ಮಂಗಳೂರು ಬೀಚ್ ಉತ್ಸವ: ಮಳಿಗೆ ತೆರೆಯಲು ಅರ್ಜಿ ಆಹ್ವಾನ

ಮಂಗಳೂರು(ಡಿ.28): ತಣ್ಣೀರುಬಾವಿ ಬೀಚ್‍ನಲ್ಲಿ ಕರಾವಳಿ ಉತ್ಸವದ ಪ್ರಯುಕ್ತ ಜನವರಿ 3 ಮತ್ತು 4ರಂದು ಬೀಚ್ ಉತ್ಸವ ನಡೆಯಲಿದ್ದು, ಈ ಉತ್ಸವದಲ್ಲಿ ಆಹಾರ ಮತ್ತು ಇತರ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಈ ಮಳಿಗೆಗಳಲ್ಲಿ ವ್ಯಾಪಾರ ನಡೆಸಲು ಆಸಕ್ತಿಯುಳ್ಳ ವ್ಯಕ್ತಿಗಳು ಅಥವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಬಯಸುವರು ಡಿಸೆಂಬರ್ 31ರ ಸಂಜೆ 5 ಗಂಟೆಯೊಳಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 09644020343/ 9900924713 ಸಂಪರ್ಕಿಸಬಹುದು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





