ಮಂಗಳೂರು | ಎಂಐಒ ಕ್ಯಾನ್ಸರ್ ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭೇಟಿ

ಮಂಗಳೂರು: ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಇಂದು (ಜ.23) ಮಂಗಳೂರಿನ ಪಂಪ್ವೆಲ್‌ನಲ್ಲಿರುವ ಎಂಐಒ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಐವನ್ ಡಿಸೋಜ ಅವರು ಕ್ಯಾನ್ಸರ್ ರೋಗಿಗಳ ಉತ್ತಮ ಚಿಕಿತ್ಸೆಗಾಗಿ ಶ್ರಮಿಸುತ್ತಿರುವ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿಗಳ ಕೆಲಸವನ್ನು ಪ್ರಶಂಸಿಸಿದರು.
ರೋಗಿಗಳೊಂದಿಗೆ ಸಂಭಾಷಣೆ ನಡೆಸಿದ ಅವರು, ಫಲಗಳನ್ನು ವಿತರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
Next Story