Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಸೆ.29ರಂದು 'ಜನಪ್ರಿಯ ಮಲ್ಟಿ...

ಮಂಗಳೂರು| ಸೆ.29ರಂದು 'ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Sept 2024 7:33 PM IST
share
ಮಂಗಳೂರು|  ಸೆ.29ರಂದು ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ಮಂಗಳೂರು, ಸೆ.28: ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ 'ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ'ಯ ಉದ್ಘಾಟನಾ ಸಮಾರಂಭವು ಸೆ.29ರಂದು ಸಂಜೆ 4 ಗಂಟೆಗೆ ನಡೆಯಲಿದೆ.

ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಲಿದ್ದಾರೆ.

ಆಸ್ಪತ್ರೆಯ ವಿಶೇಷ ವಿಭಾಗ ‘ಬರ್ತ್ ಆ್ಯಂಡ್ ಬ್ಲೂಮ್’: ತಾಯಿ ಮತ್ತು ಮಗುವಿನ ವಿಶೇಷ ಆರೈಕೆ ವಿಭಾಗವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್ ರುದ್ರಪ್ಪ ಪಾಟೀಲ್, ಉದ್ಘಾಟಿಸುವರು. ಶಾಸಕ ವೇದವ್ಯಾಸ್‌ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಚೇಯರ್‌ಮೆನ್ ಡಾ. ಅಬ್ದುಲ್ ಬಶೀರ್ ವಿ.ಕೆ ಮತ್ತು ನಿರ್ದೇಶಕರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ಕಾಸರಗೋಡು ಸಂಸದ ರಾಜಮೋಹನ್‌ ಉನ್ನಿತ್ತಾನ್, ಹಾಸನ ಸಂಸದ ಶ್ರೇಯಸ್ ಪಾಟೀಲ್, ಹೊಳೆನರಸೀಪುರ ಶಾಸಕ ಎಚ್. ಡಿ ರೇವಣ್ಣ, ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ , ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ , ವಿಧಾನ ಪರಿಷತ್ ಸದಸ್ಯ ಐವನ್‌ ಡಿಸೋಜ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಎಂ ಫಾರೂಕ್ , ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು, ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್‌ಕೇರ್ ಕೌನ್ಸಿಲ್ ಚೆಯರ್‌ಮ್ಯಾನ್ ಯು ಟಿ ಇಫ್ತಿಕಾರ್ ಅಲಿ , ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ವಿನಯಕುಮಾರ್ ಸೊರಕೆ ಮಾಜಿ ಕೇಂದ್ರ ಸಚಿವ ಸಿ.ಎಂ ಇಬ್ರಾಹೀಂ , ವಿವಿಧ ಕ್ಷೇತ್ರಗಳ ಗಣ್ಯರು, ಖ್ಯಾತ ವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಡಾ. ಅಬ್ದುಲ್ ಬಶೀರ್ ವಿ.ಕೆ ಇವರ ನೇತೃತ್ವದ ಜನಪ್ರಿಯ ಸಮೂಹ ಸಂಸ್ಥೆ ಅಧೀನದ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಲ್ಲ ಆರೋಗ್ಯ ಸಮಸ್ಯೆಗಳಿಗೆ ತುರ್ತು ಪರಿಹಾರ ಒದಗಿಸಲು ನುರಿತ ವೈದ್ಯಕೀಯ ತಜ್ಞರು ಸಿದ್ದರಾಗಿದ್ದಾರೆ. ಕರ್ನಾಟಕದ ವೈದ್ಯಕೀಯ ಕ್ಷೇತ್ರದಲ್ಲಿ ಮತ್ತು ವಿಶ್ವದರ್ಜೆಯ ವೈದ್ಯಕೀಯ ಸೇವೆಗಳೊಂದಿಗೆ ರೋಗಿಗಳ ಆರೈಕೆಯನ್ನು ಮಾಡಲು ಸಿದ್ಧಗೊಂಡಿದೆ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ. ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ 130 ಬೆಡ್ ವ್ಯವಸ್ಥೆಯನ್ನು ಹೊಂದಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ. ಪರಿಣಿತ ವೈದ್ಯರಿಂದ ದಿನದ 24ಗಂಟೆ ಸೇವೆಗಳು ಲಭ್ಯವಾಗಲಿದ್ದು, 24 ಗಂಟೆಗಳ ಕಾಲವೂ ತುರ್ತುಚಿಕಿತ್ಸಾ ವಿಭಾಗ ಕಾರ್ಯಾಚರಿಸಲಿದೆ.

*ಬರ್ತ್ ಆ್ಯಂಡ್ ಬ್ಲೂಮ್ : ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶೇಷವಾದ ‘ಬರ್ತ್ ಬ್ಲೂಂ’ ವಿಭಾಗವಿದೆ. ಇದರಲ್ಲಿ 24 ಗಂಟೆಗಳ ಕಾಲ ಸೇವೆ ಲಭ್ಯವಿರಲಿದೆ. ಸಹಜ ಹೆರಿಗೆ, ಶಸ್ತ್ರ ಚಿಕಿತ್ಸೆ, ಎನ್‌ಐಸಿಯು ಸೌಲಭ್ಯವಿದ್ದು, ತಾಯಿ-ಮಗುವಿನ ಉತ್ತಮ ಆರೈಕೆಗೆ ವ್ಯವಸ್ಥೆಯಿದೆ.

ವಿವಿಧ ವಿಭಾಗಗಳ ಸೇವೆಗಳು: ಜನರಲ್ ಮೆಡಿಸಿನ್, ಯುರೋಲಜಿ, ಆರ್ಥೋ, ಡರ್ಮಟಾಲಜಿ, ಪಲ್ಮನಾಲಜಿ, ಕಾರ್ಡಿಯೋಲಜಿ, ನ್ಯೂರೋಲಜಿ, ಹೆಮ್ಟಾಲಜಿ, ಗ್ಯಾಸ್ಟ್ರೋಎಂಟರಾಲಜಿ, ಗೈನಾಕಾಲಜಿ, ರೇಡಿಯಾಲಜಿ, ನೆಫ್ರೋಲಜಿ, ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಪ್ಲಾಂಟೇಷನ್, ಡಯಾಬಿಟಿಕ್ ಕ್ಲಿನಿಕ್, ಕ್ರಿಟಿಕಲ್ ಕೇರ್, ಗ್ಯಾಸ್ಟ್ರೋಎಂಟರಾಲಜಿ ಸೆಂಟರ್, ಫಿಸಿಯೋಥೆರಪಿ, ಅಥ್ಯಾಧುನಿಕ ಪ್ರಯೋಗಾಲಯ, ಎಕ್ಸ್‌ರೇ, ಸಿಟಿ ಸ್ಕ್ಯಾನ್, ಇಎನ್‌ಟಿ, ಡೇಕೇರ್, ಶಸ್ತ್ರ ಚಿಕಿತ್ಸಾ ಕೊಠಡಿ ಸೇರಿದಂತೆ ವಿವಿಧ ಸೇವೆಗಳು ಲಭ್ಯವಾಗಲಿವೆ.

*ಸರಕಾರಿ ಮತ್ತು ಖಾಸಗಿ ಸ್ಕೀಂ ವ್ಯವಸ್ಥೆ: ಜನಪ್ರಿಯ ಆಸ್ಪತ್ರೆ ಬಡ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಎಲ್ಲಾ ರೀತಿಯ ಸರಕಾರಿ ಮತ್ತು ಖಾಸಗಿ ಸ್ಕೀಂಗಳು, ಇನ್ಸ್ಯೂರೆನ್ಸ್‌ಗಳ ಸವಲತ್ತುಗಳನ್ನು ನೀಡಲಿದೆ. ಜನಪ್ರಿಯ ಫೌಂಡೇಶನ್ ಭಾಗವಾಗಿರುವ ಹಾಸನದ ‘ಜನಪ್ರಿಯ ಆಸ್ಪತ್ರೆ’ಯು ಅತಿ ಹೆಚ್ಚು ಸರಕಾರಿ ಸ್ಕೀಂ ಸೌಲಭ್ಯಗಳನ್ನು ನೀಡಿರುವ ಸಂಸ್ಥೆ ಎಂಬ ಹೆಸರನ್ನು ಗಳಿಸಿಕೊಂಡಿದೆ ಎಂದು ಆಸ್ಪತ್ರೆಯ ನಿರ್ದೇಶಕರು ಮತ್ತು ಸಿಇಒ ಡಾ. ಕಿರಾಶ್ ಪರ್ತಿಪ್ಪಾಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X