Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲಕ್ಕಿಡಿಪ್ ಮಾದರಿ ಹಣ ಸಂಗ್ರಹಿಸಿ ವಂಚನೆ|...

ಲಕ್ಕಿಡಿಪ್ ಮಾದರಿ ಹಣ ಸಂಗ್ರಹಿಸಿ ವಂಚನೆ| ಮೈಕ್ರೋಫೈನಾನ್ಸ್ ಸ್ಕೀಂಗಳ ಬಗ್ಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ: ಡಿಸಿಪಿ ಮಿಥುನ್

ವಾರ್ತಾಭಾರತಿವಾರ್ತಾಭಾರತಿ25 Jan 2026 6:43 PM IST
share
ಲಕ್ಕಿಡಿಪ್ ಮಾದರಿ ಹಣ ಸಂಗ್ರಹಿಸಿ ವಂಚನೆ| ಮೈಕ್ರೋಫೈನಾನ್ಸ್ ಸ್ಕೀಂಗಳ ಬಗ್ಗೆ ಮಾಹಿತಿ ನೀಡಿದರೆ ಸೂಕ್ತ ಕ್ರಮ: ಡಿಸಿಪಿ ಮಿಥುನ್
ಎಸ್‌ಸಿ ಎಸ್‌ಟಿ ಕುಂದುಕೊರತೆ ಸಭೆ

ಮಂಗಳೂರು: ನಗರದಲ್ಲಿ ಜ್ಯುವೆಲ್ಲರಿಯೊಂದರಲ್ಲಿ ಲಕ್ಕಿಡಿಪ್ ಮಾದರಿಯಲ್ಲಿ ಗ್ರಾಹಕರಿಂದ ಹಣ ಸಂಗ್ರಹಿಸಿ ಬಳಿಕ ವಂಚನೆ ನಡೆಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ ಅವರು ಗ್ರಾಹಕ ವೇದಿಕೆಗೆ ದೂರು ನೀಡಲು ನಿರ್ದೇಶನ ನೀಡಿದ್ದಾರೆ. ದಲಿತ ವ್ಯಕ್ತಿಯೊಬ್ಬರು 97 ಸಾವಿರ ರು.ಗಳಷ್ಟು ಮೊತ್ತ ಪಾವತಿಸಿ ವಂಚನೆಗೆ ಒಳಗಾಗಿ ದ್ದಾರೆ ಎಂದು ದಲಿತ ಮುಖಂಡರೊಬ್ಬರು ಆರೋಪ ಮಾಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ರವಿವಾರ ಎಸ್‌ಸಿ ಎಸ್‌ಟಿ ಕುಂದುಕೊರತೆ ಸಭೆಯಲ್ಲಿ ಈ ಆರೋಪ ವ್ಯಕ್ತವಾಗಿದ್ದು, ಗ್ರಾಹಕರನ್ನು ವಂಚಿಸುವ ಮೈಕ್ರೋ ಫೈನಾನ್ಸ್ ಮಾದರಿಯ ಸ್ಕೀಂಗಳಿಗೆ ಮಂಗಳೂರಲ್ಲಿ ಅವಕಾಶ ನೀಡುವುದಿಲ್ಲ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಪೊಲೀಸ್ ಕಮಿಷನರೇಟ್ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಸ್ಪಷ್ಟಪಡಿಸಿದ್ದಾರೆ.

ಮೈಕ್ರೋಫೈನಾನ್ಸ್ ಮಾದರಿಯಲ್ಲಿ ಇಂತಹ ಸ್ಕೀಂಗಳಿಗೆ ಅವಕಾಶವಿಲ್ಲ. ಹೊಸದಾಗಿ ಸ್ಥಾಪಿಸುವ ಅಂಗಡಿ ಮಳಿಗೆ ಗಳು ಇಂತಹ ಮೈಕ್ರೋಫೈನಾನ್ಸ್ ಸ್ಕೀಂ ಆರಂಭಿಸಿದ್ದರೆ ಮಾಹಿತಿ ನೀಡಬಹುದು. ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಮೈಕ್ರೋಫೈನಾನ್ಸ್ ಸ್ಕೀಂ ಮಾಡಿ ಗ್ರಾಹಕರನ್ನು ವಂಚಿಸಲು ಅವಕಾಶ ನೀಡುವುದಿಲ್ಲ ಎಂದರು.

ನಗರ ಪಾಲಿಕೆಯಲ್ಲಿ ಸಿಬ್ಬಂದಿಯೊಬ್ಬರು ಪೌರ ಕಾರ್ಮಿಕ ಮಹಿಳೆಗೆ ಕಿರುಕುಳ ನೀಡಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸದೆ ನಿರ್ಲಕ್ಷ್ಯ ತೋರಲಾಗಿದೆ ಎಂಬ ದಲಿತ ಮುಖಂಡರೊಬ್ಬರು ಆರೋಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಮಿಥುನ್, ಕಚೇರಿಗಳಲ್ಲಿ ಮಹಿಳಾ ದೌರ್ಜನ್ಯ ಅಥವಾ ಕಿರುಳದಂತಹ ಘಟನೆ ಸಂಭವಿಸಿದರೆ ಅದನ್ನು ರಾಜಿಯಲ್ಲಿ ಮುಕ್ತಾಯಗೊಳಿಸುವ ಬದಲು ಕಚೇರಿಯ ಆಂತರಿಕ ದೌರ್ಜನ್ಯ ತಡೆ ಸಮಿತಿಗೆ ದೂರು ನೀಡಬೇಕು. ಅಲ್ಲಿ ನ್ಯಾಯ ಸಿಗದಿದ್ದರೆ ಪೊಲೀಸ್ ಠಾಣೆಗೆ ದೂರು ನೀಡಬಹುದು ಎಂದರು.

ಕ್ರಿಮಿನಲ್ ಪ್ರಕರಣಗಳಲ್ಲಿ ಸಾಕ್ಷ್ಯ ಹೇಳಲು ಬರುವವರಿಗೆ ಬಂದು ಹೋಗುವ ವೆಚ್ಚವನ್ನು ನೀಡುವ ಬಗ್ಗೆ ಇತ್ತೀಚೆಗೆ ಸಮಾಜ ಕಲ್ಯಾಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ನಕಲಿ ಸರ್ಟಿಫಿಕೆಟ್ ಪಡೆದು ಉದ್ಯೋಗ ವಂಚನೆ ನಡೆಸಿದ ಬಗ್ಗೆ ಇಲ್ಲಿ ಶೂನ್ಯ ಪ್ರಕರಣ ಇದೆ ಎಂದು ಡಿಸಿಪಿ ಮಿಥುನ್ ಮಾಹಿತಿ ನೀಡಿದರು.

ಪ್ರತಿ ಮೂರು ತಿಂಗಳಿಗೊಮ್ಮೆ ಎಸ್‌ಸಿ ಎಸ್‌ಟಿ ಕುಂದುಕೊರತೆ ಸಭೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆಯಬೇಕು. ಈ ಸಭೆಯಲ್ಲಿ ಆಗ್ರಹಿಸುವ ನಿರ್ಣಯ ಕೈಗೊಳ್ಳಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು. ಈ ಬಗ್ಗೆ ಲಿಖಿತ ಮನವಿ ನೀಡುವಂತೆ ಡಿಸಿಪಿ ಮಿಥುನ್ ಹೇಳಿದರು.

ಸಂಚಾರಿ ಡಿಸಿಪಿ ರವಿಶಂಕರ್, ಡಿಸಿಆರ್‌ಎ ಎಸ್ಪಿ ಸೈಮನ್ ಇದ್ದರು.

ಡಿಸಿಆರ್‌ಇ ಬಲವರ್ಧನೆಗೆ ಕ್ರಮ

ಮಂಗಳೂರಿನಲ್ಲಿ ಇರುವ ಡಿಸಿಆರ್‌ಇ(ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ)ನಲ್ಲಿ ಇನ್‌ಸ್ಪೆಕ್ಟರ್ ಸಹಿತ ಸಿಬ್ಬಂದಿ ಕೊರತೆ ಇದೆ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಡಿಸಿಆರ್‌ಇ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ಮಿಥುನ್ ಹೇಳಿದರು.






Tags

Luckydipmodelmoneycollectionscam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X