Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾಕಿಸ್ತಾನಕ್ಕೆ ಚೀನಾ, ಅಮೆರಿಕಾ...

ಪಾಕಿಸ್ತಾನಕ್ಕೆ ಚೀನಾ, ಅಮೆರಿಕಾ ಬೆಂಬಲದಿಂದ ಭಯೋತ್ಪಾದನಾ ಕೃತ್ಯಗಳಿಗೆ ಅಂತ್ಯವಿಲ್ಲ: ಡಾ. ಶ್ರೀರಾಮ್ ಸುಂದರ್ ಚೌಲಿಯಾ

ವಾರ್ತಾಭಾರತಿವಾರ್ತಾಭಾರತಿ11 Jan 2026 11:30 PM IST
share
ಪಾಕಿಸ್ತಾನಕ್ಕೆ ಚೀನಾ, ಅಮೆರಿಕಾ ಬೆಂಬಲದಿಂದ ಭಯೋತ್ಪಾದನಾ ಕೃತ್ಯಗಳಿಗೆ ಅಂತ್ಯವಿಲ್ಲ: ಡಾ. ಶ್ರೀರಾಮ್ ಸುಂದರ್ ಚೌಲಿಯಾ

ಮಂಗಳೂರು: ‘ಭಯೋತ್ಪಾದನೆ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತ ಅದೆಷ್ಟೇ ಪ್ರಯತ್ನಪಟ್ಟರೂ, ಅದು ಮುಂದುವರೆಯುತ್ತಲೇ ಇರುತ್ತದೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೇರಿಕಾ ಮತ್ತು ಚೀನಾದ ಬೆಂಬಲವಿದೆ. ನಾವು ಇನ್ನಷ್ಟು ರಕ್ತಪಾತಕ್ಕೆ ತಯಾರಾಗಬೇಕು’ ಎಂದು ಪ್ರೊ. ಡಾ. ಶ್ರೀರಾಮ್ ಸುಂದರ್ ಚೌಲಿಯಾ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ಲಿಟ್ ಫೆಸ್ಟ್ ನ ಎಂಟನೇ ಆವೃತ್ತಿಯಲ್ಲಿ ದೇಶದ ಜಾಗತಿಕ ಸಂಬಂಧಗಳ ಕುರಿತಾಗಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರವನ್ನು ಇನ್ನಷ್ಟು ಮುಂದುವರೆಸಬೇಕಿತ್ತು, ಅರ್ಧಕ್ಕೆ ನಿಲ್ಲಿಸಬಾರದಾಗಿತ್ತು ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದರು. ನಮ್ಮ ಉದ್ದೇಶ ಯುದ್ಧ ಮಾಡುವುದಾಗಿರಲಿಲ್ಲ. ಭಯೋತ್ಪಾದನೆಗೆ ಉತ್ತರ ಕೊಡಬೇಕಿತ್ತು. ನಮ್ಮನ್ನು ಪ್ರಚೋದಿಸಿದರೆ ನಾವು ಸುಮ್ಮನೆ ಬಿಡುವುದಿಲ್ಲ ಎಂಬ ಸಂದೇಶ ರವಾನಿಸಬೇಕಿತ್ತು. ಆ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದೇವೆ. ಆದರೂ ಭಯೋತ್ಪಾದಕ ಚಟುವಟಿಕೆಗಳು ಮತ್ತೆ ಮರುಕಳಿಸುತ್ತವೆ. ನಾವೆಷ್ಟೇ ತಡೆಯುವುದಕ್ಕೆ ಪ್ರಯತ್ನ ಮಾಡಿದರೂ ಮುಂದಿನ ದಿನಗಳಲ್ಲಿ ಇನ್ನಷ್ಟು ರಕ್ತಪಾತಗಳು, ದುರಂತಗಳು ನಡೆಯುತ್ತವೆ. ಏಕೆಂದರೆ, ಪಾಕಿಸ್ತಾನಕ್ಕೆ ಅಮೇರಿಕಾ ಮತ್ತು ಚೀನಾದ ಬೆಂಬಲವಿದೆ. ಅಂತಹ ರಕ್ತಪಾತಗಳಿಗೆ ನಾವು ಮುಂದಿನ ದಿನಗಳಲ್ಲಿ ಇನ್ನಷ್ಟು ತಯಾರಾಗಬೇಕಿದೆ’ ಎಂದರು.

‘ಬಲಿಷ್ಠ ದೇಶಗಳು ಒಂದು ವ್ಯವಸ್ಥೆಯನ್ನು ಹಾಳು ಮಾಡುತ್ತಿವೆ ಎಂದ ಅವರು, ಕೆಲವು ವರ್ಷಗಳಿಂದಿತ್ತೀಚೆಗೆ ವ್ಯವಸ್ಥೆ ಕುಸಿಯುತ್ತಿರುವುದನ್ನು ನೋಡಬಹುದು. ರಷ್ಯಾ-ಉಕ್ರೇನ್ ಯುದ್ಧ ಮೂರು ವರ್ಷಗಳಿಂದ ನಡೆಯುತ್ತಿದೆ. ಅದರಿಂದ ಸಾಕಷ್ಟು ಪ್ರಾಣಹಾನಿಯಾಗಿದೆ. ಆದರೂ ಯುದ್ಧ ನಿಂತಿಲ್ಲ. ನಂತರ ಇಸ್ರೇಲ್ ಮತ್ತು ಇರಾನ್ ನಡುವೆ ಕದನ ವಾಯಿತು. ಈಗ ಅಮೇರಿಕಾ, ವೆನೆಜುವೆಲಾ ಮೇಲೆ ಬೇರೆ ರೀತಿಯಲ್ಲಿ ದಾಳಿ ಮಾಡಿದೆ. ಬಲಿಷ್ಠರು ಏನು ಮಾಡಿದರೂ ಸರಿ ಎನ್ನುವಂತಾಗಿದೆ. ದುರ್ಬಲರಿಗೆ ಯಾವುದೇ ಸುರಕ್ಷತೆ ಇಲ್ಲ ಎನ್ನುವಂತಾಗಿದೆ. ದೊಡ್ಡ ಮೀನುಗಳು ಸಣ್ಣ ಮೀನುಗಳನ್ನು ತಿನ್ನುತ್ತಿವೆ. ಸಾಮ್ರಾಜ್ಯಶಾಹಿ ವರ್ಷನೆ ಹೆಚ್ಚಾಗುತ್ತಿದೆ. ನಾವು ಇದೆಲ್ಲದರಿಂದ ದೂರ ಉಳಿದು ಅಭಿವೃದ್ಧಿಯತ್ತ ಗಮನಹರಿಸಬೇಕು. ಯುದ್ಧವನ್ನು ತಪ್ಪಿಸಿ, ನಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಭಾರತ ಹಲವು ಒತ್ತಡಗಳ ನಡುವೆಯೂ ಅಸ್ತಿತ್ವ ಉಳಿಸಿಕೊಂಡಿದೆ. ವಿಶ್ವಸಂಸ್ಥೆಯ ಖಾಯಂ ರಾಯಭಾರಿ ಟಿ.ಎಸ್. ತಿರುಮೂರ್ತಿ ಮಾತನಾಡಿ, ‘ನಾವು ಇಂದು ಹಲವು ಸಮಸ್ಯೆಗಳ ನಡುವೆಯೂ ನಾಲ್ಕನೇ ದೊಡ್ಡ ಆರ್ಥಿಕತೆಯಾಗಿ ಬೆಳೆದಿದ್ದೇವೆ. ಅಮೇರಿಕಾದ ಹಲವು ಒತ್ತಡಗಳ ನಡುವೆಯೂ ನಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದ್ದೇವೆ. ಬಹಳಷ್ಟು ದೇಶಗಳು ಒತ್ತಡ ತಾಳಲಾರದೆ ಮಣಿದಿವೆ. ತಮಗೆ ಸಿಗುತ್ತಿರುವ ಹಲವು ಸವಲತ್ತುಗಳು ತಪ್ಪಬಹುದು ಎಂಬ ಭಯದಿಂದ ತಲೆ ಬಾಗಿವೆ. ಆದರೆ, ಭಾರತ ಮಾತ್ರ ಯಾವುದೇ ಒತ್ತಡಕ್ಕೆ ಬಗ್ಗಿಲ್ಲ. ಅಮೇರಿಕಾ ಬೇರೆ ರಾಷ್ಟ್ರಗಳಿಗೆ ಬೆದರಿಕೆ ಹಾಕಿ ತಮ್ಮ ದೃಷ್ಟಿಕೋನವನ್ನು ಒಪ್ಪಿಕೊಳ್ಳುವಂತೆ ಮಾಡುತ್ತಿದೆ. ಆದರೆ, ಭಾರತ ಮಾತ್ರ ಚಾತುರ್ಯ ದಿಂದ ಅದನ್ನೆಲ್ಲಾ ತಪ್ಪಿಸಿಕೊಂಡು, ಬೆಳವಣಿಗೆಯತ್ತ ಗಮನಹರಿಸುತ್ತಿದೆ’ ಎಂದರು. ವಿಜೇತ್ ಕನಹಳ್ಳಿ ಸಂವಾದ ನಿರ್ವಹಿಸಿದರು.

Tags

MangaloreLitFest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X