್ರಿಸ್ತರು ನಮ್ಮ ಹೃದಯಗಳಲ್ಲಿ ಶಾಂತಿ ಹಾಗೂ ಭರವಸೆಯನ್ನು ತರುತ್ತಾರೆ. ಆಯಾಸಗೊಂಡ ಈ ಜಗತ್ತಿಗೆ ಯೇಸು, ಅಚ್ಚರಿಯ ತಾಜಾತನವನ್ನು ನೀಡುವ ಕಾರಂಜಿ ಇದ್ದಂತೆ. ಕ್ರಿಸ್ಮಸ್ ದೇವರು ಮತ್ತು ಮನುಷ್ಯರ ನಡುವೆ, ಅಂತೆಯೇ ಮನುಷ್ಯ-ಮನುಷ್ಯರ ನಡುವಿನ ಬದುಕಿನ ಸಂಬಂಧಗಳನ್ನು ಸೂಚಿಸುವ ಆಚರಣೆಯಾಗಿದೆ. ದೇವಪುತ್ರನು ಮಾನವನಾಗಿದ್ದಾನೆ ಎಂಬುದೇ ನಮ್ಮ ಸಂತೋಷಕ್ಕೆ ಕಾರಣ ದೇವರು ನಮ್ಮೊಡನೆ ಇದ್ದಾರೆ ಎಂಬ ಭರವಸೆ ನೀಡುವುದಕ್ಕಾಗಿಯೇ ಅವರು ನಮ್ಮ ನಡುವೆ ಇಳಿದು ಬಂದಿದ್ದಾರೆ ಎಂದವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕತ್ತಲೆಯ ಮೋಡಗಳು ನಮ್ಮ ಮೇಲಿವೆ. ಹೆಚ್ಚು ಹೆಚ್ಚು ಜನರು ಯುದ್ಧ, ಆತಂಕ, ಸ್ಥಳಾಂತರ ಹಾಗೂ ಅತೀವ ದುಃಖದಿಂದ ತತ್ತರಿಸುತ್ತಿರುವುದು ನಮಗೆ ಕಾಣುತ್ತಿದೆ. ದೇವರು ನಮ್ಮೊಡನೆ ಇದ್ದಾರಾದರೆ, ಈ ಮರಣದ ಸಂಸ್ಕೃತಿ ಯಾಕಾಗಿ ಪ್ರಬಲವಾಗುತ್ತಿದೆ? ಮಾನವರಲ್ಲಿ ಏಕೆ ಇಷ್ಟೊಂದು ಸಂಘರ್ಷ ಮತ್ತು ವಿಭಜನೆ ಉಂಟಾಗುತ್ತಿದೆ ಹಾಗೂ ದಿನ ಹೋದಂತೆ ಪರಿಸ್ಥಿತ ಹದೆಗೆಡುತ್ತಿದೆ? ಈ ಪ್ರಶ್ನೆಗಳನ್ನು ನಾವು ಕೇಳುತ್ತಿರುತ್ತೇವೆ. ಇಂತಹ ಕಠಿಣ ಸಮಯದಲ್ಲಿ ಯೇಸು ಕ್ರಿಸ್ತರು ಶಾಂತಿ ಹಾಗೂ ಭರವಸೆಯ ರಾಜಕುಮಾರನಾಗಿ ಕಾಣುವುದು ಹೇಗೆ? ದೇವರು ನಮ್ಮ ಸಂಘರ್ಷಗಳಿಗೆ ಕಾರಣರಲ್ಲ ಎಂಬ ಭರವಸೆಯನ್ನು ಯೇಸು ನೀಡುತ್ತಾರೆ. ಸಂಕಷ್ಟಗಳ ಕಾರಣ ಮನುಷ್ಯನ ಸ್ವಾರ್ಥ ಮತ್ತು ಸ್ವ ಕೇಂದ್ರಿತ ನಿಲುವು. ಕೆಲವರ ಮುಕ್ತ ಆಯ್ಕೆಯಿಂದಾಗಿ ಹಲವರು ಸಂಕಷ್ಟ ಕ್ಕೊಳಗಾಗುತ್ತಾರೆ. ಆದರೆ ತಕ್ಕ ಮಟ್ಟಿಗೆ ನಾವೆಲ್ಲರೂ ಈ ಪರಿಸ್ಥಿತಿಗೆ ಹೊಣೆ ಗಾರರಾಗಿದ್ದೇವೆ ಎಂಬುವುದನ್ನು ಮರೆಯಬಾರದು. ಯೇಸುವಿನ ಒಳ್ಳೆಯತನದ ಬೆಳಕಿನ ಮುಂದೆ ನಮ್ಮನ್ನು ನಾವೇ ಒಡ್ಡಿಕೊಂಡರೆ ಸುಲಭವಾಗಿ ನಮ್ಮ ದೋಷಗಳ ಅರಿವಾಗಬಹುದು ಎಂದು ಬಿಷಪ್ ಸಂದೇಶದಲ್ಲಿ ತಿಳಿಸಿದರು.

ಆದರೆ ನಾವು ನಿರಾಶರಾಗಬಾರದು. ನಮ್ಮ ವಕ್ರ ಗೆರೆಗಳ ಮೇಲೂ ನೇರವಾಗಿ ಬರೆಯಲು ದೇವರು ಬಂದಿದ್ದಾರೆ. ಜೀವನದ ಅತೀ ಕತ್ತಲೆಯ ಸಮಯದಲ್ಲೂ ಹೊಸ ಬೆಳಕಿನ ಆಶ್ವಾಸನೆಯೇ ಕ್ರಿಸ್ಮಸ್ ಆಚರಣೆಯ ತಿರುಳು ಎಂದವರು ತಿಳಿಸಿದ್ದಾರೆ.

ಬೆತ್ಲೆಹೇಮ್ ನ ಗೋದಲಿಯಲ್ಲಿ ಮಲಗಿರುವ ಮಗು ಯೇಸು ಕ್ರಿಸ್ತರಲ್ಲಿ ಮಾತ್ರ ನಾವು ದೇವರನ್ನು ಕಂಡರೆ ಸಾಲದು, ದೇವರ ಸ್ವರೂಪದಲ್ಲಿ ಸೃಷ್ಟಿಯಾದ ಪ್ರತೀ ಮನುಷ್ಯ ನಲ್ಲಿಯೂ ದೇವರನ್ನು ಕಾಣುವುದು ಅಗತ್ಯ. ಪ್ರತಿ ವ್ಯಕ್ತಿಯಲ್ಲಿ ಹೊಸ ಭರವಸೆಯ ತಾಜಾತನವನ್ನು ತರಲು, 2024 ಡಿಸೆಂಬರ್ 24ರಿಂದ, ಕೆಥೊಲಿಕ್ ಧರ್ಮಸಭೆಯು 'ಭರವಸೆಯ ಯಾತ್ರಿಕರು' ಎಂಬ ಧ್ಯೇಯವಾಕ್ಯದೊಂದಿಗೆ ಕ್ರಿಸ್ತರ 2025-ನೇ ವರುಷದ ಜ್ಯುಬಿಲಿಯನ್ನು ಆಚರಿಸುತ್ತಿದೆ. ಮಂಗಳೂರು ಧರ್ಮಕ್ಷೇತ್ರವು, 2024 ಡಿಸೆಂಬರ್ 29ರಿಂದ ಆರಂಭಿಸಿ ಇಡೀ ವರುಷ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಖಂಡಿತವಾಗಿಯೂ, ಪ್ರತಿ ಹೃದಯದಲ್ಲಿ ಹೊಸ ಭರವಸೆಯನ್ನು ಇದು ಮೂಡಿಸಲಿದೆ. ನಾವೆಲ್ಲರೂ ಶಾಂತಿಗಾಗಿ ಪ್ರಾರ್ಥಿಸುವುದಕ್ಕಾಗಿ ಮಣ್ಯಕ್ಷೇತ್ರಗಳನ್ನೂ ಸೂಚಿಸಿದ್ದೇವೆ. ಯೇಸು ಕ್ರಿಸ್ತರ ಶಿಲುಬೆಯ ಬ್ಯಾನರ್ ಅಡಿಯಲ್ಲಿ ಇದೆಲ್ಲವೂ ನಡೆಯಲಿದೆ ಎಂದವರು ಹೇಳಿದರು.

ಸಂಕಷ್ಟದಲ್ಲಿರುವ ಎಲ್ಲಾ ಬಂಧುಗಳಿಗೆ. ಈ ಕ್ರಿಸ್ಮಸ್ ಸಮಯದಲ್ಲಿ, ನಮ್ಮ ಪ್ರಾರ್ಥನೆ ಹಾಗೂ ಕಾಳಜಿ ತಲುಪಲಿ, ನಮ್ಮ ಕಾರ್ಯಗಳು ಶಾಂತಿಯ ರಾಷ್ಟ್ರವನ್ನೂ, ಮಾನವೀಯತೆಯ ಜಗತ್ತನ್ನೂ ಕಟ್ಟುವ ಸಂಕಲ್ಪವನ್ನು ಪ್ರತಿಬಿಂಬಿಸಲಿ. ಕ್ರಿಸ್ತರ ಶಾಂತಿ ಮತ್ತು ಭರವಸೆ ನಮ್ಮಲ್ಲರ ಹೃದಯಗಳಲ್ಲಿ ಹಾಗೂ ಕಾರ್ಯಗಳಲ್ಲಿ ಪ್ರವೇಶಿಸಲಿ. ನಾವು ಸಮಾಜವನ್ನು ಗುಣಪಡಿಸುವ ಔಷಧಿ ಯಾಗಿಯೂ, ದಿಟ್ಟ ಭರವಸೆಯಾಗಿಯೂ ಏಕತೆಯನ್ನು ತರುವ ಪ್ರೀತಿಯಾಗಿಯೂ ಜೀವಿಸುವ. ಆಗ, ಕ್ರಿಸ್ಮಸ್ ಆಚರಣೆಗೆ ಗೌರವ ಸಲ್ಲುತ್ತದೆ, ಅಂತೆಯೇ ದೇವರ ಆಶೀರ್ವಾದಕ್ಕೆ ನಾವು ಪಾತ್ರರಾಗುತ್ತೇವೆ ಎಂದು ಬಿಷಪ್, ನಾಡಿನ ಸಮಸ್ತ ಬಂಧು-ಬಾಂಧವರಿಗೆ ದೇವರ ಪ್ರೀತಿ, ಭರವಸೆ ಹಾಗೂ ಶಾಂತಿ ತುಂಬಿದ ಕ್ರಿಸ್ಮಸ್ ಹಾಗೂ ಹೊಸ ವರುಷದ ಶುಭಾಶಯ ಕೋರಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತದ ವಿಕಾರ್ ಜನರಲ್ ವಂ.ಮ್ಯಾಕ್ಸಿಂ ನರೊನ್ಹಾ, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ.ಜೆ.ಬಿ.ಸಲ್ದಾನ, ರಾಯ್ ಕ್ಯಾಸ್ಟಲಿನೋ, ಜಾನ್ ಡಿಸಿಲ್ವ, ವಂ.ಅಲ್ವಿನ್ ಡಿಸೋಜ, ವಂ.ರೂಪೇಶ್ ಮಾಡ್ತಾ, ಎಲಿಯಾಸ್ ಫರ್ನಾಂಡಿಸ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X