ಮಂಗಳೂರು: ಲ್ಯಾಂಡ್ ಟ್ರೇಡ್ಸ್ ನ ಅದೀರಾ ವಾಣಿಜ್ಯ ಮತ್ತು ವಸತಿ ಸಮುಚ್ಚಯ ಉದ್ಘಾಟನೆ

ಮಂಗಳೂರು, ನ.19: ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ. ಸಂಸ್ಥೆ ನಗರದ ಉರ್ವ ಶ್ರೀ ಮಾರಿಯಮ್ಮ ದೇವಾಲಯ ರಸ್ತೆಯ ಬಳಿ ನಿರ್ಮಿಸಿರುವ ಲ್ಯಾಂಡ್ ಟ್ರೇಡ್ಸ್ ಅದೀರಾ ವಾಣಿಜ್ಯ ಮತ್ತು ವಸತಿ ಸಮುಚ್ಚಯ ರವಿವಾರ ಉದ್ಘಾಟನೆಗೊಂಡಿತು.
ಅದೀರಾ ವಾಣಿಜ್ಯ ಮತ್ತು ವಸತಿ ಸಮುಚ್ಚಯವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ಜನ ಸ್ನೇಹಿಯಾಗಿ ನಗರವಾಗಿ ಬೆಳೆಯಬೇಕಾಗಿದೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಸಾರ್ವಜನಿಕ ಸೇವೆಗೆ ತಂತ್ರಜ್ಞಾನ ಬಳಸಿಕೊಂಡಿರುವುದು ಶ್ಲಾಘನೀಯ. ಬೆಳೆಯುತ್ತಿರುವ ಮಂಗಳೂರಿಗೆ ಲ್ಯಾಂಡ್ ಟ್ರೇಡ್ಸ್ ಉತ್ತಮ ಕಟ್ಟಡಗಳ ಮೂಲಕ ಕೊಡುಗೆಗಳನ್ನು ನೀಡುತ್ತಿದೆ ಎಂದು ಶ್ಲಾಘಿಸಿದರು.
ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಮಂಗಳೂರು ಸುಂದರ ನಗರವಾಗಿ ಬೆಳೆಯಲು ಇಲ್ಲಿನ ಪ್ರಮುಖ ಕಟ್ಟಡ ನಿರ್ಮಾಣ ಸಂಸ್ಥೆಗಳ ಪ್ರಮುಖ ಕೊಡುಗೆಗಳಿವೆ. ಈ ನಿಟ್ಟಿನಲ್ಲಿ ಲ್ಯಾಂಡ್ ಟ್ರೇಡ್ಸ್ ಮಹತ್ವದ ಕೊಡುಗೆ ನೀಡಿರುವುದು ಶ್ಲಾಘನೀಯ ಎಂದು ಶುಭ ಹಾರೈಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಮಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಹಂತದಲ್ಲಿ ನಗರಕ್ಕೆ ಮುಕುಟ ಪ್ರಾಯವಾದ ಕಟ್ಟಡಗಳನ್ನು ನಿರ್ಮಿಸಿ ಕೊಡುಗೆ ನೀಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು
ಮನಪಾ ಸದಸ್ಯ ಗಣೇಶ್ ಕುಲಾಲ್, ಕರ್ಣಾಟಕ ಬ್ಯಾಂಕ್ ನ ಮಹಾ ಪ್ರಬಂಧಕ ರವಿಚಂದ್ರನ್, ಭೂ ಮಾಲಕ ಯು.ಚಂದ್ರ ಹಾಸ, ಇಂಜಿನಿಯರ್ ಗೋಕುಲ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.
ಲ್ಯಾಂಡ್ ಟ್ರೇಡ್ಸ್ ಸಂಸ್ಥೆಯ ಮಾಲಕ ಶ್ರೀನಾಥ ಹೆಬ್ಬಾರ್ ಸ್ವಾಗತಿಸಿದರು. ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ರಮಿಟ್ ಸಿದ್ಧಕಟ್ಟೆ ವಂದಿಸಿದರು.







