ಮಂಗಳೂರು | ಕೆ.ಪಿ.ಟಿ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು : ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇಲ್ಲಿ 2025ನೇ ಸಾಲಿನಲ್ಲಿ ಪ್ರಥಮ ಸೆಮಿಸ್ಟರ್ ಇಂಜಿನಿಯರಿಂಗ್ ಡಿಪ್ಲೊಮಾ ಪೂರ್ಣಾವಧಿಯ ಕೋರ್ಸ್‌ಗಳಿಗೆ ಆನ್‌ಲೈನ್, ಆಫ್‌ಲೈನ್ ಮೂಲಕ ಭರ್ತಿಗೊಂಡು ಉಳಿಕೆಯಾಗಲಿರುವ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಾಲಿಮರ್ ಕೋರ್ಸ್‌ಗೆ ಮೇ 28 ರಿಂದ ಜೂನ್ 4 ರವರೆಗೆ ಹಾಗೂ ಉಳಿದ 7 ಕೋರ್ಸ್‌ಗಳಿಗೆ ಮೇ 31ರಿಂದ ಜೂನ್ 5 ವರೆಗೆ ಅರ್ಜಿಗಳನ್ನು ಸ್ವೀಕರಿಸಿ ಆಫ್‌ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://dtek.karnataka.gov.in ಅಥವಾ dtetech.karnataka.gov.in/tartechnical ಅಥವಾ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಮಂಗಳೂರು ಕಚೇರಿಯ ದೂರವಾಣಿ ಸಂಖ್ಯೆ: 0824-2211636/3516910/3542476 ಸಂಪರ್ಕಿಸಬಹುದು ಎಂದು ಕೆ.ಪಿ.ಟಿ ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.