ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವಾರ್ಷಿಕೋತ್ಸವ; 10 ಸಾಧಕರೊಂದಿಗೆ ಸಂವಾದ -ಸನ್ಮಾನ ಕಾರ್ಯಕ್ರಮ

ಉಡುಪಿ, ಆ.6: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಇದರ 10 ವಾರ್ಷಿಕೋತ್ಸವದ ಪ್ರಯುಕ್ತ 10 ಸಾಧಕ ರೊಂದಿಗೆ ಸಂವಾದ ಹಾಗೂ ಸನ್ಮಾನ ಕಾರ್ಯಕ್ರಮವನ್ನು ರವಿವಾರ ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಮಾಜಿ ಅಧ್ಯಕ್ಷ ಕೋಟ ಇಬ್ರಾಹಿಂ ಸಾಹೇಬ್ ಮಾತನಾಡಿದರು. ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಸ್ಟೋರ್ ಮೆನೇಜರ್ ಪುರಂದರ ತಿಂಗಳಾಯ, ಗೆಸ್ಟ್ ರಿಲೇಶನ್ ಮೆನೇಜರ್ ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ, ಇಬ್ರಾಹಿಂ ಗಂಗೊಳ್ಳಿ, ರವಿ ಕಟಪಾಡಿ, ಸುಜ್ಯೋತಿ ನೇತ್ರಾವತಿ ಕೈರಣ್ಣ, ಯೋಗಪಟು ತನುಶ್ರೀ ಪಿತ್ರೋಡಿ, ಜಾನಪದ ಕಲಾವಿದ ರಮೇಶ್ ಕಲ್ಮಾಡಿ, ಪತ್ರಕರ್ತ ರಹೀಂ ಉಜಿರೆ, ಕಲಾವಿದರಾದ ಅಲ್ವಿನ್ ಅಂದ್ರಾದೆ, ಆರ್.ಜೆ.ಕಾಜಲ್ ಅವರನ್ನು ಸನ್ಮಾನಿಸಲಾಯಿತು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.





