ಮಂಗಳೂರು | ನಿರಾಶ್ರಿತ ವ್ಯಕ್ತಿಗಳ ಆರೈಕೆ: ಎನ್‌ಜಿಒಗಳಿಂದ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಆಸ್ವಸ್ಥರಾಗಿರುವ ನಿರಾಶ್ರಿತ ವ್ಯಕ್ತಿಗಳ ಆರೈಕೆಗಾಗಿ ತುರ್ತು ಆರೈಕೆ ಮತ್ತು ಚೇತರಿಕೆಗೆ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತಿಯುಳ್ಳ ಸರಕಾರೇತರ ಸಂಸ್ಥೆಗಳಿಂದ ಕರ್ನಾಟಕ ಪಬ್ಲಿಕ್ ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
http://kppp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಜೂನ್ 9ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ಮಾಹಿತಿಗೆ 0824-2951381 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story