Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಮಾದಕ ವಸ್ತು ಸಾಗಾಟ, ಮಾರಾಟ...

ಮಂಗಳೂರು| ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ವಿದೇಶಿ ಪ್ರಜೆ ಸೇರಿ 6 ಮಂದಿ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ28 Oct 2024 6:59 PM IST
share
ಮಂಗಳೂರು| ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ವಿದೇಶಿ ಪ್ರಜೆ ಸೇರಿ 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪದಲ್ಲಿ ಆರು ಮಂದಿಯನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ, ಬಂಧಿತರಿಂದ ಮಾದಕ ವಸ್ತುಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿರುವ ಘಟನೆ ರವಿವಾರ ವರದಿಯಾಗಿದೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪಣಂಬೂರು ಠಾಣಾ ಪಿಎಸ್‌ಐ ಶ್ರೀಕಲಾ ಕೆ.ಟಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳಾದ ಚಂದನ್ ಮತ್ತು ಶರತ್ ಮತ್ತು ಮಾದಕ ವಸ್ತು ಮಾರಾಟ ಮಾಡಲು ಸಹಕರಿಸಿದ ಇತರ ಆರೋಪಿಗಳಾದ ಮಧುಸೂಧನ ಕೊಂಚಾಡಿ, ಧನುಷ್ ಆಕಾಶ್ ಭವನ, ನೈಜಿರಿಯಾದ ಪ್ರಜೆ ಮೈಕಲ್‌ ಬಾಲಾಜಿ ಮತ್ತು ಮುಖೇಶ್‌ ಕುಮಾರ್ ಎಂಬವರನ್ನು ದಸ್ತಗಿರಿ ಮಾಡಿ ಆರೋಪಿಗಳ ವಶದಲ್ಲಿದ್ದ 11 ಗ್ರಾಮ್ ಕೋಕೇನ್ ಮತ್ತು 30 ಗ್ರಾಂ ತೂಕದ ಎಂಡಿಎಂಎ , ಸ್ಕೂಟರ್ ಮತ್ತು 9 ಮೊಬೈಲ್‌ಗಳನ್ನು ವಶಪಡಿಸಿಕೊಂಡರು. ವಶಪಡಿಸಿಕೊಂಡ ವಸ್ತುಗಳ ಮೌಲ್ಯ 91,000 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ 5 ಮಂದಿ ಮಂಗಳೂರಿನ ನಿವಾಸಿಗಳಾಗಿದ್ದು, ಒಬ್ಬ ಆರೋಪಿ ನೈಜೀರಿಯಾ ದೇಶದವನಾಗಿರುತ್ತಾನೆ. ಆರೋಪಿಗಳೆಲ್ಲರೂ ಕ್ಯಾಟರಿಂಗ್, ಪೈಂಟಿಂಗ್ ಸೇರಿದಂತೆ ಖಾಸಗಿ ಕೆಲಸ ಮಾಡಿಕೊಂಡಿರುವುದಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನಂದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ನಿರ್ದೇಶನ‌ ದಂತೆ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಕೆ ಮಾರ್ಗದರ್ಶನದಲ್ಲಿ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮುಹಮ್ಮದ್ ಸಲೀಂ ಅಬ್ಬಾಸ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ನಿರೀಕ್ಷಕರಾದ ಶ್ರೀಕಲಾ ಕೆ .ಟಿ ಮತ್ತು ಅಪರಾಧ ವಿಭಾಗದ ಸಿಬ್ಬಂದಿ ಎಚ್‌ಸಿಗಳಾದ ಪ್ರೇಮಾನಂದ, ಸತೀಶ್ ಎಮ್ ಆರ್, ಸಯ್ಯದ್ ಇಮ್ತಿಯಾಝ್, ಚೆರಿಯನ್ ಕೆ, ಜೇಮ್ಸ್ ಸಿಪಿಸಿಗಳಾದ ಶಶಿಕುಮಾರ್, ರಾಕೇಶ್ ಎಲ್ ಎಮ್, ಮಂಜುನಾಥ ಹಾಗೂ ಮಂಗಳೂರು ನಗರ ಉತ್ತರ ಉಪ ವಿಭಾಗದ ಆ್ಯಂಟಿ ಡ್ರಗ್ಸ್ ಸ್ಕ್ವಾಡ್‌ನ ಪಿಎಸ್‌ಐ ರಾಘವೇಂದ್ರ ಎಮ್ ನಾಯ್ಕ ಮತ್ತು ಸಿಬ್ಬಂದಿ ಸುನೀಲ್ ಎಚ್ ಎಂ, ವಿನಾಯಕ್, ಬಸವರಾಜ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X