Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ‘ವಿಶಿಷ್ಟರಿಗಾಗಿ ವಿಶಿಷ್ಟ...

ಮಂಗಳೂರು: ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’

ವಾರ್ತಾಭಾರತಿವಾರ್ತಾಭಾರತಿ11 Jan 2026 10:12 PM IST
share
ಮಂಗಳೂರು: ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’

ಮಂಗಳೂರು, ಜ.10: ಸೇವಾ ಭಾರತಿ ಮಂಗಳೂರು ಇದರ ಅಂಗಸಂಸ್ಥೆ ಆಶಾಜ್ಯೋತಿ ವತಿಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವದಲ್ಲಿ ರವಿವಾರ ‘ವಿಶಿಷ್ಟರಿಗಾಗಿ ವಿಶಿಷ್ಟ ಮೇಳ’ ನಡೆಯಿತು.

ವಿಶಿಷ್ಟ ಮೇಳದಲ್ಲಿ ದಿವ್ಯಾಂಗರು ಹಾಡಿದರು, ನಲಿದರು, ಮನದಣಿಯೆ ಕುಣಿದಾಡಿದರು.

ಪಾನಿಪುರಿ, ಬೇಲ್ಪುರಿ ರುಚಿ ಸವಿದು, ಐಸ್‌ಕ್ಯಾಂಡಿ ಐಸಿಕ್ರೀಮ್ ಮೆಲ್ಲುತ್ತಾ, ಸಕ್ಕರೆ ಮಿಠಾಯಿ ಬಾಯಿಗಿರಿಸುತ್ತಾ, ಉಂಡೆ, ಚಕ್ಕುಲಿ ತಿನ್ನುತ್ತಾ, ಕುದುರೆ ಏರಿ, ಒಂಟೆ ಸವಾರಿ ನಡೆಸಿ, ತಿರುಗುವ ತೊಟ್ಟಿಲಿನಲ್ಲಿ ಕುಳಿತು ಜಾತ್ರೆ ಸಂಭ್ರಮವನ್ನು ದಿವ್ಯಾಂಗರು ಅನುಭವಿಸಿದರು.

ಜಾತ್ರೆ, ಉತ್ಸವಗಳಿಗೆ ತೆರಳಲಾಗದ ದಿವ್ಯಾಂಗರಿಗೆ ಆಶಾಜ್ಯೋತಿ ಸಂಸ್ಥೆ ಈ ಅವಕಾಶ ಕಲ್ಪಿಸಿತ್ತು. ದಿವ್ಯಾಂಗರಿಗೆ ಮನರಂಜನೆ ಒದಗಿಸುವ ಜೊತೆ ಜೊತೆಗೆ ಅವರಲ್ಲಿ ಚೈತನ್ಯ, ವಿಶ್ವಾಸ ತುಂಬಿಸುವುದು ಮೇಳದ ಉದ್ದೇಶವಾಗಿತ್ತು.

*ಸಾವಿರಕ್ಕೂ ಅಧಿಕ ಮಂದಿ ದಿವ್ಯಾಂಗರು ಭಾಗಿ: ವಿಶಿಷ್ಟರಿಗಾಗಿ ವಿಶಿಷ್ಟ ಮೇಳದಲ್ಲಿ ದಿವ್ಯಾಂಗರು ಪ್ರತಿಕ್ಷಣವನ್ನೂ ಆನಂದಿಸಿದ್ದಾರೆ. ಈ ಬಾರಿ ಒಂದು ಸಾವಿರಕ್ಕೂ ಅಧಿಕ ಮಂದಿ ದಿವ್ಯಾಂಗರು ಭಾಗವಹಿಸಿದ್ದಾರೆ. ಸಾಮಾನ್ಯವಾಗಿ ಜಾತ್ರೆಗಳಿಗೆ ದಿವ್ಯಾಂಗರನ್ನು ಕರೆದುಕೊಂಡು ಹೋಗುವುದಿಲ್ಲ. ಆದರೆ, ಈ ಮೇಳದಲ್ಲಿ ಜಾತೆಯ ಸನ್ನಿವೇಶ ಸೃಷ್ಟಿಸಿ ದಿವ್ಯಾಂಗರಿಗೆ ಆರೋಗ್ಯಪೂರ್ಣ ವಾತಾವರಣ ಕಲ್ಪಿಸಲಾಗಿದೆ. ದಿವ್ಯಾಂಗರು ವಿಶಿಷ್ಟ ಮೇಳದಲ್ಲಿ ಖುಷಿಪಟ್ಟಿದ್ದಾರೆ ಎಂದು ಆಶಾಜ್ಯೋತಿ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ತಿಳಿಸಿದ್ದಾರೆ.

*ಉದ್ಘಾಟನೆ:ನಿಟ್ಟೆ ವಿಶ್ವವಿದ್ಯಾಲಯ ಉಪ ಸಹ ಕುಲಪತಿ ಡಾ. ಶಾಂತಾರಾಮ್ ಶೆಟ್ಟಿ ಅವರು ವಿಶಿಷ್ಟರಿಗಾಗಿ ವಿಶಿಷ್ಟ ಮೇಳ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕಳೆದ 25 ವರ್ಷಗಳಿಂದ ಸೇವಾ ಭಾರತಿ ಮೂಲಕ ವಿಶಿಷ್ಟರಿಗಾಗಿ ವಿಶಿಷ್ಟ ಮೇಳ ಆಯೋಜಿಸುತ್ತಿರುವುದು ಶ್ಲಾಘನೀಯ. ದೇಶದಲ್ಲಿ ಶೇ.2ರಷ್ಟು ಜನತೆ ದಿವ್ಯಾಂಗರಿದ್ದಾರೆ. ದಿವ್ಯಾಂಗರಿಗೆ ಅನುಕಂಪ ಬೇಡ, ಸಮಾನ ಅವಕಾಶ ನೀಡಿ. ದಿವ್ಯಾಂಗರ ಪ್ರತಿಭೆಗೆ ಉತ್ತೇಜನ ನೀಡುವುದು ನಮ್ಮ ಕರ್ತವ್ಯ ಎಂದರು.

ಕರ್ಣಾಟಕ ಬ್ಯಾಂಕ್ ಮಹಾಪ್ರಬಂಧಕ ವಿನಯ ಭಟ್, ಎಂಆರ್‌ಪಿಎಲ್ ಮಂಗಳೂರು ಮಾನವ ಸಂಪನ್ಮೂಲ ವಿಭಾಗದ ಜಿಜಿಎಂ ಕೃಷ್ಣ ಹೆಗ್ಡೆ ಮಿಯಾರ್, ಕೆನರಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಿ. ವಾಸುದೇವ ಕಾಮತ್ ಅತಿಥಿಯಾಗಿದ್ದರು.

ದ.ಕ., ಉಡುಪಿ ಜಿಲ್ಲೆಗಳ ವಿಶೇಷ ಶಾಲೆಗಳ ಮಕ್ಕಳ ಸಹಿತ ಎಲ್ಲ ವಯೋಮಾನದ ದಿವ್ಯಾಂಗರು ಭಾಗವಹಿಸಿದ್ದರು. 18 ವರ್ಷ ಮೇಲ್ಪಟ್ಟ ಸ್ವಲೀನತೆ (ಆಟಿಸಂ), ಸೆರೆಬ್ರಲ್ ಪಾಲ್ಸಿ, ಮಾನಸಿಕ ಕುಂಠಿತ ದಿವ್ಯಾಂಗರಿಗೆ ಕಾನೂನು ಬದ್ಧ ಪೋಷಕತ್ವ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮತ್ತು ನಿರಾಮಯ ಆರೋಗ್ಯ ಕಾರ್ಡ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ‘ಸಕ್ಷಮ’ ಸಂಸ್ಥೆಯ ವತಿಯಿಂದ ದಿವ್ಯಾಂಗರ ಸಬಲೀಕರಣ ಮತ್ತು ನೇತ್ರದಾನದ ಬಗ್ಗೆ ಮಾಹಿತಿ ಒದಗಿಸಲಾಯಿತು. 7 ಮಂದಿ ದಿವ್ಯಾಂಗ ವಿದ್ಯಾರ್ಥಿ ಸಾಧಕರಿಗೆ ಸನ್ಮಾನ ನೆರವೇರಿಸಲಾಯಿತು.

ಆಶಾಜ್ಯೋತಿ ಅಧ್ಯಕ್ಷೆ ಗೀತಾ ಲಕ್ಷ್ಮೀಶ , ಚೇತನಾ ಶಾಲೆ ಮುಖ್ಯಶಿಕ್ಷಕಿ ಸುಪ್ರೀತಾ, ಸೇವಾಭಾರತಿ ಮಂಗಳೂರು ಗೌರವ ಕಾರ್ಯದರ್ಶಿ ಎಚ್. ನಾಗರಾಜ ಭಟ್, ಆಶಾಜ್ಯೋತಿ ಜೊತೆ ಕಾರ್ಯದರ್ಶಿ ಗಣರಾಜ ವೈ., ಖಜಾಂಚಿ ಕೆ. ವಿಶ್ವನಾಥ ಪೈ, ಜೊತೆ ಕಾರ್ಯದರ್ಶಿ ಫಣೀಂದ್ರ ಮತ್ತಿತರರು ಉಪಸ್ಥಿತರಿದ್ದರು.

*ವಿಶಿಷ್ಟರಿಗಾಗಿ ವಿಶಿಷ್ಟ ಮೇಳದಲ್ಲಿ ದಿವ್ಯಾಂಗರಿಗೆ ಪಾನಿಪುರಿ, ಬೇಲ್ ಪುರಿ, ಪಾವ್ ಬಾಜಿ, ತಂಪು ಪಾನೀಯ, ಲಸ್ಸಿ, ಮಜ್ಜಿಗೆ, ಚಕ್ಕುಲಿ, ಉಂಡೆ, ಚಿಕ್ಕಿ, ಚಾಕೊಲೇಟ್, ಕಲ್ಲಂಗಡಿ, ನೆಲಕಡಲೆ, ಸಕ್ಕರೆ ಮಿಠಾಯಿ, ಪೋಡಿ, ಐಸ್ಕ್ಯಾಂಡಿ, ಐಸ್ ಕ್ರೀಂ ಮುಂತಾದ ತಿಂಡಿ ತಿನಿಸುಗಳು, ತಿಲಕ ಇಡುವುದು, ರಿಂಗ್ ಎಸೆಯುವುದು, ಡಬ್ಬಿಗೆ ಗುರಿ, ಕುದುರೆಗೆ ಬಾಲ ಬಿಡಿಸುವುದು, ಬಕೆಟ್‌ಗೆ ಬಾಲ್ ಹಾಕುವುದು,

ಕವಡೆ ಆಟ, ಮೆಹಂದಿ ಹಾಕುವುದು ಮುಂತಾದ ಮನೋರಂಜನಾ ಆಟಗಳು, ಕುದುರೆ, ಒಂಟೆ ಸವಾರಿ, ತಿರುಗುವ ತೊಟ್ಟಿಲು, ಬೇತಾಳ ಕುಣಿತ ಸಹಿತ ಜಾತ್ರೆಯ ಸನ್ನಿವೇಶ ಒದಗಿಸಲಾಯಿತು. ದಿವ್ಯಾಂಗರಿಂದ ಪ್ರತಿಭಾ ಪ್ರದರ್ಶನವೂ ನಡೆಯಿತು.


Tags

Mangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X