Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ...

ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಗೆ ಜೈಲುಶಿಕ್ಷೆ, ದಂಡ

ವಾರ್ತಾಭಾರತಿವಾರ್ತಾಭಾರತಿ7 Aug 2023 8:03 PM IST
share
ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಗೆ ಜೈಲುಶಿಕ್ಷೆ, ದಂಡ

ಮಂಗಳೂರು, ಆ.7: ಸ್ನೇಹದ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಆಕೆಯಿಂದ 30.05 ಪವನ್ ಚಿನ್ನಾಭರಣಗಳನ್ನು ಪಡೆದಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶೆ ಮಂಜುಳಾ ಇಟ್ಟಿ 3 ವರ್ಷ ಶಿಕ್ಷೆ, ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಪ್ಪಿನಮೊಗರು ಕಡೆಕಾರ್ ನಿವಾಸಿ ರೋಶನ್ ಡಿಸೋಜಾ ಯಾನೆ ರೋಶನ್ ಫೆರ್ನಾಂಡಿಸ್ (31) ಶಿಕ್ಷೆಗೊಳಗಾದ ಆರೋಪಿ.

ಘಟನೆಯ ವಿವರ: ನಗರದ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯು 2015ರ ನ.16ರಂದು ಬೆಳಗ್ಗೆ ಬಸ್‌ನಿಂದ ಇಳಿದು ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಆರೋಪಿ ರೋಶನ್ ತಾನು ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದು ಇನ್ಫೋಸಿಸ್‌ನಲ್ಲಿ ಉದ್ಯೋಗದಲ್ಲಿರುವುದಾಗಿ ಹೇಳಿದ್ದ.

ಹೀಗೆ ನಂಬಿಕೆ ಮೂಡಿಸುವಲ್ಲಿ ಯಶಸ್ವಿಯಾಗಿದ್ದ ಆರೋಪಿಯು ಬಳಿಕ ಬಾಲಕಿಯನ್ನು ಮಂಗಳೂರಿನ ಹೊಟೇಲ್, ಮಾಲ್‌ಗಳಿಗೆ ಕರೆದು ಕೊಂಡು ಹೋಗಿದ್ದ. ಮನೆಯಲ್ಲಿ ತಿಳಿಸಿದರೆ ನಮ್ಮ ನಡುವಿನ ಸ್ನೇಹಕ್ಕೆ ತೊಂದರೆಯಾಗುತ್ತದೆ. ಮನೆಯವರು ಅಡ್ಡಿ ಮಾಡುತ್ತಾರೆ ಎಂದು ಹೇಳಿರುವುದಾಗಿ ಪೊಲೀಸರು ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದರು.

2015ರ ಡಿ.28ರಂದು ಆಕೆಯಿಂದ ಉಪಾಯವಾಗಿ 86.07 ಗ್ರಾಂ ತೂಕದ ಚಿನ್ನಾಭರಣಗಳನ್ನು ಪಡೆದುಕೊಂಡಿದ್ದ. 2016ರ ಮಾ.12ರಂದು ಬಾಲಕಿಯ ಅಜ್ಜಿಯ ಮನೆಯ ಬಳಿಗೆ ತೆರಳಿ ಬಾಲಕಿಯ ಮೂಲಕ 34.01 ಗ್ರಾಂ ಮೌಲ್ಯದ ಚಿನ್ನಾಭರಣಗಳನ್ನು ಪಡೆದುಕೊಂಡಿದ್ದ. 2016ರ ಮಾ.30ರಂದು ಪೂ.11:30ಕ್ಕೆ ಕದ್ರಿಪಾರ್ಕ್‌ಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎಂದು ಆರೋಪಿಸಲಾಗಿತ್ತು.

ಆ ದಿನ ಬಾಲಕಿ ಮನೆಗೆ ತಲುಪುವಾಗ ತಡವಾಗಿತ್ತು. ಆ ಬಗ್ಗೆ ಮನೆಯವರು ಪ್ರಶ್ನಿಸಿದಾಗ ಬಾಲಕಿ ನಡೆದಿರುವ ವಿಚಾರ ಗಳನ್ನು ಬಾಯ್ಬಿಟ್ಟಿದ್ದಳು. ಮನೆಯವರು ಆರೋಪಿಯ ಬಗ್ಗೆ ಇತರರಲ್ಲಿ ವಿಚಾರಿಸಿದಾಗ ಆತ ಸಾಫ್ಟ್‌ವೇರ್ ಇಂಜಿನಿಯರ್ ಆಗಿರಲಿಲ್ಲ, ಬದಲಾಗಿ ಕ್ಯಾಟರಿಂಗ್‌ವೊಂದರಲ್ಲಿ ಸಪ್ಲೈಯರ್ ಆಗಿದ್ದ ಎಂಬುದು ಗೊತ್ತಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ಗಳಾದ ಅಶೋಕ್ ಪಿ. ಮತ್ತು ಕೆ.ಆರ್.ಗೋಪಿಕೃಷ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ಪೊಕ್ಸೊ ಕಾಯ್ದೆಯ ಕಲಂ 8ರಂತೆ 3 ವರ್ಷ ಸಾದಾ ಸಜೆ, 5,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಸಾದಾ ಸಜೆ, ಪೊಕ್ಸೊ ಕಾಯ್ದೆಯ ಕಲಂ 12ರಂತೆ ಒಂದು ವರ್ಷ ಸಾದಾ ಸಜೆ, 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ತಿಂಗಳ ಸಾದಾ ಸಜೆ, ಭಾರತೀಯ ದಂಡ ಸಂಹಿತೆಯ ಕಲಂ 420ರಂತೆ 3 ವರ್ಷ ಸಾದಾ ಸಜೆ, 5,000 ರೂ.ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿ 1 ತಿಂಗಳು ಸಾದಾ ಸಜೆ ವಿಧಿಸಿ, ಸಂತ್ರಸ್ತ ಬಾಲಕಿಗೆ 50,000 ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X