Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ವೆನ್ಲಾಕ್ ನಲ್ಲಿ 'ಕರುಣೆಯ...

ಮಂಗಳೂರು: ವೆನ್ಲಾಕ್ ನಲ್ಲಿ 'ಕರುಣೆಯ ತೊಟ್ಟಿಲು' ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ21 Sept 2025 4:16 PM IST
share
ಮಂಗಳೂರು: ವೆನ್ಲಾಕ್ ನಲ್ಲಿ ಕರುಣೆಯ ತೊಟ್ಟಿಲು ಉದ್ಘಾಟನೆ

ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರವಿವಾರ ಉದ್ಘಾಟಿಸಿ, ಶುಭ ಹಾರೈಸಿದರು.

ಎಂ.ಫೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ಮಾತನಾಡಿ, ಟ್ರಸ್ಟ್ ಸ್ಥಾಪನೆಯಾಗಿ ಸುಮಾರು 12 ವರ್ಷಗಳಾಗಿದ್ದು, ಎಂಟು ವರ್ಷಗಳಿಂದ ನಿರಂತರ ವೆನ್ಲಾಕ್ ಆಸ್ಪತ್ರೆ ಒಳರೋಗಿಗಳ ಜೊತೆಗಾರರಿಗೆ ರಾತ್ರಿಯ ಊಟ ವಿತರಿಸುತ್ತಿದೆ. ದಾನಿಗಳ ನೆರವು ಮತ್ತು ಟ್ರಸ್ಟಿಗಳ ಸಹಾಯದಿಂದ ನಡೆಯುವ 'ಕಾರುಣ್ಯ ಯೋಜನೆ'ಯನ್ನು ನ.1ರಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೂ ವಿಸ್ತರಿಸಲಾಗುತ್ತಿದೆ ಎಂದರು.

ಇದೀಗ ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸ ಕಲ್ಪನೆಯಾಗಿ ಕ್ಲೋತ್ ಬ್ಯಾಂಕ್ ಆರಂಭಿಸಲಾಗಿದೆ. ಸಾರ್ವಜನಿಕರು ಹೊಸದಾಗಿ ಖರೀದಿಸಿದ ಅಥವಾ ಬಳಕೆ ಮಾಡಿದ ಶುಭ್ರ ಬಟ್ಟೆಗಳನ್ನು ಇಲ್ಲಿ ತಂದು ಇಡಬಹುದು. ಇದನ್ನು ಅಗತ್ಯವಿರುವ ರೋಗಿಗಳು ಅಥವಾ ಅವರ ಜತೆಗಾರರು ಕೊಂಡೊಯ್ಯಲಿದ್ದಾರೆ ಎಂದು ಅವರು ಹೇಳಿದರು.

ಎಂ.ಫ್ರೆಂಡ್ಸ್ ಸ್ಥಾಪಕ ರಶೀದ್ ವಿಟ್ಲ ಮಾತನಾಡಿ, ವೆನ್ಲಾಕ್ ಆಸ್ಪತ್ರೆಯ ಡಿಎಂಒ ಅವರ ಮನವಿ ಮೇರೆಗೆ ಕ್ಲೋತ್ ಬ್ಯಾಂಕ್ ಆರಂಭಿಸಿದ್ದು, ಅದರ ಖರ್ಚು ವೆಚ್ಚವನ್ನು ನಮ್ಮ ಟ್ರಸ್ಟಿ ಶರೀಫ್ ವೈಟ್ಸ್ಟೋನ್ ಭರಿಸಿದ್ದಾರೆ. ಜನರು ಉತ್ತಮ ದರ್ಜೆಯ ಬಟ್ಟೆ ತಂದು ಕೊಟ್ಟು ಸಹಕರಿಸಬೇಕು. ಇಲ್ಲಿಯ ಸಿಬ್ಬಂದಿ ಅವುಗಳನ್ನು ಅಗತ್ಯವಿರುವವರಿಗೆ ವಿತರಿಸಲಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ವೆನ್ಲಾಕ್ ಆಸ್ಪತ್ರೆ ಅಧೀಕ್ಷಕ ಡಾ.ಡಿ.ಎಸ್.ಶಿವಪ್ರಕಾಶ್, ಆರ್ಎಂಒ ಡಾ.ಸುಧಾಕರ್, ಕೆಎಂಸಿ ಆಸ್ಪತ್ರೆ ಡೀನ್ ಡಾ.ಉನ್ನಿಕೃಷ್ಣನ್, ಜಿಪಂ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ., ಮಾಜಿ ಕಾರ್ಪೊರೇಟರ್ ಎ.ಸಿ.ವಿನಯರಾಜ್, ಎಂ.ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರೆ, ಟ್ರಸ್ಟಿಗಳಾದ ಮುಹಮ್ಮದ್ ಹನೀಫ್ ಗೋಳ್ತಮಜಲು, ಅಬೂಬಕರ್ ಕೆ., ಅಬೂಬಕರ್ ಪುತ್ತು, ಅನ್ವರ್ ಹುಸೇನ್, ಇಬ್ರಾಹೀಂ ಮೊಯ್ದಿನಬ್ಬ ನಂದಾವರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಸಲೀಂ ಮಕ್ಕಾ, ಡಿ.ಎಂ.ರಶೀದ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X