ಮಂಗಳೂರು | ಕುಳಾಯಿ ಗ್ರಾಮಸಂಘದಿಂದ ಮಕ್ಕಳ ದಿನಾಚರಣೆ

ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಗ್ರಾಮಸಂಘ ಯುವಕ ಮಂಡಲದ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಕುಳಾಯಿ ಗ್ರಾಮಸಂಘದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮಸಂಘದ ಮಾಜಿ ಅಧ್ಯಕ್ಷ ಕೆ.ಪಿ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. NMPT ನ ಸುರೇಶ್ ಪೂಜಾರಿ, ಸಮಾಜಸೇವಕಿ ಕಸ್ತೂರಿ ಕೆ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಮಮತಾ ಎಸ್., ಶಾರದೆ ಸೇವಾ ಪ್ರತಿನಿಧಿ ಸುಕನ್ಯ ಅವರು ಆತಿಥಿಗಳಾಗಿ ಭಾಗವಹಿಸಿದ್ದರು.
ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆ ಮೋಹಿನಿ ಸ್ವಾಗತಿಸಿದರು. ಬಾಗ್ಯವತಿ ಕಾರ್ಯಕ್ರಮ ನಿರೂಪಿಸಿ, ವಂದನೆ ಸಲ್ಲಿಸಿದರು.
Next Story





