Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯಾವ ಕ್ಷಣದಲ್ಲೂ ಲೋಕಸಭಾ...

ಯಾವ ಕ್ಷಣದಲ್ಲೂ ಲೋಕಸಭಾ ಚುನಾವಣೆಯಾಗಬಹುದು: ಬಿ.ವೈ. ವಿಜಯೇಂದ್ರ

ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Jan 2024 9:04 PM IST
share
ಯಾವ ಕ್ಷಣದಲ್ಲೂ ಲೋಕಸಭಾ ಚುನಾವಣೆಯಾಗಬಹುದು: ಬಿ.ವೈ. ವಿಜಯೇಂದ್ರ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುವ ಗುರಿ ಇದೆ. ಚುನಾವಣೆ ಯಾವ ಕ್ಷಣದಲ್ಲಿಯೂ ಘೋಷಣೆಯಾಗಬಹುದು, ಕಾರ್ಯಕರ್ತರು ಸಿದ್ಧರಾಗಿರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.

ಅಡ್ಯಾರ್ ಗಾರ್ಡನ್ ನಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭವನ್ನು ಅವರು ಉದ್ಘಾಟಿಸಿ ಮಾತನಾಡುತ್ತಿದ್ದರು.

ದೇಶದಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಕುತೂಹಲವಿದೆ. ಅದಕ್ಕೆ ನರೇಂದ್ರ ಮೋದಿ ನಾಯಕತ್ವ ಕಾರಣ. ಎಂಟು ತಿಂಗಳ ಹಿಂದೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಕಾಂಗ್ರೆಸ್‌ಗೆ ದೇಶದಲ್ಲಿ ಅಧಿಕಾರಕ್ಕೆ ಬರ್ತೇವೆ ಎಂಬ ಭ್ರಮೆ ಹುಟ್ಟಿಕೊಂಡಿದೆ. ಆದರೆ ದೇಶದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ರಾಜ್ಯದಲ್ಲಿ ಬರ ನಿರ್ವಹಣೆಯಲ್ಲಿ ಯಶಸ್ವಿ ಯಾಗಿಲ್ಲ. ರಾಜ್ಯ ಸರಕಾರ ಬಡವರ ಪರ ಅಲ್ಲ, ಅಲ್ಪಸಂಖ್ಯಾತರ ಹಿಂದೆ ಹೋಗುತ್ತಿರುವ ಸರಕಾರ ಎಂದು ವಿಜಯೇಂದ್ರ ಟೀಕಿಸಿದರು. ದಕ್ಷಿಣ ಕನ್ನಡದ ಜನರ ಬಗ್ಗೆ ಹೆಚ್ಚು ಗೌರವ ಅಭಿಮಾನವಿದೆ ಎಂದರು.

ವಿಧಾನ ಸಭಾ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡುತ್ತಾ, ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕರ್ನಾಟದಲ್ಲಿ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಜಯಗಳಿಸಲಿದೆ ಎಂದರು. ಮಂಡ್ಯದಲ್ಲಿ ಎರಡು ತಿಂಗಳ ಹಿಂದೆ ಗ್ರಾಮ ಪಂಚಾಯತ್ ಅನುಮತಿ ಪಡೆದು ಹನುಮ ಧ್ವಜ ಹಾರಾಟ ಮಾಡಿದ್ದಾರೆ. ಅಲ್ಲಿ ಕಾಂಗ್ರೆಸ್ ನ ಕುಮ್ಮಕ್ಕಿನಿಂದ ಹನುಮ ಧ್ವಜ ಇಳಿಸಿ ರಾಷ್ಟ್ರ ಧ್ವಜ ಏರಿಸಿದ್ದಾರೆ. ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರ್ ಅಶೋಕ್ ಹೇಳಿದರು.

ಯಾರಿಗೂ ನೋವಾಗದಂತೆ ಕಾರ್ಯ ನಿರ್ವಹಿಸುತ್ತೇನೆ. ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಜಿಲ್ಲಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ನೂತನ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ವಿಶ್ವಾಸ ವ್ಯಕ್ತಪಡಿಸಿದರು. ನಿರ್ಗಮನ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಮಾತನಾಡುತ್ತಾ, ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ ತೃಪ್ತಿ ಇದೆ. ಎಲ್ಲಾ ಪದಾಧಿಕಾರಿಗಳ ಸಹಕಾರ ದೊರೆತಿದೆ. ಹಿರಿಯ ಮಾರ್ಗದರ್ಶನ ದೊರೆತಿದೆ ಎಂದರು.

ಮಾಜಿ ಸಚಿವ ಡಾ.ಅಶ್ವಥ ನಾರಾಯಣ್ ಶುಭ ಹಾರೈಸಿದರು. ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನರೇಂದ್ರ ಮೋದಿ ಆಡಳಿತದಲ್ಲಿ ಭಾರತ ಜಗತ್ತಿ ಮೂರನೆ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಲಿದೆ. ರಾಜ್ಯದಲ್ಲಿ ನಳಿನ್ ಕುಮಾರ್ ಕಟೀಲ್ ಯಶಸ್ವಿಯಾಗಿ ಪಕ್ಷವನ್ನು ಕಟ್ಟಿದ್ದಾರೆ ಎಂದು ಅವರು ಅಭಿನಂದಿಸಿದರು.

ಸಮಾರಂಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭರತ್ ಶೆಟ್ಟಿ, ಉಮಾನಾಥ ಕೊಟ್ಯಾನ್, ಭಾಗೀರಥಿ ಮುರುಳ್ಯ, ಪ್ರತಾಪ ಸಿಂಹ ನಾಯಕ್, ನಿಕಟ ಪೂರ್ವ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಬಿಜೆಪಿ ಪದಾಧಿಕಾರಿಗಳಾದ ಬೃಜೇಶ್ ಚೌಟ, ನಿತಿನ್ ಕುಮಾರ್, ರಾಜೇಶ್, ಉದಯ ಕುಮಾರ್ ಶೆಟ್ಟಿ, ಗೋಪಾಲ ಕೃಷ್ಣ ಹೇರಳೆ, ವಿ.ಬಿ.ಭಾರತೀಶ್, ರಾಜೇಶ್ ಕಾವೇರಿ, ರಾಮದಾಸ್ ಬಂಟ್ವಾಳ, ಪ್ರಶಾಂತ್ ಕೆಡಿಂಜ, ಮನಪಾ ಮೇಯರ್ ಸುಧೀರ್ ಶೆಟ್ಟಿ,ಉಪ ಮೇಯರ್ ಸುನೀತಾ ಉಪಸ್ಥಿತರಿದ್ದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X