ಮಂಗಳೂರು: ಮಾದಕ ವಸ್ತು ಮಾರಾಟ ಆರೋಪ; ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತು (Methylene dioxy methamphetamine) MDMA ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಗಳೂರು ಕದ್ರಿ ನಿವಾಸಿ ಕೌಶಿಕ್ ದೇವಾಡಿಗ(26), ಜಲ್ಲಿಗುಡ್ಡೆ ನಿವಾಸಿ ಇರ್ಷಾದ್ (29) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಇಬ್ಬರು ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಅವರಿಂದ ಒಟ್ಟು 9 ಗ್ರಾಂ ತೂಕದ ರೂ. 45,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 95,500 ಎಂದು ಪೊಲೀಸರು ತಿಳಿಸಿದ್ದು, ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Next Story