Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವತಂತ್ರ ಭಾರತದಲ್ಲೂ ದಲಿತರ ಬದುಕು...

ಸ್ವತಂತ್ರ ಭಾರತದಲ್ಲೂ ದಲಿತರ ಬದುಕು ಚಿಂತಾಜನಕ: ಡಾ. ಕೃಷ್ಣಪ್ಪ ಕೊಂಚಾಡಿ

ವಾರ್ತಾಭಾರತಿವಾರ್ತಾಭಾರತಿ30 March 2025 5:53 PM IST
share
ಸ್ವತಂತ್ರ ಭಾರತದಲ್ಲೂ ದಲಿತರ ಬದುಕು ಚಿಂತಾಜನಕ: ಡಾ. ಕೃಷ್ಣಪ್ಪ ಕೊಂಚಾಡಿ

ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 77 ವರ್ಷಗಳು ಕಳೆದರೂ ದಲಿತರ ಬದುಕು ಉತ್ತಮಗೊಂಡಿಲ್ಲ. ಜಾತಿ ವ್ಯವಸ್ಥೆ ಅಸ್ಪ್ರಶ್ಯತೆಯಿಂದ ನಲುಗಿಹೋಗಿರುವ ದಲಿತ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಂಘಟಿತ ಹೋರಾಟದ ಅವಶ್ಯಕತೆ ಇದೆ. ಆಳುವ ವರ್ಗಗಳ ಜನವಿರೋಧಿ ನೀತಿಗಳಿಂದ ದೇಶದ ಆರ್ಥಿಕತೆ ವಿನಾಶದ ಅಂಚಿಗೆ ಹೋಗುತ್ತಿದ್ದು ಅದಕ್ಕೆ ಅತ್ಯಂತ ಶೋಷಿತ ವಿಭಾಗವಾದ ದಲಿತರೇ ಮೊದಲ ಬಲಿಪಶುಗಳಾಗಿದ್ದಾರೆ. ಒಟ್ಟಿನಲ್ಲಿ ಸ್ವತಂತ್ರ ಭಾರತದಲ್ಲಿ ದಲಿತರ ಪರಿಸ್ಥಿತಿ ತೀರಾ ಚಿಂತಾಜನಕವಾಗಿದೆ ಎಂದು ದ.ಕ.ಜಿಲ್ಲೆಯ ಪ್ರಗತಿಪರ ಚಿಂತಕರೂ, ಸಾಹಿತಿಗಳಾದ ಡಾ.ಕೃಷ್ಣಪ್ಪ ಕೊಂಚಾಡಿಯವರು ಅಭಿಪ್ರಾಯಪಟ್ಟರು.

ದಲಿತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ, ಭೂಮಿ ಮನೆ ನಿವೇಶನ ಆರೋಗ್ಯ ಉದ್ಯೋಗದ ಹಕ್ಕಿಗಾಗಿ,ದಲಿತ ಮೀಸಲು ನಿಧಿಯ ಸಮರ್ಪಕ ಬಳಕೆಗಾಗಿ ಇಂದು ತೊಕ್ಕೊಟ್ಟುವಿನಲ್ಲಿ ನಡೆದ ಉಳ್ಳಾಲ ತಾಲೂಕು ಮಟ್ಟದ ದಲಿತ ಚೈತನ್ಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲೆಯ ರೈತ ಚಳುವಳಿಯ ನಾಯಕರಾದ ಕೃಷ್ಣಪ್ಪ ಸಾಲ್ಯಾನ್ ರವರು ಮಾತನಾಡುತ್ತಾ, ಜಾತಿ ಧರ್ಮದ ಹೆಸರಿನಲ್ಲಿ ಕೋಮುದ್ವೇಷ ಹಬ್ಬಿಸುವ ಮತಾಂಧರು ಜಾತಿ ತಾರತಮ್ಯದ ಬಗ್ಗೆ ಚಕಾರ ಶಬ್ದವೆತ್ತುತ್ತಿಲ್ಲ. ದಲಿತರನ್ನು ಮನುಷ್ಯರನ್ನಾಗಿ ನೋಡದ ಕೋಮುವಾದಿ ಶಕ್ತಿಗಳು ದಲಿತರನ್ನು ತಮ್ಮ ರಾಜಕೀಯ ಲಾಭಕ್ಕೆ ಮಾತ್ರ ದುರುಪಯೋಗಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾರೋಪ ಭಾಷಣ ಮಾಡಿದ ಜಿಲ್ಲೆಯ ಕಾರ್ಮಿಕ ಮುಖಂಡರಾದ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡಿ, ಗ್ರಾಮ ಪಂಚಾಯತ್ ನಿಂದ ಹಿಡಿದು ಎಲ್ಲಾ ಸ್ಥಳೀಯ ಆಡಳಿತಗಳು ಸೇರಿದಂತೆ ರಾಜ್ಯ ಕೇಂದ್ರ ಸರ್ಕಾರಗಳ ದಲಿತ ಮೀಸಲು ನಿಧಿಗಳು ದಲಿತ ಸಮುದಾಯದ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಅಭ್ಯುದಯಕ್ಕಾಗಿ ವಿನಿಯೋಗ ಆಗುವ ಬದಲು ಹಾಡುಹಗಲಲ್ಲೇ ದುರುಪಯೋಗವಾಗುತ್ತಿದೆ. ಮಾತ್ರವಲ್ಲದೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ದಲಿತರಿಗೆ ಮೀಸಲಿಡಬೇಕಾದ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತ ಮಾಡುವ ಮೂಲಕ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಹೇಳಿದರು.

ಸಮಾವೇಶವನ್ನು ಉದ್ದೇಶಿಸಿ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷರಾದ ಕೃಷ್ಣಪ್ಪ ಕೋಣಾಜೆ, ಪ್ರಧಾನ ಕಾರ್ಯದರ್ಶಿ ಕೃಷ್ಣ ತಣ್ಣೀರುಬಾವಿಯವರು ಮಾತನಾಡಿದರು. ಸಮಾವೇಶವು ನೂತನ ತಾಲೂಕು ಸಮಿತಿಯನ್ನು ರಚಿಸಿತು.

ಸಭೆಯ ಅಧ್ಯಕ್ಷತೆಯನ್ನು ದಲಿತ ಹಕ್ಕುಗಳ ಸಮಿತಿಯ ನಾಯಕರಾದ ವಿಶ್ವನಾಥ ಮಂಜನಾಡಿಯವರು ವಹಿಸಿದ್ದರು. ವೇದಿಕೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ನಾಯಕರಾದ ಚಂದ್ರಶೇಖರ ಕಿನ್ಯಾ, ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಕೃಷ್ಣಪ್ಪರವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X